ಬೆಂಗಳೂರು:
ವಿರಾಟ್ ಹಿಂದೂಸ್ತಾನ್ ಸಂಘಟನೆ ಆಯೋಜಿಸಿದ್ದ ಶ್ರೀ ಅಯ್ಯರ್ ಮತ್ತು ಜಗದೀಶ್ ಶೆಟ್ಟಿ ರಚಿತ ‘ಪೇಪರ್ ಇನ್ ಮನಿ ಔಟ್’ ಎಂಬ ಪುಸ್ತಕ ಬಿಡುಗಡೆಗೊಳಿಸಿದ ಬಳಿಕ ಅವರು ಮಾತನಾಡಿದರು.
ವಿದೇಶದಲ್ಲಿರುವ ಕಪ್ಪು ಹಣವನ್ನು ದೇಶಕ್ಕೆ ತರುವಲ್ಲಿ ಕೇಂದ್ರ ಸರ್ಕಾರ ಯಾವುದೇ ಕ್ರಮಗಳನ್ನು ಕೈಗೊಳ್ಳಲಿಲ್ಲ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರ ವಿರುದ್ಧ ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಭಾನುವಾರ ವಾಗ್ದಾಳಿ ನಡೆಸಿದರು.
ಹಲವು ರಾಷ್ಟ್ರಗಳು ವಿಶ್ವಸಂಸ್ಥೆಯ ಮೂಲಕ ತಮ್ಮ ರಾಜಕಾರಣಿಗಳು ವಿದೇಶಿ ಬ್ಯಾಂಕ್‌ಗಳಲ್ಲಿ ಹೊಂದಿದ್ದ ಕಪ್ಪು ಹಣವನ್ನು ವಾಪಾಸ್ ತಂದಿವೆ. ಇದೇ ಮಾರ್ಗ ಅನುಸರಿಸುವಂತೆ ನಾನು ಪ್ರಧಾನಿ ಮೋದಿ ಅವರಿಗೆ ಮನವಿ ಮಾಡಿದ್ದೆ. ಆದರೆ, ಅವರು ಕಪ್ಪು ಹಣ ತರಲು ಉತ್ಸಾಹ ತೋರಲಿಲ್ಲ. ಸೋನಿಯಾ ಗಾಂಧಿ ಅವರ ವಿರುದ್ಧ ಕ್ರಮ ಕೈಗೊಳ್ಳಲು ಪ್ರಧಾನಿ ಮೋದಿ ಅವರು ಹೆದರುತ್ತಿದ್ದಾರೆ ಎಂದು ಹೇಳಿದರು.