ಸಿಂಥೆಟಿಕ್ ಡ್ರಗ್ಸ್ ಮಾರಾಟಕ್ಕೆ ಕಡಿವಾಣ ಹಾಕಲು ಕ್ರಮ: ಡಾ ಜಿ ಪರಮೇಶ್ವರ್

ಬೆಂಗಳೂರು:

   ಇತ್ತೀಚಿನ ದಿನಗಳಲ್ಲಿ ಡ್ರಗ್ಸ್ ಹಾವಳಿ ಹೆಚ್ಚಾಗಿದ್ದು, ಯುವಜನತೆಗೆ ಸುಲಭವಾಗಿ ಮಾರುಕಟ್ಟೆಗಳಲ್ಲಿ ಮಾದಕ ವಸ್ತು, ಡಗ್ಸ್ ದೊರಕುತ್ತಿದೆ ಎಂಬ ಆರೋಪ ಸಾಕಷ್ಟು ಕೇಳಿಬರುತ್ತಿದೆ.

   ಈ ಬಗ್ಗೆ ಪ್ರತಿಕ್ರಿಯಿಸಿರುವ ಗೃಹ ಸಚಿವ ಡಾ ಜಿ ಪರಮೇಶ್ವರ್, ಕರ್ನಾಟಕದಲ್ಲಿ ಡ್ರಗ್ಸ್ ದಂಧೆ ಹತ್ತಿಕ್ಕಲು ಕ್ರಮ ಕೈಗೊಳ್ಳುತ್ತೇವೆ. ಡ್ರಗ್ಸ್ ದಂಧೆ ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಕಡಿಮೆಯಾಗಿದೆ. ಆದಾಗ್ಯೂ, ಮೆಡಿಕಲ್ ಸ್ಟೋರ್​​ಗಳಲ್ಲಿ ಕೂಡ ಸಿಂಥೆಟಿಕ್ ಡ್ರಗ್ಸ್ ಸಿಗುತ್ತಿದೆ ಎಂಬ ಮಾಹಿತಿ ಬಂದಿದ್ದು, ಇದು ನಮಗೆ ಆತಂಕ ಮೂಡಿಸಿದೆ ಎಂದು ಎಂದಿದ್ದಾರೆ.

   ಅವುಗಳನ್ನು ಹೇಗೆ ನಿಯಂತ್ರಿಸಿ ಕಡಿವಾಣ ಹಾಕಬೇಕು ಎಂದು ಇಂದಿನ ಸಭೆಯಲ್ಲಿ ಚರ್ಚಿಸಲಾಗುವುದು. ಡ್ರಗ್ಸ್ ಮಾರಾಟಕ್ಕೆ ಕಾನೂನೇ ಬೇರೆ ಆಗುತ್ತದೆ. ಔಷಧ ಎಂದು ಹೇಳುತ್ತಾರೆ. ಅದಕ್ಕೆ ಆ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಜೊತೆ ಚರ್ಚೆ‌ ಮಾಡುತ್ತೇವೆ ಎಂದರು.

Recent Articles

spot_img

Related Stories

Share via
Copy link