ಅಸಹಜ ಲೈಂಗಿಕ ದೌರ್ಜನ್ಯ ಕೇಸ್‌ನಲ್ಲಿ ಸೂರಜ್‌ ರೇವಣ್ಣಗೆ ಮತ್ತೆ ಸಂಕಷ್ಟ

ಬೆಂಗಳೂರು:

     ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಎಂಎಲ್‌ಸಿ ಸೂರಜ್‌ ರೇವಣ್ಣಗೆ (Suraj Revanna Case) ಮತ್ತೆ ಸಂಕಷ್ಟ ಎದುರಾಗಿದೆ. ಪ್ರಕರಣಕ್ಕೆ ಸಂಬಂಧಿಸಿ ಸಲ್ಲಿಸಿದ್ದ ಬಿ ರಿಪೋರ್ಟ್ ತಿರಸ್ಕರಿಸಿರುವ 42ನೇ ಎಸಿಜೆಎಂ ನ್ಯಾಯಾಲಯವು, ತನಿಖೆ ಮುಂದುವರಿಸಲು ಆದೇಶ ನೀಡಿದೆ. ಇದೇ ವೇಳೆ ಡಿಸೆಂಬರ್ 29ರೊಳಗೆ ತನಿಖಾ ವರದಿ ಸಲ್ಲಿಸುವಂತೆ ಎಸ್‌ಐಟಿ ಪೊಲೀಸರಿಗೆ ಕೋರ್ಟ್‌ ಸೂಚನೆ ನೀಡಿದೆ.

     ಯುವಕನ ಮೇಲೆ ಅಸಹಜ ಲೈಂಗಿಕ ದೌರ್ಜನ್ಯ ಎಸಗಿ, ಜೀವ ಬೆದರಿಕೆ ಹಾಕಿದ ಆರೋಪದಲ್ಲಿ ಸೂರಜ್ ರೇವಣ್ಣ ವಿರುದ್ಧ ಎಫ್‌ಐಆರ್‌ ದಾಖಲಾಗಿತ್ತು. ಈ ಸಂಬಂಧ ತನಿಖಾಧಿಕಾರಿಗಳು ವಿಚಾರಣಾ ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಸಿದ್ದಾರೆ. 

    ಸೂರಜ್ ರೇವಣ್ಣ ಅಸಹಜ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ 2024ರ ಜೂನ್ 22ರಂದು ಜೆಡಿಎಸ್‌ ಕಾರ್ಯಕರ್ತನಿಂದಲೇ ದೂರು ದಾಖಲಾಗಿತ್ತು. ಗನ್ನಿಗಡದ ತೋಟದ ಮನೆಗೆ ಮಾತನಾಡುವ ಸಲುವಾಗಿ ಕರೆಸಿಕೊಂಡಿದ್ದ ಎಂಎಲ್‌ಸಿ ಸೂರಜ್‌ ರೇವಣ್ಣ ಬಲವಂತದ ಅಸಹಜ ಲೈಂಗಿಕ ದೌರ್ಜನ್ಯ ಎಸಗಿದ್ದರು ಎಂದು ಸಂತ್ರಸ್ತ ಆರೋಪಿಸಿದ್ದ. ಹೀಗಾಗಿ ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ವಿವಿಧ ಸೆಕ್ಷನ್​​ಗಳ ಅಡಿ ಪ್ರಕರಣ ದಾಖಲಾಗಿತ್ತು. ಆರಂಭದಲ್ಲಿ ಹಾಸನದ ಜಿಲ್ಲಾ ಪೊಲೀಸ್ ಠಾಣೆಗೆ ಸಂತ್ರಸ್ತ ನೀಡಲು ಆಗಮಿಸಿದ್ದ. ಆದರೆ, ನಂತರ ಅದನ್ನು ಹೊಳೆನರಸೀಪುರ ಗ್ರಾಮಾಂತರ ಠಾಣೆ ಪೊಲೀಸರಿಗೆ ವರ್ಗಾಯಿಸಲಾಗಿತ್ತು. ಅದರಂತೆ, ಜೂನ್ 23 ರಂದು ಸೂರಜ್ ರೇವಣ್ಣರನ್ನು ಬಂಧಿಸಲಾಗಿತ್ತು.

    ಮತ್ತೊಂದೆಡೆ, ಸುಳ್ಳು ಆರೋಪ ಮಾಡಿ ಹಣಕ್ಕಾಗಿ ಪೀಡಿಸಿದ್ದಾನೆ ಎಂದು ಸೂರಜ್ ರೇವಣ್ಣ ಆಪ್ತ ಶಿವಕುಮಾರ್ ಎಂಬವರು ಸಂತ್ರಸ್ತನ ವಿರುದ್ಧ ಪ್ರತಿ ದೂರು ನೀಡಿದ್ದರು. ಸೂರಜ್ ರೇವಣ್ಣ ವಿರುದ್ಧ ದೂರುದಾರ, ಲೈಂಗಿಕ ಕಿರುಕುಳ ದೂರು ನೀಡುವುದಾಗಿ ಬೆದರಿಕೆ ಹಾಕಿ, ಐದು ಕೋಟಿ ರೂ. ಹಣ ನೀಡದಿದ್ದರೆ ಲೈಂಗಿಕ ದೌರ್ಜನ್ಯ ಕೇಸ್ ದಾಖಲಿಸುತ್ತೇನೆ ಎಂದು ಬ್ಲ್ಯಾಕ್​​ಮೇಲ್ ಮಾಡಿದ್ದರು ಎಂದು ಶಿವಕುಮಾರ್ ದೂರಿನಲ್ಲಿ ಉಲ್ಲೇಖಿಸಿದ್ದರು. ಈ ಎಲ್ಲ ಬೆಳವಣಿಗೆಗಳ ನಂತರ ಪ್ರಕರಣವನ್ನು ಸಿಐಡಿಗೆ ವರ್ಗಾಯಿಸಲಾಗಿತ್ತು. 

     ಪ್ರಕರಣದಲ್ಲಿ ಸೂರಜ್‌ ರೇವಣ್ಣಗೆ 2024ರ ಜುಲೈ 22ರಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು. ಜುಲೈ 23ರಂದು ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಿದ್ದರು.

Recent Articles

spot_img

Related Stories

Share via
Copy link