ಭದ್ರಾ ಮೇಲ್ದಂಡೆ : ಯೋಜನೆ ಅನುಷ್ಠಾನಕ್ಕೆ ಟಿ.ಬಿ. ಜಯಚಂದ್ರ ಸೂಚನೆ

ಬೆಂಗಳೂರು

    ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿಯನ್ನ ಮುಂದಿನ ಒಂದು ವರ್ಷದಲ್ಲಿ ಅನುಷ್ಠಾನಗೊಳಿಸಿ ರೈತರಿಗೆ ನೀರು ನೀಡಬೇಕೆಂದು ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ. ಜಯಚಂದ್ರ ಹೇಳಿದ್ದಾರೆ .

    ವಿಧಾನಸೌಧದಲ್ಲಿ ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿ ಪ್ರಗತಿ ಪರಿಶೀಲನೆ ಸಭೆ ನಡೆಸಿ ಮಾತನಾಡಿದ ಅವರು, ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿಗೆ ವೇಗ ನೀಡುವ ಸಂಬAಧ ಉಪಮುಖ್ಯಮಂತ್ರಿಗಳು ಹಾಗೂ ಜಲಸಂಪನ್ಮೂಲ ಸಚಿವರು ಆಗಿರುವ ಡಿಕೆ ಶಿವಕುಮಾರ್ ಅವರ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಆ ಭಾಗದ ಶಾಸಕರ ಹಾಗೂ ಸಂಸದರ ಸಭೆಯನ್ನು ಅತಿ ಶೀಘ್ರದಲ್ಲಿ ಕರೆಯುವುದಾಗಿ ಇದೇ ವೇಳೆ ಜಯಚಂದ್ರ ಅವರು ತಿಳಿಸಿದರು.

    ಅಷ್ಟೇ ಅಲ್ಲ ಕೇಂದ್ರ ಸಚಿವರಾಗಿರುವ ಶೋಭಾ ಕರಂದ್ಲಾಜೆ ಹಾಗೂ ನಾರಾಯಣಸ್ವಾಮಿ ಅವರ ಜೊತೆ ತಮ್ಮ ನೇತೃತ್ವದಲ್ಲಿ ದೆಹಲಿಯಲ್ಲಿ ಸಭೆ ನಡೆಸುವುದಾಗಿ ಜಯಚಂದ್ರ ಅವರು ತಿಳಿಸಿದರು.

    ಈ ತಿಂಗಳ 18ರಿಂದ ಲೋಕಸಭೆ ಅಧಿವೇಶನ ನಡೆಯಲಿದ್ದು ಆ ಸಮಯದಲ್ಲಿ ತಾವು ದೆಹಲಿಗೆ ತೆರಳಿ ಕೇಂದ್ರ ಜಲಸಂಪನ್ಮೂಲ ಹಾಗೂ ಕೇಂದ್ರ ಹಣಕಾಸು ಸಚಿವರನ್ನು ಸಹ ಭೇಟಿಯಾಗಿ ಭದ್ರಾ ಮೇಲ್ದಂಡೆ ಯೋಜನೆಗೆ ಇರುವ ತೊಡಕುಗಳನ್ನ ನಿವಾರಿಸಿ ಹಣ ನೀಡುವಂತೆ ಒತ್ತಾಯಿಸುವುದಾಗಿ ಜಯಚಂದ್ರ ಅವರು ತಿಳಿಸಿದರು.

   21473 ಕೋಟಿ ವೆಚ್ಚದ ಈ ಕೇಂದ್ರದ ಯೋಜನೆಗೆ ಕೇಂದ್ರ ಸರ್ಕಾರ ಪ್ರಸಕ್ತ ಸಾಲಿನಲ್ಲಿ 5300 ಕೋಟಿ ರೂಪಾಯಿ ನೀಡುವುದಾಗಿ ಹೇಳಿದ್ದು ಕೇಂದ್ರ ಜಲಶಕ್ತಿ ಹಾಗೂ ಕೇಂದ್ರ ಆರ್ಥಿಕ ಇಲಾಖೆ ಅಧಿಕಾರಿಗಳ ಜೊತೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಕಳೆದ ವಾರ ಸಭೆ ನಡೆಸಿದ್ದಾರೆ ಎಂದು ಕಾವೇರಿ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಸಣ್ಣ ಚಿತ್ತಯ್ಯ ಅವರು ಸಭೆಯಲ್ಲಿ ವಿವರಿಸಿದರು. ಪ್ರಧಾನಮಂತ್ರಿಯವರ ಸಭೆಯ ವಿವರಗಳ ಮಾಹಿತಿ ಇಂದು ಸಂಜೆ ಗೊತ್ತಾಗುತ್ತದೆ ಎಂದು ಇದೇ ವೇಳೆ ಅವರು ತಿಳಿಸಿದರು.

    ಈ ಯೋಜನೆಗೆ ರಾಜ್ಯ ಸರ್ಕಾರ ಕಳೆದ ಬಜೆಟ್ ನಲ್ಲಿ 2500 ಕೋಟಿ ರೂಪಾಯಿ ತೆಗೆದಿರಿಸಿದೆ .ತಕ್ಷಣವೇ ರಾಜ್ಯ ಸರ್ಕಾರ 500 ಕೋಟಿ ರೂಪಾಯಿಗಳು ನೀಡಲು ಸಿದ್ದವಿದ್ದು ಕೇಂದ್ರ ಸರ್ಕಾರ ಕನಿಷ್ಠ 2000 ಕೋಟಿ ರೂಪಾಯಿಗಳನ್ನು ನೀಡುವಂತೆ ಸಹ ರಾಜ್ಯ ಸರ್ಕಾರ ಒತ್ತಾಯಿಸುತ್ತಿದೆ.

    ತರೀಕೆರೆ, ಕಡೂರು ಹಾಗು ಅಜ್ಜಂಪುರದಲ್ಲಿ 220ಕ್ಕೂ ಹೆಚ್ಚು ರೈತರು ಭೂಸ್ವಾಧೀನ ಪ್ರಕ್ರಿಯೆಗೆ ಸಂಬಂಧಿಸಿದಂತೆ ಹೆಚ್ಚಿನ ಹಣವನ್ನು ಪರಿಹಾರ ಕೋರಿ ಚಿಕ್ಕಮಗಳೂರು ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಿದ್ದಾರೆ. ಈ ಮೊಕದ್ದಮೆಗಳನ್ನು ಆದಷ್ಟು ಶೀಘ್ರವಾಗಿ ಇತ್ಯರ್ಥಪಡಿಸಿದರೆ ಯೋಜನೆಗೆ ವೇಗ ಸಿಗಲಿದೆ ಎಂದು ಇದೆ ವೇಳೆ ನೀರಾವರಿ ನಿಗಮದ ವ್ಯವಸ್ಥಾಪಕರು ನಿರ್ದೇಶಕರು ತಿಳಿಸಿದರು.

    ಕಾನೂನು ಇಲಾಖೆ ಕಾರ್ಯದರ್ಶಿ ಜಗದೀಶ್ ಅವರು ಮಾತನಾಡಿ ಈ ಎಲ್ಲಾ ಮೊಕದ್ದಮೆಗಳನ್ನು ಲೋಕ ಅದಾಲತ್ ನಲ್ಲಿ ಮಂಡಿಸಿ ರೈತರಿಗೆ ಅಲ್ಲಿಯೇ ಪರಿಹಾರ ನೀಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು. ಈ ನಿಟ್ಟಿನಲ್ಲಿ ಆ ಭಾಗದ ಜನಪ್ರತಿನಿಧಿಗಳ ಸಭೆಯನ್ನು ಸಹ ಕರೆಯುವಂತೆ ಜಗದೀಶ್ ಅವರು ಸಲಹೆ ನೀಡಿದರು

     ತರೀಕೆರೆ ಕಡೂರು ಚಿಕ್ಕನಾಯಕನಹಳ್ಳಿ ಹಾಗೂ ಹೊಸದುರ್ಗ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಆದಷ್ಟು ಬೇಗ ಭೂಸ್ವಾಧೀನ ಮಾಡಿ ಕಾಮಗಾರಿಗೆ ಚಾಲನೆ ನೀಡಿದರೆ ಮುಂದಿನ ಒಂದೆರಡು ವರ್ಷಗಳಲ್ಲಿ ನೀರು ತರಬಹುದು ಎಂದು ಇದೆ ವೇಳೆ ಜಯಚಂದ್ರ ಅವರು ತಿಳಿಸಿದರು

     ಕಾವೇರಿ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಸಣ್ಣ ಚಿತ್ತಯ್ಯ ಹಾಗೂ ಕಾನೂನು ಇಲಾಖೆ ಕಾರ್ಯದರ್ಶಿ ಜಗದೀಶ್ ಸೇರಿದಂತೆ ಜಲಸಂಪನ್ನೂಲ ಇಲಾಖೆಯ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap