ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ: ಸೂರಜ್​ ರೇವಣ್ಣಗೆ ರಿಲೀಫ್

ಬೆಂಗಳೂರು:

   ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ವಿಧಾನಪರಿಷತ್​ ಸದಸ್ಯ ಸೂರಜ್​ ರೇವಣ್ಣಗೆ ಬಿಗ್ ರಿಲೀಫ್ ಸಿಕ್ಕಿದೆ. ಸೂರಜ್ ವಿರುದ್ಧದ ಆರೋಪ ಸಂಬಂಧ ಸಿಐಡಿ ಬಿ ರಿಪೋರ್ಟ್ ಸಲ್ಲಿಸಿದೆ. ಹೊಳೆನರಸೀಪುರ ಗ್ರಾಮಾಂತರ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣ ಸಂಬಂಧ ಸಿಐಡಿ ಅಧಿಕಾರಿಗಳು ತನಿಖೆ ನಡೆಸಿದ್ದರು.

   ಸೂರಜ್ ರೇವಣ್ಣ ವಿರುದ್ಧ ಎರಡು ಎಫ್ಐಆರ್ ದಾಖಲಾಗಿದ್ದವು. ಒಂದು ಪ್ರಕರಣದಲ್ಲಿ ಸಿಐಡಿ ಈಗಾಗಲೇ ಚಾರ್ಜ್​​ಶೀಟ್ ಸಲ್ಲಿಸಿದೆ. ಮತ್ತೊಂದು ಪ್ರಕರಣದಲ್ಲಿ ಇದೀಗ ಬಿ ರಿಪೋರ್ಟ್ ಸಲ್ಲಿಸಿದೆ.

    ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣ ಸಿಐಡಿಗೆ ವರ್ಗಾವಣೆ ಆಗಿತ್ತು. ಆರೋಪ ಸಾಬೀತುಪಡಿಸಲು ಬೇಕಾದ ಸಾಕ್ಷ್ಯಗಳು ಲಭ್ಯವಿಲ್ಲದ ಕಾರಣ ಜನಪ್ರತಿನಿಧಿಗಳ ವಿಶೇಷ ನ್ಯಾಯಲಯಕ್ಕೆ ಸಿಐಡಿ ಬಿ ರಿಪೋರ್ಟ್‌ ಸಲ್ಲಿಸಿದೆ. ಸೂರಜ್ ರೇವಣ್ಣ ವಿರುದ್ಧ ಬ್ರಿಗೇಡ್ ಖಜಾಂಚಿ ನೀಡಿದ್ದ ದೂರಿನ ಆಧಾರದಲ್ಲಿ ಪ್ರಕರಣ ದಾಖಲಾಗಿತ್ತು. ಆದರೆ, ಸಾಕ್ಷ್ಯಾಧಾರಗಳ ಕೊರತೆ ಹಿನ್ನೆಲೆಯಲ್ಲಿ ಸಿಐಡಿ ಇದೀಗ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಸಿದೆ.

Recent Articles

spot_img

Related Stories

Share via
Copy link