ಅನಧಿಕೃತವಾಗಿ ಮನೆ ನಿರ್ಮಿಸಿದವರಿಗೆ ಸಿಹಿ ಸುದ್ದಿ: ಅಕ್ರಮ-ಸಕ್ರಮ ಯೋಜನೆ ಜಾರಿಗೆ ಸರ್ಕಾರ ಚಿಂತನೆ

ಬೆಂಗಳೂರು:

 ಅನಧಿಕೃತವಾಗಿ ನಿರ್ಮಾಣಗೊಂಡ ಕಟ್ಟಡಗಳು, ಅನುಮೋದನೆ ಇಲ್ಲದ ಬಡಾವಣೆ ಸೇರಿದಂತೆ ನಿಯಮ ಉಲ್ಲಂಘಿಸಿದ ಕಟ್ಟಡಗಳಿಗೆ ಅಕ್ರಮ-ಸಕ್ರಮ ಯೋಜನೆಯಡಿ ಸಕ್ರಮಗೊಳಿಸಲು ಸರ್ಕಾರ ಮುಂದಾಗಿದೆ.ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಅಕ್ರಮ ಕಟ್ಟಡಗಳನ್ನು ಒಂದು ಬಾರಿ ದಂಡಶುಲ್ಕದೊಂದಿಗೆ ಸಕ್ರಮಗೊಳಿಸಲು ಸರ್ಕಾರ ಚಿಂತನೆ ನಡೆಸಿದೆ.

ಜಾನುವಾರುಗಳ ಆಯಂಬುಲೆನ್ಸ್‌ : ನಾಳೆ ಚಾಲನೆ

ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ನಿರ್ಮಾಣಗೊಂಡ ಕಟ್ಟಡಗಳು, ಅನುಮೋದನೆ ಇಲ್ಲದ ಬಡಾವಣೆಗಳು, ನಕ್ಷೆ ಮಂಜೂರಾತಿ ಇಲ್ಲದೆ ನಿರ್ಮಾಣವಾಗಿರುವ ಲಕ್ಷಾಂತರ ಆಸ್ತಿಗಳಿದ್ದು, ಇವುಗಳಿಗೆ ಸ್ಥಳೀಯ ಸಂಸ್ಥೆಗಳಿಂದ ಕುಡಿಯುವ ನೀರು, ರಸ್ತೆ, ಚರಂಡಿ, ವಿದ್ಯುತ್ ಇತರೆ ಸೌಲಭ್ಯ ಕಲ್ಪಿಸಲಾಗಿದೆ. ಆದರೆ, ಅಕ್ರಮ ಕಟ್ಟಡಗಳ ಆಗಿರುವುದರಿಂದ ಸ್ಥಳೀಯ ಸಂಸ್ಥೆಗಳಿಗೆ ತೆರಿಗೆ ಸಂಗ್ರಹವಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಅಕ್ರಮ ಕಟ್ಟಡಗಳನ್ನ ಒಂದು ಬಾರಿ ದಂಡಶುಲ್ಕದೊಂದಿಗೆ ಸಕ್ರಮಗೊಳಿಸಲು ಕ್ರಮಕೈಗೊಳ್ಳಲಾಗಿದೆ ಎಂದು ಹೇಳಲಾಗಿದೆ.

          ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link