ವಿಧಾನ ಸಭಾ ಚುನಾವಣೆ : ಬಿಜೆಪಿ ವಿರುದ್ದ ಸುರ್ಜೇವಾಲ ವಾಗ್ದಾಳಿ….!

ನವದೆಹಲಿ

     ಕರ್ನಾಟಕ ವಿಧಾನಸಭಾ ಚುನಾವಣೆಯ ಕಾವು ಹೆಚ್ಚಾಗುತ್ತಿದೆ. ಈ ಸಂಬಂಧ ಪ್ರಕಟಗೊಂಡ ಚುನಾವಣಾ ಪೂರ್ವ ಕೆಲವು ಸಮೀಕ್ಷೆಗಳು ಸಹ ಕಾಂಗ್ರೆಸ್‌ಗೆ ಮುನ್ನಡೆ ಆಗಬಹುದು ಎಂದು ತಿಳಿಸಿವೆ. ಇದರ ಬೆನ್ನಲ್ಲೆ ಕಾಂಗ್ರೆಸ್‌ ನಾಯಕರು ರಾಜ್ಯದಲ್ಲಿ ತಾವೇ ಅಧಿಕಾರ ಹಿಡಿಯುವುದಾಗಿ ಭವಿಷ್ಯ ನುಡಿಯುತ್ತಿದ್ದಾರೆ. ಜೊತೆಗೆ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

      ಕರ್ನಾಟಕದಲ್ಲಿ ಆಡಳಿತಾರೂಢ ಬಿಜೆಪಿ ಪಕ್ಷವು ಮತ್ತೆ ಅಧಿಕಾರಕ್ಕೆ ಬರುವುದಿಲ್ಲ. ಸದರಿ 2023ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವೇ ರಾಜ್ಯಕ್ಕೆ ಪರ್ಯಾಯ ಆಗಿದೆ ಎಂದು ಕಾಂಗ್ರೆಸ್ ನಾಯಕ ಹಾಗೂ ಕಾಂಗ್ರೆಸ್‌ನ ಕರ್ನಾಟಕ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಭಾನುವಾರ ಹೇಳಿದರು.

         ನವದೆಹಲಿಯಲ್ಲಿ ಸುರ್ಜೆವಾಲ ಸೇರಿದಂತೆ ಕಾಂಗ್ರೆಸ್ ಕೆಲವು ನಾಯಕರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ನಿವಾಸದಲ್ಲಿ ಭಾನುವಾರ ಸಭೆ ನಡೆಸಿದರು. ಸಭೆಯ ನಂತರ ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸಿದ ಸುರ್ಜೆವಾಲ ಅವರು, ಇಂದಿನ ಸಭೆಯಲ್ಲಿ ಕರ್ನಾಟಕ ರಾಜ್ಯದ ಸಾರ್ವತ್ರಿಕ ಚುನಾವಣೆಯ ಅಭ್ಯರ್ಥಿಗಳು, ಸ್ಥಾನ ಗಳಿಕೆಗೆ ತಂತ್ರಗಳ ಕುರಿತು ಚರ್ಚೆ ನಡೆದಿದೆ ಎಂದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link