ನವದೆಹಲಿ:
ಅದಾನಿ ಪ್ರಕರಣ ಬಗ್ಗೆ ತನಿಖೆ ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ತನ್ನ ನಿವೃತ್ತ ನ್ಯಾಯಮೂರ್ತಿ ಎ.ಎಂ. ಸಪ್ರೆ ನೇತೃತ್ವದ ಸಮಿತಿಯನ್ನು ರಚಿಸಿದೆ.
ಭಾರತದ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ ನೇತೃತ್ವದ ಮತ್ತು ನ್ಯಾಯಮೂರ್ತಿ ಗಳಾದ ಪಿ.ಎಸ್. ನರಸಿಂಹ ಮತ್ತು ಜೆ.ಬಿ.ಪರ್ದಿವಾಲಾ ಅವರಿದ್ದ ಪೀಠ, ವಕೀಲರಾದ ವಿಶಾಲ್ ತಿವಾರಿ, ಎಂ.ಎಲ್ ಶರ್ಮಾ, ಕಾಂಗ್ರೆಸ್ ನಾಯಕಿ ಜಯ ಠಾಕೂರ್ ಮತ್ತು ಮತ್ತೋರ್ವ ಅನಾಮಿಕ ಜೈಸ್ವಾಲ್ ಸಲ್ಲಿಸಿದ್ದ ಅರ್ಜಿಗಳ ಮೇಲಿನ ವಿಚಾರಣೆ ಬಳಿಕ ಈ ಆದೇಶ ನೀಡಿದರು.
ಸಮಿತಿಯು ಒ.ಪಿ.ಭಟ್, ನ್ಯಾಯಮೂರ್ತಿ ಜೆ.ಪಿ. ದೇವಧರ್ (ನಿವೃತ್ತ), ಕೆ.ವಿ. ಕಾಮತ್, ನಂದನ್ ನಿಲೇಕಣಿ ಮತ್ತು ಸೋಮಶೇಖರ್ ಸುಂದರೇಶನ್ ಅವರನ್ನು ಒಳಗೊಂಡಿರುತ್ತದೆ. ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಅಭಯ್ ಮನೋಹರ್ ಸಪ್ರೆ ಅವರು ತಜ್ಞರ ಸಮಿತಿಯ ನೇತೃತ್ವ ವಹಿಸಲಿದ್ದಾರೆ ಎಂದು ಪೀಠ ಹೇಳಿದೆ.