ಟಿ20 ವಿಶ್ವಕಪ್ ಸಂಪೂರ್ಣ ವೇಳಾಪಟ್ಟಿ ಪ್ರಕಟ

T20 World Cup 2022: ಟಿ20 ವಿಶ್ವಕಪ್ ಸಂಪೂರ್ಣ ವೇಳಾಪಟ್ಟಿ ಪ್ರಕಟ: ಭಾರತಕ್ಕೆ ಮೊದಲ ಎದುರಾಳಿ ಪಾಕಿಸ್ತಾನ

                ಭಾರತಕ್ಕೆ ಮೊದಲ ಎದುರಾಳಿ ಪಾಕಿಸ್ತಾನ

         ಈ ವರ್ಷಾಂತ್ಯದಲ್ಲಿ ಮತ್ತೊಂದು ಟಿ20 ವಿಶ್ವಕಪ್‌ಗೆ ಕ್ರಿಕೆಟ್ ಅಭಿಮಾನಿಗಳು ಸಾಕ್ಷಿಯಾಗಿದ್ದಾರೆ. ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಈ ವಿಶ್ವಕಪ್ ಟೂರ್ನಿಯ ವೇಳಾಪಟ್ಟಿಯನ್ನು ಐಸಿಸಿ ಅಧಿಕೃತವಾಗಿ ಪ್ರಕಟಿಸಿದೆ.

ಈ ಬಾರಿಯ ಟಿ20 ವಿಶ್ವಕಪ್‌ನಲ್ಲಿಯೂ ಭಾರತ ತನ್ನ ಅಭಿಯಾನವನ್ನು ಬದ್ಧ ಎದುರಾಳಿ ಪಾಕಿಸ್ತಾನದ ವಿರುದ್ಧದ ಪಂದ್ಯದೊಂದಿಗೆ ಆರಂಭಿಸಲಿದೆ.

   ಅಕ್ಟೋಬರ್ 23ರಂದು ಮೆಲ್ಬರ್ನ್ ಕ್ರಿಕೆಟ್ ಗ್ರೌಂಡ್‌ನಲ್ಲಿ ಈ ಪಂದ್ಯ ನಡೆಯಲಿದೆ.

2020ರಲ್ಲಿ ನಡೆಯಬೇಕಿದ್ದ ವಿಶ್ವಕಪ್‌ಅನ್ನು ಕೊರೊನಾವೈರಸ್ ಕಾರಣದಿಂದಾಗಿ ಈ ವರ್ಷಕ್ಕೆ ಮುಂದೂಡಲಾಗಿದೆ. ಒಟ್ಟು 45 ಪಂದ್ಯಗಳು ನಡೆಯಲಿದ್ದು ಅಡಿಲೇಡ್, ಬ್ರಸ್ಬೇನ್, ಜೀಲಾಂಗ್ ಹೋಬಾರ್ಟ್, ಮೆಲ್ಬರ್ನ್, ಪರ್ತ್ ಮತ್ತು ಸಿಡ್ನಿ ಕ್ರೀಡಾಂಗಣಗಳಲ್ಲಿ ನಡೆಯಲಿದೆ.

ಮೊದಲಿಗೆ ಅರ್ಹತಾ ಸುತ್ತಿನ ಪಂದ್ಯಗಳು ನಡೆಯಲಿದ್ದು ಸೂಪರ್ 12 ಹಂತಕ್ಕೆ ಇಲ್ಲಿ ತಂಡಗಳು ಸೆಣೆಸಾಡಲಿದೆ. 2014ರ ಚಾಂಪಿಯನ್ ಶ್ರೀಲಂಕಾ ನಮೋಬಿಯಾ ವಿರುದ್ಧ ಆರಂಭಿಕ ಪಂದ್ಯದಲ್ಲಿ ಮುಖಾಮುಖಿಯಾಗಲಿದೆ. ಎರಡು ಬಾರಿಯ ಚಾಂಪಿಯನ್ ವೆಸ್ಟ್ ಇಂಡೀಸ್ ಕೂಡ ಅರ್ಹತಾ ಸುತ್ತಿನಿಂದ ತಮ್ಮ ಸ್ಪರ್ಧೆಯನ್ನು ಆರಂಭಿಸಲಿದೆ.

ಸೂಪರ್ 12 ಹಂತದಲ್ಲಿ ಆತಿಥೇಯ ಆಸ್ಟ್ರೇಲಿಯಾ ಗ್ರೂಫ್ 1ರಲ್ಲಿದ್ದು ನಂಬರ್ 1 ತಂಡ ಇಂಗ್ಲೆಂಡ್, ನ್ಯೂಜಿಲೆಂಡ್, ಅಫ್ಘಾನಿಸ್ತಾನ, ಹಾಗೂ ಅರ್ಹತಾ ಸುತ್ತಿನ ಎರಡು ತಂಡಗಳು ಈ ಗುಂಪಿನಲ್ಲಿ ಇರಲಿದೆ.

ಗ್ರೂಫ್ 2ರಲ್ಲಿ ಭಾರತ, ಪಾಕಿಸ್ತಾನ, ದಕ್ಷಿಣ ಆಫ್ರಿಕಾ, ಬಾಂಗ್ಲಾದೇಶ ಹಾಗೂ ಅರ್ಹತಾ ಸುತ್ತಿನಿಂದ ತೇರ್ಗಡೆಯಾದ ಎರಡು ತಂಡಗಳು ಸೇರ್ಪಡೆಯಾಗಲಿದೆ.

ಸೂಪರ್ 12 ಹಂತದ ಮೊದಲ ಪಂದ್ಯ ಆತಿಥೇಯ ಆಸ್ಟ್ರೇಲಿಯಾ ಹಾಗೂ ನ್ಯೂಜಿಲೆಂಡ್ ವಿರುದ್ಧ ನಡೆಯಲಿದೆ. ಅಕ್ಟೋಬರ್ 22ರ ಶನಿವಾರ ಎಸ್‌ಸಿಜಿಯಲ್ಲಿ ಈ ಮುಖಾಮುಖಿ ನಡೆಯಲಿದೆ. ಈ ಎರಡು ತಂಡಗಳು ಕಳೆದ ವಿಶ್ವಕಪ್‌ನ ಫೈನಲ್ ಪಂದ್ಯದಲ್ಲಿ ಮುಖಾಮುಖಿಯಾಗಿದ್ದವು.

ವೇಳಾಪಟ್ಟಿ ಹೀಗಿದೆ

ಇನ್ನು ವಿಶ್ವ ಕ್ರಿಕೆಟ್‌ನ ಬದ್ಧ ಎದುರಾಳಿಗಳಾಗಿರುವ ಭಾರತ ಹಾಗೂ ಪಾಕಿಸ್ತಾನ ತಂಡಗಳು ಅಕ್ಟೋಬರ್ 23ರಂದು ಎಂಸಿಜಿಯಲ್ಲಿ ಈ ಮಯಖಾಮುಖಿ ನಡೆಯಲಿದೆ. ಇದು ಎಂಸಿಜಿಯಲ್ಲಿ ನಡೆಯಲಿರುವ ಈ ವಿಶ್ವಕಪ್‌ನ ಮೊದಲ ಮುಖಾಮುಖಿಯೂ ಹೌದು.

ಇದೇ ಮೈದಾನದಲ್ಲಿ ಮತ್ತೊಂದು ಬದ್ಧ ಎದುರಾಳಿಗಳಾದ ಆಸ್ಟ್ರೇಲಿಯಾ ಹಾಗೂ ಇಂಗ್ಲೆಂಡ್ ತಂಡಗಳು ಕೂಡ ಮುಖಾಮುಖಿಯಾಗಲಿದ್ದು ಈ ಪಂದ್ಯ ಅಕ್ಟೋಬರ್ 28ರಂದು ನಡೆಯಲಿದೆ.

ಪಂದ್ಯಗಳನ್ನು ಆಯೋಜಿಸುವ ಏಳು ತಾಣಗಳೆಂದರೆ ಅಡಿಲೇಡ್ ಓವಲ್, ಗಾಬಾ, ಕಾರ್ಡಿನಿಯಾ ಪಾರ್ಕ್ ಸ್ಟೇಡಿಯಂ, ಬೆಲ್ಲೆರಿವ್ ಓವಲ್, ಮೆಲ್ಬರ್ನ್ ಕ್ರಿಕೆಟ್ ಗ್ರೌಂಡ್, ಪರ್ತ್ ಸ್ಟೇಡಿಯಂ ಮತ್ತು ಸಿಡ್ನಿ ಕ್ರಿಕೆಟ್ ಮೈದಾನ.

ಸೆಮಿಫೈನಲ್ ಪಂದ್ಯಗಳು ಸಿಡ್ನಿ ಕ್ರಿಕೆಟ್ ಗ್ರೌಂಡ್ ಹಾಗೂ ಅಡಿಲೇಡ್‌ನಲ್ಲಿ ನಡೆಯಲಿದೆ. ನವೆಂಬರ್ 9 ಹಾಗೂ 10ರಂದು ಈ ಪಂದ್ಯಗಳು ನಡೆಯಲಿದೆ. ಫೈನಲ್ ಪಂದ್ಯ ನವೆಂಬರ್ 13ರಂದು ಮೆಲ್ಬರ್ನ್ ಕ್ರಿಕೆಟ್ ಗ್ರೌಂಡ್‌ನಲ್ಲಿ ನಡೆಯಲಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link