ನ್ಯೂಯಾರ್ಕ್:
ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಪಾಲ್ಗೊಂಡಿರುವ ಭಾರತ ತಂಡ ಅಲ್ಲಿನ ಆಹಾರ ಮತ್ತು ಮೂಲಭೂತ ಸೌಕರ್ಯಗಳ ಕುರಿತು ಚಕಾರವೆತ್ತಿದೆ.
ಕಳೆದ ಮೂರು ದಿನಗಳಿಂದ ಟೀಮ್ ಇಂಡಿಯಾದ ಆಟಗಾರರು ನ್ಯೂಯಾರ್ಕ್ನಲ್ಲಿ ಅಭ್ಯಾಸ ನಡೆಸುತ್ತಿದ್ದು, ಆಟಗಾರರು ಇಂದು ಬ್ಯಾಟಿಂಗ್ ಮತ್ತು ಬೌಲಿಂಗ್ ಅಭ್ಯಾಸ ಕೂಡ ಆರಂಭಿಸಿದ್ದಾರೆ. ಆದರೆ ಇಲ್ಲಿ ಅಭ್ಯಾಸ ನಡೆಸಲು ಉನ್ನತ ಸೌಲಭ್ಯಗಳಿಲ್ಲ ಎಂದು ನಾಯಕ ರೋಹಿತ್ ಶರ್ಮಾ ಮತ್ತು ಕೋಚ್ ರಾಹುಲ್ ದ್ರಾವಿಡ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದು ವರದಿಯಾಗಿದೆ.
ಅಲ್ಲದೆ ಈ ಸಂಬಂಧ ತಂಡದ ನಾಯಕ ರೋಹಿತ್ ಶರ್ಮ ಮತ್ತು ಕೋಚ್ ರಾಹುಲ್ ದ್ರಾವಿಡ್ ಬಿಸಿಸಿಐಗೆ ದೂರು ಸಲ್ಲಿಸಿದ್ದಾರೆ ಎನ್ನಲಾಗಿದೆ.
ಕಳೆದ ಮೂರು ದಿನಗಳಿಂದ ಟೀಮ್ ಇಂಡಿಯಾದ ಆಟಗಾರರು ನ್ಯೂಯಾರ್ಕ್ನಲ್ಲಿ ಅಭ್ಯಾಸ ನಡೆಸುತ್ತಿದ್ದು, ಆಟಗಾರರು ಇಂದು ಬ್ಯಾಟಿಂಗ್ ಮತ್ತು ಬೌಲಿಂಗ್ ಅಭ್ಯಾಸ ಕೂಡ ಆರಂಭಿಸಿದ್ದಾರೆ. ಅಮೆರಿಕದ ವಾತಾವರಣಕ್ಕೆ ಹೊಂದಿಕೊಳ್ಳುವ ಸಲುವಾಗಿ ಬುಧವಾರ ಮತ್ತು ಗುರುವಾರ ಆಟಗಾರರು ಕೇವಲ ಜಾಗಿಂಗ್ ನಡೆಸಿ, ಫುಟ್ಬಾಲ್ ಆಡಿದ್ದರು. ಆದರೆ ಇಲ್ಲಿ ಅಭ್ಯಾಸ ನಡೆಸಲು ಉನ್ನತ ಸೌಲಭ್ಯಗಳಿಲ್ಲ ಎಂದು ನಾಯಕ ರೋಹಿತ್ ಮತ್ತು ಕೋಚ್ ರಾಹುಲ್ ದ್ರಾವಿಡ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದು ವರದಿಯಾಗಿದೆ.
ವರದಿಯ ಪ್ರಕಾರ ಭಾರತ ತಂಡದ ಆಟಗಾರಿಗೆ ಗುಣಮಟ್ಟದ ಆಹಾರ ಸಿಗುತ್ತಿಲ್ಲ. ಈ ವಿಚಾರಗಳನ್ನು ಬಿಸಿಸಿಐ ಆಯೋಜಕ ಐಸಿಸಿ ಗಮನಕ್ಕೆ ತಂದಿದೆ ಎಂದು ವರದಿಯಾಗಿದೆ.








