ನವದೆಹಲಿ:
ಕರ್ನಾಟಕದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ವಿರುದ್ಧ ಸಿಬಿಐ ದಾಖಲಿಸಿದ್ದ ಆದಾಯ ಮೀರಿ ಆಸ್ತಿ ಗಳಿಗೆ ಪ್ರಕರಣ ಸಂಬಂಧ ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆಯನ್ನು ನೀವು ಹೈಕೋರ್ಟ್ ನಲ್ಲೇ ಮಾಡಿಕೊಳ್ಳಿ ಎಂದು ಸುಪ್ರೀಂ ಕೋರ್ಟ್ ಸೂಚಿಸಿದೆ. ಈ ಮೂಲಕ ಸಿಬಿಐ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ಇತ್ಯರ್ಥ ಪಡಿಸಿದೆ.
ಸುಪ್ರೀಂ ಕೋರ್ಟ್ ನ ನ್ಯಾಯಮೂರ್ತಿ ಬೇಲಾ ತ್ರಿವೇದಿ ನೇತೃತ್ವದ ದ್ವಿಸದಸ್ಯ ನ್ಯಾಯಪೀಠದಲ್ಲಿ ಡಿ.ಕೆ ಶಿವಕುಮಾರ್ ಅವರ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ ಸಂಬಂಧದ ಅರ್ಜಿಯ ವಿಚಾರಣೆಯನ್ನು ನಡೆಸಿತು.
ಸಿಬಿಐ ತನಿಖೆಗೆ ಹೈಕೋರ್ಟ್ ವಿಭಾಗೀಯ ಪೀಠವು ತಡೆ ನೀಡಿದ್ದರ ಬಗ್ಗೆಯೂ ವಿಚಾರಣೆ ನಡೆಯಿತು. ಅಲ್ಲದೇ ತಡೆ ರದ್ದು ಕೋರಿ ಹೈಕೋರ್ಟ್ ಗೆ ಅರ್ಜಿ ಯಲ್ಲಿ ಸಿಬಿಐ ಸಲ್ಲಿಸಿದ್ದಲ್ಲದೇ, ಸುಪ್ರೀಂ ಕೋರ್ಟ್ ನಲ್ಲಿಯೂ ಮೇಲ್ಮನವಿ ಸಲ್ಲಿಸಿತ್ತು.
ಈ ಹಿನ್ನಲೆಯಲ್ಲಿ ನ್ಯಾಯಮೂರ್ತಿ ಬೇಲಾ ತ್ರಿವೇದಿ ಅವರ ನೇತೃತ್ವದ ದ್ವಿಸದಸ್ಯ ನ್ಯಾಯಪೀಠವು ಹೈಕೋರ್ಟ್ ನಲ್ಲೇ ಪ್ರಕರಣದ ಅರ್ಜಿಯ ವಿಚಾರಣೆಯನ್ನು ನಡೆಸಿಕೊಳ್ಳುವಂತೆ ಸೂಚಿಸಿ, ಅರ್ಜಿಯನ್ನು ಇತ್ಯರ್ಥ ಪಡಿಸಿ ಆದೇಶಿಸಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ