ಜೆಡಿಎಸ್‌ ಟ್ವೀಟ್‌ ಗೆ ಸುರೇಶ್‌ ಟಕ್ಕರ್…..!

ಬೆಂಗಳೂರು:

     ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಮಂಜುನಾಥ್ ಅವರನ್ನು ಮೈತ್ರಿ ಅಭ್ಯರ್ಥಿಯನ್ನಾಗಿ ನೇಮಿಸಿದ ಹಿನ್ನೆಲೆಯಲ್ಲಿ ಡಿ.ಕೆ ಸುರೇಶ್ ವಿರುದ್ಧ ಜೆಡಿಎಸ್ ವಾಗ್ದಾಳಿ ನಡೆಸಿದೆ. ಮಂಜುನಾಥ್ ವಿರುದ್ಧ ಮಾತನಾಡಿದ್ದ ಸಂಸದ ಸುರೇಶ್ ವಿರುದ್ಧ ಜೆಡಿಎಸ್ ತಪರಾಕಿ ಹಾಕಿದೆ.

    ಈ ಕುರಿತು ಜೆಡಿಎಸ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದು, ಮಂಜುನಾಥ್ ಎಂದರೇನು? ಡಿಕೆ ಸುರೇಶ್ ಎಂದರೇನು ಎಂದು ಜೆಡಿಎಸ್ ತಿಳಿಸಿದೆ.

•ಡಾ.ಸಿ.ಎನ್.ಮಂಜುನಾಥ್ v/s ಡಿ.ಕೆ.ಸುರೇಶ್

•ನಿಸ್ವಾರ್ಥ vs ಸ್ವಾರ್ಥ!

•ಸೇವೆ v/s ಸುಲಿಗೆ!!

•ಒಳಿತು v/s ಕೆಡುಕು!!! ಇದಕ್ಕೆ ಮಿಗಿಲಾಗಿ ಹೆಚ್ಚಿನದನ್ನು ಹೇಳುವ ಅಗತ್ಯವಿಲ್ಲ.

    ಡಾ.ಸಿ.ಎನ್.ಮಂಜುನಾಥ್ ಅವರೇನು? ಎನ್ನುವುದು ರಾಜ್ಯಕ್ಕಷ್ಟೇ ಅಲ್ಲ, ಇಡೀ ಭಾರತ ದೇಶಕ್ಕೇ ಗೊತ್ತಿದೆ. ಅನಗತ್ಯವಾಗಿ ನಾಲಿಗೆ ಜಾರಿ ಗುಣ ಹಾಳು ಮಾಡಿಕೊಳ್ಳಬೇಡಿ.

    ಆರೋಗ್ಯ ಕ್ಷೇತ್ರದಲ್ಲಿ ಎಣೆ ಇಲ್ಲದಷ್ಟು ಸೇವೆ ಮಾಡಿ ಲಕ್ಷಾಂತರ ಬಡಜನರ ಹೃದಯದಲ್ಲಿ ನೆಲೆಸಿರುವ ಡಾ.ಸಿ.ಎನ್.ಮಂಜುನಾಥ್ ಅವರ ಬಗ್ಗೆ ಅನಾರೋಗ್ಯಕರ ಅಪಪ್ರಚಾರದಲ್ಲಿ ನೀವು ನಿರತರಾಗಿದ್ದೀರಿ. ಸೋಲಿನ ದುಸ್ವಪ್ನದಿಂದ ನೀವು ಬಳಲುತ್ತಿರುವುದು ಸ್ಪಷ್ಟ. ದೇವೇಗೌಡರ ಕುಟುಂಬದ ಬಗ್ಗೆ ಮಾತನಾಡುವ ನೈತಿಕತೆ ನಿಮಗೆಲ್ಲಿದೆ? ಇಡೀ ಕಾಂಗ್ರೆಸ್ ನಿಮ್ಮ ಕಬಂಧಬಾಹುಗಳಲ್ಲಿ ಬಂಧಿಯಾಗಿದೆ. ಅಣ್ಣ ಡಿಸಿಎಂ, ತಮ್ಮ ಎಂಪಿ, ಸಹೋದರಿಯ ಗಂಡ ವಿಧಾನ ಪರಿಷತ್ ಸದಸ್ಯ, ಇನ್ನೊಬ್ಬರು ಕುಣಿಗಲ್ ಶಾಸಕ.

    ಇದೇನು ಫ್ಯಾಮಿಲಿ ಪಾಲಿಟಿಕ್ಸೋ ಅಥವಾ ಫ್ಯಾಮಿಲಿ ಪ್ಯಾಕೇಜೋ? ನೀವು ಏನೆಂದು ಕರೀತೀರಿ ಡಿ.ಕೆ.ಸುರೇಶ್ ಅವರೇ? ಅಳಿಯ ಜಾಣ ಆಗೋದು ತಪ್ಪಲ್ಲ. ನಿಮ್ಮಂತೆ ಇನ್ನೊಬ್ಬರ ಜೀವನಕ್ಕೆ ಎರವಾಗೋದು ತಪ್ಪಲ್ಲವೇ ಎಂದು ಪ್ರಶ್ನಿಸಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link
Powered by Social Snap