ವಾರಾಣಸಿ : ಜ್ಞಾನವಾಪಿ ಮಸೀದಿ ಆವರಣದಲ್ಲಿ ಸಮೀಕ್ಷೆ ಆರಂಭ

ವಾರಣಾಸಿ:

         ವಾರಾಣಸಿಯ ಜ್ಞಾನವಾಪಿ ಮಸೀದಿ ಆವರಣದಲ್ಲಿ ಸಮೀಕ್ಷೆ ನಡೆಸಲು ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದ ಅಂಜುಮನ್ ಇಂತೇಜಮಿಯಾ ಮಸೀದಿ ಸಮಿತಿ ಸಲ್ಲಿಸಿದ್ದ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ಗುರುವಾರ ವಜಾಗೊಳಿಸಿತ್ತು.

     ಮಸೀದಿ ಆವರಣದಲ್ಲಿ ವೈಜ್ಞಾನಿಕ ಸಮೀಕ್ಷೆ ನಡೆಸುವಂತೆ ಜುಲೈ 21ರಂದು ವಾರಾಣಸಿ ಜಿಲ್ಲಾ ನ್ಯಾಯಾಧೀಶರು ನೀಡಿದ್ದ ತೀರ್ಪನ್ನು ಪ್ರಶ್ನಿಸಿ, ಅಂಜುಮನ್ ಮಸೀದಿ ಸಮಿತಿ ಅಲಹಾಬಾದ್ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿತ್ತು.

    ಮಹಿಳೆಯರ ಅರ್ಜಿಯನ್ನು ಅನುಮೋದಿಸಿದ್ದ ವಾರಾಣಸಿ ಜಿಲ್ಲಾ ನ್ಯಾಯಾಲಯವು ಕಾರ್ಬನ್ ಡೇಟಿಂಗ್ ನಡೆಸಲು ಭಾರತೀಯ ಪುರಾತತ್ವ ಇಲಾಖೆಗೆ ಸೂಚನೆ ನೀಡಿತ್ತು. ಅದರ ವಿರುದ್ಧ ಅಂಜುಮನ್ ಇಂತೇಜಮಿಯಾ ಮಸೀದಿ ಸಮಿತಿ ಅರ್ಜಿ ಸಲ್ಲಿಸಿತ್ತು. ಈ ಅರ್ಜಿಯನ್ನು ವಜಾಗೊಳಿಸಿದ ಅಲಹಾಬಾದ್ ಹೈಕೋರ್ಟ್, ತಕ್ಷಣದಿಂದಲೇ ಸಮೀಕ್ಷೆ ಮುಂದುವರಿಸಲು ಅನುಮತಿ ನೀಡಿತ್ತು.ನ್ಯಾಯದಾನದ ಹಿತಾಸಕ್ತಿ ದೃಷ್ಟಿಯಿಂದ ಎಎಸ್‌ಐ ಸಮೀಕ್ಷೆ ಅಗತ್ಯವಾಗಿದೆ. ಇದನ್ನು ಕೆಲವು ಷರತ್ತುಗಳ ಅಡಿಯಲ್ಲಿ ನಡೆಸುವ ಅಗತ್ಯವಿದೆ ಎಂದು ನ್ಯಾಯಾಲಯ ತಿಳಿಸಿತ್ತು.
     ಎಎಸ್‌ಐ ಅಧಿಕಾರಿಗಳು ಸೇರಿದಂತೆ ಇತರರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಈಗಾಗಲೇ ಸಮೀಕ್ಷೆ ಪ್ರಾರಂಬವಾಗಿದೆ. ನಾವೂ ಕೂಡ ಒಳಗೆ ಹೋಗುತ್ತಿದ್ದೇವೆಂದು. ಜ್ಞಾನವಾಪಿ ಪ್ರಕರಣದ ಹಿಂದೂ ಪರ ವಕೀಲ ಸುಭಾಷ್ ನಂದನ್ ಚತುರ್ವೇದಿ ಅವರು ತಿಳಿಸಿದ್ದಾರೆ
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap