ಚಿದಂಬರಂ ಗೆ ಸುಪ್ರೀಂ ನಿಂದ ಜಾಮೀನು ಮಂಜೂರು!!!

ದೆಹಲಿ :

      ಸಿಬಿಐ ದಾಖಲಿಸಿರುವ ಐಎನ್‌ಎಕ್ಸ್ ಮಾಧ್ಯಮ ಭ್ರಷ್ಟಾಚಾರ ಪ್ರಕರಣದಲ್ಲಿ ಕಾಂಗ್ರೆಸ್ ಹಿರಿಯ ಮುಖಂಡ ಮತ್ತು ಮಾಜಿ ಹಣಕಾಸು ಸಚಿವ ಪಿ.ಚಿದಂಬರಂಗೆ ಸುಪ್ರೀಂ ಕೋರ್ಟ್ ಮಂಗಳವಾರ ಜಾಮೀನು ನೀಡಿದೆ.

       ಆದರೆ, ಪಿ ಚಿದಂಬರಂ ಅವರು ಸದ್ಯ ಜಾರಿ ನಿರ್ದೇಶನಾಲಯದ ವಶದಲ್ಲಿದ್ದಾರೆ. ಅವರ ಬಂಧನ ಅವಧಿಯು ಅಕ್ಟೋಬರ್‌ 24ರ ವರೆಗೆ ಇದೆ. 

     ಸಿಬಿಐ ತಮ್ಮ ಮೇಲೆ ದಾಖಲಿಸಿರುವ ಪ್ರಕರಣದಲ್ಲಿ ಜಾಮೀನು ನೀಡುವಂತೆ ಕೋರಿ ಚಿದಂಬರಂ ಅವರು ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಆರ್‌ ಬಾನುಮತಿ, ಎ.ಎಸ್‌ ಬೋಪಣ್ಣ ಮತ್ತು ಹೃಷಿಕೇಶ್‌ ರಾಯ್‌ ಅವರಿದ್ದ ತ್ರಿಸದಸ್ಯ ಪೀಠ ಜಾಮೀನು ನೀಡಿ ಆದೇಶಿಸಿದೆ. 

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ