ನವದೆಹಲಿ:
ಶಂಭು ಗಡಿಯಲ್ಲಿ ರೈತರ ಪ್ರತಿಭಟನೆಯ ಸಮಸ್ಯೆ ಪರಿಹರಿಸಲು ಮಾರ್ಗೋಪಾಯಗಳನ್ನು ಕಂಡುಕೊಳ್ಳುವಂತೆ ಪಂಜಾಬ್ ಮತ್ತು ಹರಿಯಾಣ ರಾಜ್ಯಗಳಿಗೆ ಸುಪ್ರೀಂ ಕೋರ್ಟ್ ಬುಧವಾರ ಸೂಚಿಸಿದೆ.
ಪಂಜಾಬ್-ಹರಿಯಾಣ “ಸರ್ಕಾರಗಳು ರೈತರ ಪ್ರತಿಭಟನೆ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕು ಮತ್ತು ರೈತರೊಂದಿಗೆ ಮಾತುಕತೆ ನಡೆಸುವ ಸ್ವತಂತ್ರ ವ್ಯಕ್ತಿಗಳ ಸಮಿತಿ ರಚಿಸುವಂತೆ ನ್ಯಾಯಮೂರ್ತಿ ಸೂರ್ಯ ಕಾಂತ್, ನ್ಯಾಯಮೂರ್ತಿ ದೀಪಂಕರ್ ದತ್ತಾ ಮತ್ತು ಉಜ್ಜಲ್ ಭುಯಾನ್ ನೇತೃತ್ವದ ಸುಪ್ರೀಂ ಕೋರ್ಟ್ ತ್ರಿಸದಸ್ಯ ಪೀಠ ಹೇಳಿದೆ.
ನ್ಯಾಯಯುತ, ನ್ಯಾಯಸಮ್ಮತ ಮತ್ತು ಪ್ರತಿಯೊಬ್ಬರ ಹಿತಾಸಕ್ತಿಗಳಿಗೆ ಅನುಗುಣವಾಗಿ ಅವರ ಬೇಡಿಕೆಗಳಿಗೆ ಕಾರ್ಯಸಾಧ್ಯವಾದ ಪರಿಹಾರವನ್ನು ಕಂಡುಕೊಳ್ಳಲು ಗಣ್ಯ ವ್ಯಕ್ತಿಗಳನ್ನು ಒಳಗೊಂಡ ಸಮಿತಿ ರೈತರು ಮತ್ತು ಸರ್ಕಾರದೊಂದಿಗೆ ಮಾತುಕತೆ ನಡೆಸಬಹುದು. “ರೈತರೊಂದಿಗೆ ಮಾತುಕತೆ ನಡೆಸಲು ನೀವು ಕೆಲವು ಕ್ರಮಗಳನ್ನು ತೆಗೆದುಕೊಳ್ಳಬೇಕು. ಇಲ್ಲದಿದ್ದರೆ ಅವರು ದೆಹಲಿಗೆ ಏಕೆ ಬರುತ್ತಾರೆ? ಎಂದು ಸುಪ್ರೀಂ ಕೋರ್ಟ್ ಪ್ರಶ್ನಿಸಿದೆ.