ಅಯೋಧ್ಯೆ ಭೂ ವಿವಾದ ವಿಚಾರಣೆ : ಜನವರಿಗೆ ಮುಂದೂಡಿಕೆ

 ನವದೆಹಲಿ:

       ಅಯೋಧ್ಯೆಯ ವಿವಾದಿತ ಭೂಪ್ರದೇಶವನ್ನು ಹಂಚಿಕೆ ಮಾಡಿದ್ದರ ವಿರುದ್ಧ ಸಲ್ಲಿಕೆಯಾಗಿರುವ ಮೇಲ್ಮನವಿ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮುಂದೂಡಿದೆ.  2019 ರ ಜನವರಿ ತಿಂಗಳಿನಲ್ಲಿ ನಿಗದಿಗೊಳಿಸುವುದಾಗಿ ಸುಪ್ರೀಂ ಕೋರ್ಟ್ ಹೇಳಿದೆ. ಜನವರಿ ಮೊದಲ ವಾರದಿಂದ ನಿರಂತರವಾಗಿ ವಿಚಾರಣೆ ನಡೆಸೋದಾಗಿ ತಿಳಿಸಿದೆ.

      2010 ರಲ್ಲಿ ಅಯೋಧ್ಯೆ ವಿವಾದಿತ ಭೂಪ್ರದೇಶವನ್ನು ನಿರ್ಮೋಹಿ ಅಖಾಡ, ರಾಮ ಲಲ್ಲಾ ಮತ್ತು ಸುನ್ನಿ ವಕ್ಫ್‌ ಮಂಡಳಿಗೆ ಸಮನಾಗಿ ಹಂಚಿಕೆ ಮಾಡಿ  ಮೂರು ಭಾಗಗಳಾಗಿ ವಿಂಗಡಿಸಿ  ಅಲಹಾಬಾದ್ ಹೈಕೋರ್ಟ್ ತೀರ್ಪು ನೀಡಿತ್ತು. ಈ ತೀರ್ಪನ್ನು ವಿರೋಧಿಸಿ ಸಲ್ಲಿಸಲಾದ ಅರ್ಜಿಯ ವಿಚಾರಣೆಯನ್ನು ಮುಖ್ಯನ್ಯಾಯಮೂರ್ತಿ ರಂಜನ್ ಗೊಗೊಯ್ ನೇತೃತ್ವದ ತ್ರಿಸದಸ್ಯಪೀಠ ಮುಂದೂಡಿದೆ. 

      ದೀಪಾವಳಿ ಬಳಿಕ ವಿಚಾರಣೆ ದಿನಾಂಕ ನಿಗದಿ ಮಾಡಿ ಎಂದು ಕೇಂದ್ರ ಸರ್ಕಾರದ ಸಾಲಿಸಿಟರ್ ಜನರಲ್ ತುಷಾರ್ ಕೋರಿದ್ದರು. ಆದರೆ, ಜನವರಿಯಲ್ಲೇ ದಿನಾಂಕ ನಿಗದಿ ಮಾಡುತ್ತೇವೆ ಎಂದು ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ತಿಳಿಸಿದ್ದಾರೆ.

     ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ 

 

 

 

Recent Articles

spot_img

Related Stories

Share via
Copy link
Powered by Social Snap