ಹೊಸಪೇಟೆ :
ಇಲ್ಲಿಗೆ ಸಮೀಪದ ಟಿ.ಬಿ.ಡ್ಯಾಂನಲ್ಲಿ ತಾಯಮ್ಮಶಕ್ತಿ ಸಂಘದ ವತಿಯಿಂದ ಮಹಿಳೆಯರಿಗೆ ಗುರುವಾರ ಟೈಲರಿಂಗ್ ತರಬೇತಿಯನ್ನು ಆಯೋಜಿಸಲಾಗಿತ್ತು.
ಸುಮಾರು 50ರಿಂದ 60 ಮಹಿಳೆಯರು ತರಬೇತಿಯಲ್ಲಿ ಭಾಗವಹಿಸಿದ್ದರು. ಈ ವೇಳೆ ಮಾತನಾಡಿದ ಸಂಘದ ಅಧ್ಯಕ್ಷೆ ಕವಿತಾ ಈಶ್ವರ್‍ಸಿಂಗ್, ಬಡ ಮಹಿಳೆಯರು ಸ್ವಾವಲಂಭಿಯಾಗಿ ಜೀವನ ನಡೆಸಲು ತಾಯಮ್ಮಶಕ್ತಿ ಸಂಘದ ವತಿಯಿಂದ ಉಚಿತ ಟೈಲರಿಂಗ್ ತರಬೇತಿಯನ್ನು ನೀಡಲಾಗುತ್ತಿದೆ. ಈಗಾಗಲೇ 50ರಿಂದ 60 ಮಹಿಳೆಯರು ತರಬೇತಿಗೆ ನೊಂದಣಿ ಮಾಡಿಸಿಕೊಂಡಿದ್ದಾರೆ. ಇನ್ನುಳಿದವರು ಯಾರಾದರೂ ಇದ್ದರೆ ನೊಂದಣಿ ಮಾಡಿಸಿಕೊಳ್ಳಬಹುದು. 3 ತಿಂಗಳು ತರಬೇತಿ ಇರುತ್ತದೆ. ತರಬೇತಿ ನಂತರ ಹೊಲಿಗೆ ಯಂತ್ರಗಳನ್ನು ನೀಡಲಾಗುವುದು ಎಂದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
