ಮಳೆಹಾನಿ ತಕ್ಷಣ ಬೆಳೆ ಸಮೀಕ್ಷೆ ಮಾಡಿ ಪರಿಹಾರ ನೀಡಿ

ತುಮಕೂರು:

                                ಕಾಂಗ್ರೆಸ್ ವಕ್ತಾರ ಮುರಳಿದರ ಹಾಲಪ್ಪ ಒತ್ತಾಯ

ತುಮಕೂರು ಜಿಲ್ಲೆಯಾದ್ಯಂತ ಮಳೆಯಿಂದ ತೊಂದರೆಗೆ ಒಳಗಾಗಿರುವ ರೈತರ ಬೆಳೆಗಳನ್ನು ತಕ್ಷಣ ಸಮರ್ಪಕವಾಗಿ ಸಮೀಕ್ಷೆ ಮಾಡಿ ಕೂಡಲೇ ಪರಿಹಾರ ನೀಡಬೇಕು ನಷ್ಟವಾಗಿರುವ ಬೆಳೆಗಳನ್ನು ಸಮರ್ಪಕವಾಗಿ ಸಮೀಕ್ಷೆ ಮಾಡಿ, ಪರಿಹಾರ ನೀಡುವುದನ್ನು ಸರ್ಕಾರ ಮಾಡುತ್ತಿಲ್ಲ ಎಂದು ಕಾಂಗ್ರೆಸ್ ವಕ್ತಾರ ಮೂಡಿದ ಹಾಲಪ್ಪ ತಿಳಿಸಿದ್ದಾರೆ.

ಮಂಗಳವಾರ ತುಮಕೂರು ತಾಲೂಕಿನ ಹೆಬ್ಬೂರು ಹೋಬಳಿಯ ನಿಡುವಳಲು ಗ್ರಾಮಪಂಚಾಯಿತಿಗೆ ಭೇಟಿ ನೀಡಿದ ಅವರು ಮಳೆಯಿಂದ ನಷ್ಟಕ್ಕೊಳಗಾದ ರೈತರ ಹೊಲಗಳಿಗೆ ಭೇಟಿ ನೀಡಿ ರೈತರಿಗೆ ಧೈರ್ಯ ತುಂಬುವ ಕೆಲಸ ಮಾಡಿದರು.

ಇದೇ ಸಂದರ್ಭದಲ್ಲಿ ಮಾತನಾಡಿದ ಅವರು ತುಮಕೂರು ಜಿಲ್ಲೆ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಕಳೆದ ಒಂದು ವಾರದಿಂದ ಮಳೆಯಾಗುತ್ತಿದ್ದು ಕೊಯ್ಲಿಗೆ ಬಂದ ಬೆಳೆಗಳು ಹೊಲಗದ್ದೆಗಳಲ್ಲಿ ಕೊಳೆತು ಹೋಗುವಂತಾಗಿದೆ.

ರಾಗಿ ,ಭತ್ತ ,ತೊಗರಿ, ಶೇಂಗಾ, ಸೂರ್ಯಕಾಂತಿ, ಹೆಸರು ಸೇರಿದಂತೆ ಸಾಕಷ್ಟು ಬೆಳೆಗಳು ಕೊಯ್ಲಿಗೆ ಬಂದಂತಹ ಸಂದರ್ಭದಲ್ಲಿ ಮಳೆ ಹೆಚ್ಚಾಗಿದ್ದು ಮಳೆ ನಿಲ್ಲದ ಕಾರಣ ಕಟಾವಿಗೆ ಬಂದ ಬೆಳೆಗಳು ಹೊಲದಲ್ಲೇ ಹಾಳಾಗಿವೆ , ಬಿತ್ತನೆ ಮಾಡುವಾಗ ಜುಲೈ ಮತ್ತು ಆಗಸ್ಟ್ ತಿಂಗಳಲ್ಲಿ ಮಳೆ ಕೈಕೊಟ್ಟ ಕಾರಣ ಬಿತ್ತನೆ ಬೀಜಗಳು ಸರಿಯಾಗಿ ಹುಟ್ಟಲಿಲ್ಲ ನಂತರ ರೈತರಿಗೆ ಸರಿಯಾದ ಸಮಯಕ್ಕೆ ರಸಗೊಬ್ಬರ ಸಿಗಲಿಲ್ಲ ಇದರ ನಡುವೆಯೂ ರೈತರು ಕಷ್ಟಪಟ್ಟು ಬೆಳೆಗಳನ್ನು ಬೆಳೆದಿದ್ದಾರೆ ಆದರೆ ವ್ಯಾಪಕವಾಗಿ ಸುರಿಯುತ್ತಿರುವ ಮಳೆಯ ಕಾರಣದಿಂದ ರೈತಸಮುದಾಯ ಸಂಕಷ್ಟಕ್ಕೆ ಸಿಲುಕಿದೆ ಎಂದರು.

ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿ ಸತತ ಮಳೆಯಿಂದ ರೈತರು ಕಂಗಾಲಾಗಿದ್ದಾರೆ ಕಳೆದ ನಾಲ್ಕೈದು ತಿಂಗಳಿಂದ ಕಷ್ಟಪಟ್ಟು ಬೆಳೆದ ರಾಗಿ ಕೃಷಿ ಮಾಡಿದ್ದು ರಾಗಿ ಕಟಾವಿಗೆ ಬರುವ ಹೊತ್ತಿಗೆ ಸರಿಯಾಗಿ ಮಳೆ ಸುರಿಯುತ್ತಿರುವುದು ನುಂಗಲಾರದ ತುತ್ತಾಗಿ ಪರಿಣಮಿಸಿದೆ.ಸತತ ಮಳೆಯಿಂದಾಗಿ ಅರ್ಧ ರಾಗಿ ಬೆಳೆ ನಾಶವಾಗಿದೆ ಜೊತೆಗೆ ರಾಗಿ ಬೆಳೆ ಕಟಾವು ಮಾಡಲು ಒಂದಕ್ಕೆರಡು ಕೂಲಿ ತರಬೇಕಾಗುತ್ತದೆ ಹಾಗಾಗಿ ಸರ್ಕಾರ ಕೂಡಲೇ ಎಚ್ಚೆತ್ತು ಬೆಳೆ ನಷ್ಟಕ್ಕೆ ಒಳಗಾದ ರೈತರಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

2021 22 ನನ್ನಷ್ಟಕ್ಕೆ ನಯಾಪೈಸೆಯ ನೀಡಿಲ್ಲ.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಎರಡು ರೀತಿಯ ನಿರ್ಲಕ್ಷ್ಯ ತೋರಿರುವುದು ಅತ್ಯಂತ ಅಮಾನವೀಯ ನಡವಳಿಕೆ ಬೆಳೆ ನಾಶವಾದ ಕೃಷಿ ಪ್ರದೇಶಗಳಿಗೆ ಕೃಷಿ ಇಲಾಖೆಯ ಅಧಿಕಾರಿಗಳು ಭೇಟಿ ಮಾಡಿ ಸರ್ವೆ ಮಾಡಬೇಕಾಗಿದೆ ಹಾಗೂ ಹಾನಿಯಾಗಿರುವ ಬೆಳೆಯ ಕುರಿತು ವರದಿ ಸಂಗ್ರಹಿಸಿಕೊಂಡು ರೈತರಿಗೆ ಸೂಕ್ತವಾದ ಪರಿಹಾರವನ್ನು ನೀಡಬೇಕು ಎಂದು ತಿಳಿಸಿದರು.

ಕೊಳೆತ ಬೆಳೆ_ಸದ್ಯ ತುಮಕೂರು ಜಿಲ್ಲೆಯಲ್ಲಿ ಭಾರಿ ಮಳೆಯಿಂದ ತರಕಾರಿ ಬೆಳೆಯ ಸರಬರಾಜು ಕಡಿಮೆಯಾಗಿದ್ದರೂ ನೆರೆ ರಾಜ್ಯಗಳಿಂದ ತರಕಾರಿ ಬರುತ್ತಿಲ್ಲ ಜಿಲ್ಲೆಯಲ್ಲಿ ನೂರಾರು ಹೆಕ್ಟೇರ್ ಪ್ರದೇಶದಲ್ಲಿ ಬೆಳೆದಿದ್ದ ತರಕಾರಿ ಬೆಳೆಗಳು ಅತಿ ಹೆಚ್ಚು ತೇವಾಂಶ ಹಾಗೂ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಬೆಳೆಗಳು ಕೊಳೆತು ಹೋಗಿವೆ ಹೀಗಾಗಿ ತರಕಾರಿಗಳು ಸರಿಯಾಗಿ ಸರಬರಾಜಾಗದೆ ಬೆಳೆಗಳು ಏರಿಕೆಯಾಗಿವೆ ಇನ್ನು ಜಿಲ್ಲೆಯಲ್ಲಿ ಪ್ರಮುಖವಾಗಿ ಬೆಳೆಯುವ ಟೊಮೆಟೊವನ್ನು ಅತಿಹೆಚ್ಚಿನ ಪ್ರಮಾಣದಲ್ಲಿ ಬೆಳೆಯುತ್ತಾರೆ ಅದರ ಜೊತೆಗೆ ಆಲೂಗೆಡ್ಡೆ, ಈರುಳ್ಳಿ ಸೇರಿದಂತೆ ಹಲವು ತರಕಾರಿ ಬೆಳೆಗಳನ್ನು ಬೆಳೆಯಲಾಗುತ್ತಿದೆ ನಿರಂತರ ಮಳೆಯಿಂದಾಗಿ ನೀರಿನಲ್ಲಿ ಮುಳುಗಿ ಹೋಗಿದ್ದರು ಅಧಿಕಾರಿಗಳು ಇತ್ತ ಗಮನ ಹರಿಸುತ್ತಿಲ್ಲ ಎಂದು ಆರೋಪಿಸಿದ್ದಾರೆ.

ಇದೇ ಸಂದರ್ಭದಲ್ಲಿ ಸ್ಥಳೀಯ ಅಧಿಕಾರಿಗಳಾದ ಸಿದ್ದೇಶ್ವರ, ಕಂದಾಯ ಇಲಾಖೆಯ ಬಸವರಾಜು, ಮುಖಂಡರಾದ ನವೀನ್,ರೇವಣ್ಣಸಿದ್ದಯ್ಯ, ನರಸಿಂಹರಾಜ್ ,ಹರೀಶ್,ಯದು, ಜಿ.ಎಲ್ಗೌಡ, ಸಾಹಿರಾಭಾನು, ಗೀತಾ, ರೈತರಾದ ಪಾಪೇಗೌಡ, ನಾಗರಾಜು ಸೇರಿದಂತೆ ಗ್ರಾಮಸ್ಥರು ಹಾಜರಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap