ಬಿಜೆಪಿಯನ್ನು ಅಧಿಕಾರದಿಂದ ದೂರವಿಡಲು ಜೆಡಿಎಸ್ ಗೆ ಬೆಂಬಲ : ಸಿದ್ದು

ಮಂಡ್ಯ:

      ಬಿಜೆಪಿಯನ್ನು ಅಧಿಕಾರದಿಂದ ದೂರವಿಡುವ ಸಲುವಾಗಿ ಜೆಡಿಎಸ್‌ಗೆ ಬೇಷರತ್ ಬೆಂಬಲ ನೀಡುತ್ತಿದ್ದೇವೆ, ಎಂದು ಮಾಜಿ ಸಿಎಂ, ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

      ಮಂಡ್ಯದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡುತ್ತಿದ್ದ ಅವರು, ಕೇಂದ್ರದಲ್ಲಿ ಬಿಜೆಪಿ‌ ಅಧಿಕಾರಕ್ಕೆ‌ ಬಂದ‌ ಮೇಲೆ ಆರ್ಥಿಕ‌ ಅಸಮತೋಲನ‌ ತಾಂಡವಾಡುತ್ತಿದೆ. ಸಾಮಾಜಿಕ ನ್ಯಾಯವಿಲ್ಲ, ಹೀಗಾಗಿ ಉಪ ಚುನಾವಣೆಯಲ್ಲಿ ಜೆಡಿಎಸ್‌ ಜೊತೆ ಮೈತ್ರಿ ಮಾಡಿಕೊಳ್ಳಲು ನಿರ್ಧರಿಸಿದೆವು ಎಂದಿದ್ದಾರೆ.

      ಐದೂ ಉಪ ಚುನಾವಣೆಯಲ್ಲಿ ‌ಮೈತ್ರಿ ಅಭ್ಯರ್ಥಿಗಳು ಗೆದ್ದೆ ಗೆಲ್ತಾರೆ. ಮಂಡ್ಯದಲ್ಲಿ ಎಲ್.ಆರ್.ಶಿವರಾಮೇಗೌಡ ಕೂಡ ನೂರಕ್ಕೆ ನೂರು ಗೆಲ್ತಾರೆ. ಆದರೆ ಕಾಂಗ್ರೆಸ್ ಬೆಂಬಲ‌ ನೀಡಲ್ಲ ಅಂತ ಸುಳ್ಳು ಸುದ್ದಿ ಹರಡಿಸಿದ್ದಾರೆ. ಹೈಕಮಾಂಡ್ ಆದೇಶದಂತೆ ಎಲ್ಲರೂ ನಡೆಯಬೇಕು. ಬಹುತೇಕ ಎಲ್ಲಾ ಮಂಡ್ಯ ಕಾಂಗ್ರೆಸ್ ನಾಯಕರು ಬಂದಿದ್ದಾರೆ. ನಾವೆಲ್ಲರೂ ಒಗ್ಗಟ್ಟಾಗಿ ಗೆಲ್ಲಿಸುತ್ತೇವೆ. ನಮ್ಮಲ್ಲಿ ಯಾವುದೇ ಗೊಂದಲವಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದರು.

     ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ