ಜಾಮೀನು ಪಡೆದ ಕುಸ್ತಿಪಟು ಸುಶೀಲ್ ಕುಮಾರ್ ರೈಲ್ವೆ ಕರ್ತವ್ಯಕ್ಕೆ ಹಾಜರ್‌….!

ನವದೆಹಲಿ:

     ಕುಸ್ತಿಪಟು ಸಾಗರ್ ಧಂಕರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ದೆಹಲಿಯ ತಿಹಾರ್ ಜೈಲು ಸೇರಿದ್ದ ಅವಳಿ ಒಲಿಂಪಿಕ್ಸ್ ಪದಕ ವಿಜೇತ ಕುಸ್ತಿಪಟು, ಸುಶೀಲ್ ಕುಮಾರ್‌ ಗೆ ಇತ್ತೀಚೆಗೆ ದೆಹಲಿ ಹೈಕೋರ್ಟ್‌ ಜಾಮೀನು ಮಂಜೂರು ಮಾಡಿತ್ತು. ಇದೀಗ ಅವರು ಅಧಿಕೃತವಾಗಿ ಉತ್ತರ ರೈಲ್ವೆಯಲ್ಲಿ ತಮ್ಮ ಕರ್ತವ್ಯವನ್ನು ಪುನರಾರಂಭಿಸಿದ್ದಾರೆ ಎಂದು ಮೂಲಗಳು ತಿಳಿಸಿದೆ.

    ರಾಷ್ಟ್ರೀಯ ಜೂನಿಯರ್ ಕುಸ್ತಿ ಚಾಂಪಿಯನ್‌ ಸಾಗರ್ ಧನಕರ್ ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪದ ಮೇಲೆ 2021ರ ಮೇ ತಿಂಗಳಿನಲ್ಲಿ ಸುಶೀಲ್ ಕುಮಾರ್‌ ಅವರನ್ನು ಬಂಧಿಸಲಾಗಿತ್ತು. ಈ ವೇಳೆ ಅವರನ್ನು ರೈಲ್ವೇ ಉದ್ಯೋಗದಿಂದ ವಜಾ ಮಾಡಲಾಗಿತ್ತು. ಇದೀಗ ಅಧಿಕಾರಿಗಳು ಅವರ ಮರುನೇಮಕವನ್ನು ದೃಢಪಡಿಸಿದ್ದಾರೆ ಮತ್ತು ಸೇವಾ ನಿಯಮಗಳ ಪ್ರಕಾರ ಈ ಪ್ರಕ್ರಿಯೆಯನ್ನು ನಡೆಸಲಾಗಿದೆ ಎಂದು ವರದಿಯಾಗಿದೆ.

    ರಾಜಧಾನಿಯ ಕ್ರೀಡಾಂಗಣವೊಂದರಲ್ಲಿ 2021ರ ಮೇ 4ರಂದು ನಡೆದ ಗಲಾಟೆಯಲ್ಲಿ ಕುಸ್ತಿಪಟು ಸಾಗರ್ ಧನಕರ್ ಸಾವಿಗೀಡಾಗಿದ್ದರು. ಅವರ ಗೆಳೆಯರಾದ ಸೋನು ಮತ್ತು ಅಮಿತ್ ಕುಮಾರ್‌ಗೆ ಗಾಯವಾಗಿತ್ತು. ಸುಶೀಲ್ ಕುಮಾರ್ ಮತ್ತು ಇತರ ಕೆಲವರು ಇದರಲ್ಲಿ ಭಾಗಿಯಾಗಿದ್ದಾರೆ ಎನ್ನಲಾಗಿದೆ. 

    ಸುಶೀಲ್‌ ಕುಮಾರ್‌ ದೇಶದ ಖ್ಯಾತ ಕುಸ್ತಿಪಟುಗಳಲ್ಲಿ ಒಬ್ಬರಾಗಿದ್ದರು. 2008ರಲ್ಲಿ ನಡೆದಿದ್ದ ಬೀಜಿಂಗ್‌ ಒಲಿಂಪಿಕ್ಸ್‌ ಕಂಚಿನ ಪದಕ ಮತ್ತು 2012 ರಲ್ಲಿ ಲಂಡನ್‌ನಲ್ಲಿ ನಡೆದಿದ್ದ ಒಲಿಂಪಿಕ್ಸ್‌ನಲ್ಲಿ ಬೆಳ್ಳಿ ಪದಕ ಗೆದ್ದಿದ್ದರು. ಆದರೆ ಆ ಬಳಿಕ ಕೊಲೆ ಆರೋಪದಲ್ಲಿ ಜೈಲು ಸೇರಿ ತಮ್ಮ ಕುಸ್ತಿ ವೃತ್ತಿ ಬದುಕನ್ನು ಹಾಳು ಮಾಡಿಕೊಂಡರು. ಅನೇಕ ಕುಸ್ತಿ ಟೂರ್ನಿಗಳಲ್ಲಿ ಚಾಂಪಿಯನ್ ಪಟ್ಟಗಳನ್ನು ಅಲಂಕರಿಸಿದ್ದ ಸುಶೀಲ್ ಆಗಾಗ ತೋರಿದ ದುರ್ವರ್ತನೆಗಳಿಂದಲೂ ಸುದ್ದಿಯಾಗಿದ್ದರು.

Recent Articles

spot_img

Related Stories

Share via
Copy link