HDK ವಿರುದ್ಧ ಭೂಮಿ ಒತ್ತುವರಿ ಆರೋಪ: ಸರ್ವೇ ಕಾರ್ಯ ಆರಂಭ

ಬೆಂಗಳೂರು:

   ರಾಮನಗರ ತಾಲೂಕಿನ ಬಿಡದಿ ಹೋಬಳಿ ವ್ಯಾಪ್ತಿಯ ಕೇತಗಾನಹಳ್ಳಿಯಲ್ಲಿ ಕೇಂದ್ರ ಸಚಿವ ಹೆಚ್​​ಡಿ ಕುಮಾರಸ್ವಾಮಿ ವಿರುದ್ಧ ಭೂಮಿ ಒತ್ತುವರಿ ಆರೋಪ ವಿಚಾರವಾಗಿ ಇತ್ತೀಚೆಗೆ ಹೈಕೋರ್ಟ್ ತರಾಟೆ ತೆಗೆದುಕೊಂಡ ಬೆನ್ನಲ್ಲೇ ಕಂದಾಯ ಇಲಾಖೆ ಅಧಿಕಾರಿಗಳು ಸೋಮವಾರ ಸರ್ವೆ ಕಾರ್ಯ ಆರಂಭಿಸಿದ್ದಾರೆ.

   ಕೇಂದ್ರ ಸಚಿವ ಹೆಚ್​​ಡಿ ಕುಮಾರಸ್ವಾಮಿ ಅವರು 14 ಎಕರೆ ಭೂಮಿ ಸರ್ಕಾರಿ ಜಮೀನನ್ನ ಒತ್ತುವರಿ ಮಾಡಿದ್ದಾರೆಂದು ಸಾಮಾಜಿಕ ಹೋರಾಟಗಾರರು ದೂರು ನೀಡಿದ್ದರು.ವರದಿ ನೀಡಲು ವಿಳಂಬ ಹಿನ್ನಲೆ ಕಂದಾಯ ಇಲಾಖೆ ಆಯುಕ್ತರಿಗೆ ಶೀಘ್ರ ವರದಿ ನೀಡುವಂತೆ ಹೈಕೋರ್ಟ್ ತಾಕೀತು ಮಾಡಿತ್ತು.

   ಹೈಕೋರ್ಟ್ ಆದೇಶ ಹಿನ್ನೆಲೆಯಲ್ಲಿ ಕಂದಾಯ ಇಲಾಖೆ ಅಧಿಕಾರಿಗಳು ಸಮೀಕ್ಷೆ ಆರಂಭಿಸಿದ್ದಾರೆ. ಕುಮಾರಸ್ವಾಮಿ ಭೂ ಒತ್ತುವರಿ ಬಗ್ಗೆ ತನಿಖೆಗೆ ಸರ್ಕಾರ ಎಸ್ಐಟಿ ರಚನೆ ಮಾಡಿತ್ತು.  

  ಕೇತಗಾನಹಳ್ಳಿಯಲ್ಲಿ ರೆವಿನ್ಯೂ ಇನ್ಸ್​ಪೆಕ್ಟರ್ ಪ್ರಕಾಶ್ ಮತ್ತು ವಿಎ ವಿಶಾಲಾಕ್ಷಿ ನೇತೃತ್ವದಲ್ಲಿ 35ಕ್ಕೂ ಹೆಚ್ಚು ಸರ್ವೆ ನಂಬರ್​ಗಳ ಜಮೀನು ಪರಿಶೀಲನೆ ಮಾಡಲಾಗಿದೆ. ಹೆಚ್​ಡಿ ಕುಮಾರಸ್ವಾಮಿ, ಸಹೋದರಿ ಅನುಸೂಯ ಮಂಜುನಾಥ ಮತ್ತು ಹೆಚ್.ಡಿ.ಕುಮಾರಸ್ವಾಮಿ ಸಂಬಂಧಿ ಡಿ.ಸಿ.ತಮ್ಮಣ್ಣ ಹೆಸರಿನಲ್ಲಿರುವ 110 ಎಕರೆಗೂ ಹೆಚ್ಚು ಜಮೀನನ್ನು ಕಂದಾಯ ಅಧಿಕಾರಿಗಳು ಸರ್ವೆ ಮಾಡಿದ್ದಾರೆ. ಬಳಿಕ ಜಿಲ್ಲಾಧಿಕಾರಿಗಳಿಗೆ ವರದಿ ನೀಡಲಿದ್ದಾರೆ.

   ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಅವರ ಸಂಬಂಧಿ ಡಿಸಿ ತಮ್ಮನಣ್ಣ ರಾಮನಗರ ಜಿಲ್ಲೆಯ ಬಿಡದಿ ಹೋಬಳಿ ಕೇತಗಾನಹಳ್ಳಿಯಲ್ಲಿ ವಿವಿಧ ಸರ್ವೆ ನಂಬರ್‌ಗಳಲ್ಲಿ 14 ಎಕರೆಗೂ ಅಧಿಕ ಸರ್ಕಾರಿ ಜಮೀನನ್ನು ಕಬಳಿಕೆ ಮಾಡಿದ್ದಾರೆ ಎಂದು ಮಾಜಿ ಸಂಸದ ದಿವಂಗತ ಜಿ. ಮಾದೇಗೌಡರು ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದರು.

   ಇದರ ಸಮಗ್ರ ತನಿಖೆ ನಡೆಸಬೇಕು ಎಂದು ಕಂದಾಯ ಇಲಾಖೆಗೆ ಲೋಕಾಯುಕ್ತರು 2014ರಲ್ಲಿ ಆದೇಶಿಸಲಾಗಿತ್ತು. ಲೋಕಾಯುಕ್ತರ ಆದೇಶವನ್ನು ಇತ್ತೀಚೆಗೆ ಹೈಕೋರ್ಟ್‌ ಕೂಡ ಎತ್ತಿಹಿಡಿದಿತ್ತು. ಆದರೆ, ಹೈಕೋರ್ಟ್ ಆದೇಶ ಪಾಲಿಸಿಲ್ಲ ಎಂದು ದೂರಿ ಹಿರೇಮಠ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ್ದರು. ಬಳಿಕ ಕ್ರಮ ಕೈಗೊಂಡಿರುವ ಬಗ್ಗೆ ವರದಿ ಸಲ್ಲಿಸುವಂತೆ ಸರ್ಕಾರಕ್ಕೆ ಹೈಕೋರ್ಟ್‌ ಸೂಚನೆ ನೀಡಿತ್ತು.

Recent Articles

spot_img

Related Stories

Share via
Copy link