ನವದೆಹಲಿ:
ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಮಧ್ಯಂತರ ಜಾಮೀನು ನೀಡಿರುವ ಸುಪ್ರೀಂ ಕೋರ್ಟ್ ತೀರ್ಪಿನ ಬಗ್ಗೆ, ವಿಶೇಷ ಆತಿಥ್ಯ ನೀಡಲಾಗಿದೆ ಎಂದು ಜನ ಭಾವಿಸಿರುವುದಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಬುಧವಾರ ಹೇಳಿದ್ದಾರೆ.
ಕೇಜ್ರಿವಾಲ್ ಪ್ರಕರಣದ ತೀರ್ಪು ಸಾಮಾನ್ಯ ನ್ಯಾಯಾಂಗ ಆದೇಶವಲ್ಲ ಎಂದು ಎಎನ್‌ಐಗೆ ನೀಡಿದ ಸಂದರ್ಶನದಲ್ಲಿ ಕೇಂದ್ರ ಗೃಹ ಸಚಿವರು ಹೇಳಿದ್ದಾರೆ.
“ಕಾನೂನನ್ನು ಅರ್ಥೈಸುವ ಹಕ್ಕು ಸುಪ್ರೀಂ ಕೋರ್ಟ್‌ಗೆ ಇದೆ. ಇದು ವಾಡಿಕೆಯ ತೀರ್ಪು ಅಲ್ಲ ಎಂದು ನಾನು ನಂಬುತ್ತೇನೆ. ಈ ದೇಶದ ಬಹಳಷ್ಟು ಜನರು ದೆಹಲಿ ಸಿಎಂಗೆ ವಿಶೇಷ ಆತಿಥ್ಯ ನೀಡಲಾಗಿದೆ ಎಂದು ನಂಬುತ್ತಾರೆ” ಎಂದು ಶಾ ತಿಳಿಸಿದ್ದಾರೆ.