ವಾಷಿಂಗ್ಟನ್: ತಬಲಾ ಮಾಂತ್ರಿಕ ಜಾಕಿರ್ ಹುಸೇನ್ ಅವರು ಹೃದಯ ಸಂಬಂಧಿ ಕಾಯಿಲೆಯಿಂದ ಭಾನುವಾರ (ಡಿ. 15) ಅಮೆರಿಕದಲ್ಲಿ ನಿಧನ ಹೊಂದಿದರು. ಅವರಿಗೆ 73 ವರ್ಷ ವಯಸ್ಸಾಗಿತ್ತು.
ಜಾಕಿರ್ ಹುಸೇನ್ ಅವರ ಆರೋಗ್ಯ ಸ್ಥಿತಿ ತೀರಾ ಗಂಭೀರವಾಗಿದ್ದರಿಂದ ಅವರನ್ನು ಸ್ಯಾನ್ ಫ್ರಾನ್ಸಿಸ್ಕೋ ಆಸ್ಪತ್ರೆಯ ಐಸಿಯುಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿಧನ ಹೊಂದಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಇದಕ್ಕೂ ಮೊದಲು ಈ ಬಗ್ಗೆ ಮಾಹಿತಿ ನೀಡಿದ್ದ ಕೊಳಲು ವಾದಕ ರಾಕೇಶ್ ಚೌರಾಸಿಯಾ ಅವರು ಜಾಕಿರ್ ಹುಸೇನ್ ಅವರನ್ನು ಆಸ್ಪತ್ರೆಗೆ ದಾಖಲಿಸಿದ ವಿಚಾರವನ್ನು ಸುದ್ದಿಗಾರರಿಗೆ ತಿಳಿಸಿದ್ದರು.