ಜಾಮಾ ಮಸೀದಿ ಸರ್ವೆಗೆ ಸುಪ್ರೀಂ ತಡೆ ….!

ನವದೆಹಲಿ: 

    ಉತ್ತರ ಪ್ರದೇಶದ ಸಂಭಾಲ್ ನ ಜಾಮಾ ಮಸೀದಿ ಸಮೀಕ್ಷೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಸೀದಿ ಸಮೀಕ್ಷೆ ಕುರಿತ ಟ್ರಯಲ್ ಕೋರ್ಟ್ ವಿಚಾರಣೆಗೆ ‘ಸುಪ್ರೀಂ ಕೋರ್ಟ್’ ಶುಕ್ರವಾರ ತಡೆ ನೀಡಿದ್ದು, ಶಾಂತಿ ಕಾಪಾಡುವಂತೆ ಉತ್ತರ ಪ್ರದೇಶ ಸರ್ಕಾರಕ್ಕೆ ಸೂಚನೆ ನೀಡಿದೆ.

   ಸರ್ವೆ ಆದೇಶವನ್ನು ಪ್ರಶ್ನಿಸಿ ಮಸೀದಿ ಸಮಿತಿಯ ಅರ್ಜಿಯನ್ನು ಹೈಕೋರ್ಟ್‌ನಲ್ಲಿ ಪಟ್ಟಿ ಮಾಡುವವರೆಗೆ ಸಂಭಾಲ್ ಜಾಮಾ ಮಸೀದಿ ವಿರುದ್ಧದ ಮೊಕದ್ದಮೆಯನ್ನು ಮುಂದುವರಿಸದಂತೆ ಸುಪ್ರೀಂ ಕೋರ್ಟ್ ಶುಕ್ರವಾರ ಉತ್ತರ ಪ್ರದೇಶದ ವಿಚಾರಣಾ ನ್ಯಾಯಾಲಯಕ್ಕೆ ಸೂಚಿಸಿದೆ. ಅಲ್ಲದೆ ಶಾಂತಿ ಮತ್ತು ಸೌಹಾರ್ದತೆ ಕಾಪಾಡುವಂತೆ ಉತ್ತರ ಪ್ರದೇಶ ಸರ್ಕಾರಕ್ಕೆ ಸೂಚಿಸಿದೆ.

   “ಅಡ್ವೊಕೇಟ್ ಕಮಿಷನರ್ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ಇಡುವಂತೆ ಮತ್ತು ಅದನ್ನು ತೆರೆಯದಂತೆ ನಾವು ನಿರ್ದೇಶಿಸುತ್ತೇವೆ. ಯಾವುದೇ ಕಾರಣಕ್ಕೂ ಶಾಂತಿ ಮತ್ತು ಸೌಹಾರ್ದತೆಯನ್ನು ಕಾಪಾಡಿಕೊಳ್ಳಬೇಕು” ಎಂದು ಸಿಜೆಐ ಸಂಜೀವ್ ಖನ್ನಾ ನೇತೃತ್ವದ ಸುಪ್ರೀಂ ಕೋರ್ಟ್‌ನ ದ್ವಿಸದಸ್ಯ ಪೀಠವು ಹೇಳಿದೆ ಎಂದು ನ್ಯಾಯಮೂರ್ತಿ ಸಂಜಯ್ ಕುಮಾರ್ ಹೇಳಿದರು.

   ಮಸೀದಿಯ ಸರ್ವೇಗೆ ಆದೇಶ ನೀಡಿರುವ ವಿಚಾರಣಾ ನ್ಯಾಯಾಲಯವು ಮುಂದಿನ ಯಾವುದೇ ಕ್ರಮಗಳನ್ನು ಕೈಗೊಳ್ಳುವುದಿಲ್ಲ ಎಂದೂ ಸುಪ್ರೀಂ ಕೋರ್ಟ್ ತನ್ನ ಆದೇಶದಲ್ಲಿ ಸ್ಪಷ್ಟಪಡಿಸಿದೆ. “ಅವರು (ಮಸೀದಿ ಸಮಿತಿ) ಹೈಕೋರ್ಟ್‌ಗೆ ತೆರಳುವವರೆಗೆ ಯಾವುದೇ ಅಹಿತಕರ ಘಟನೆಗಳು ಆಗಬಾರದು ಎಂದು ನಾವು ಬಯಸುತ್ತೇವೆ. ವಿಚಾರಣಾ ನ್ಯಾಯಾಲಯವು ತನ್ನ ಆದೇಶವನ್ನು ಜಾರಿಗೆ ತರಬಾರದು” ಎಂದು ಪೀಠದ ನೇತೃತ್ವ ವಹಿಸಿದ್ದ ಸಿಜೆಐ ಹೇಳಿದರು.

Recent Articles

spot_img

Related Stories

Share via
Copy link