ಬಿಜೆಪಿ ಸರ್ಕಾರ ಕುರಿತು ಮಾಧ್ಯಮಗಳ ಜತೆ ಮಾತನಾಡಿದ ಡಿ.ಕೆ. ಶಿವಕುಮಾರ್ !

ಬೆಂಗಳೂರು :

  ನಾವು ಮುಖ್ಯಮಂತ್ರಿ ಮನೆಗೆ ಘೇರಾವ್ ಹಾಕಲು ಹೋದಾಗ ನಮ್ಮನ್ನು ಬಂಧಿಸಿ, ಪ್ರಕರಣ ದಾಖಲಿಸಿದ್ದಾರೆ.ಈಶ್ವರಪ್ಪನವರು ಮೆರವಣಿಗೆ ಮೂಲಕ ಸಿಎಂ ಮನೆಗೆ ಬಂದು ರಾಜೀನಾಮೆ ನೀಡಿದರು. ಈ ಸಂದರ್ಭದಲ್ಲಿ ಬಿಜೆಪಿ ನಾಯಕರು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದರು. ಅವರು ಕೂಗಾಟ, ಚೀರಾಟ ಮಾಡಿದ್ದು ಮಾಧ್ಯಮಗಳಲ್ಲಿ ವರದಿಯಾಗಿದ್ದರೂ, ಅವರ ಮೇಲೆ ಯಾವುದೇ ಪ್ರಕರಣ ದಾಖಲಿಸಿಲ್ಲ.

 ‘ಕೆಜಿಎಫ್ 2’ 3ನೇ ದಿನದ ಕಲೆಕ್ಷನ್ ಎಷ್ಟು? ಇಳಿಕೆಯೋ ಏರಿಕೆಯೊ?

ಈಶ್ವರಪ್ಪನವರು ಶಿವಮೊಗ್ಗದಲ್ಲಿ ಸೆಕ್ಷನ್ 144 ಉಲ್ಲಂಘನೆ ಮಾಡಿ ಹರ್ಷ ಶವಯಾತ್ರೆ ಮಾಡಿದರೂ ಕೇಸ್ ಹಾಕಲಿಲ್ಲ. ಹೀಗೆ ಹಲವು ಬಾರಿ ಬಿಜೆಪಿ ನಾಯಕರು ಕಾನೂನು ಉಲ್ಲಂಘಿಸಿದರೂ ಅವರ ಮೇಲೆ ಕೇಸ್ ಹಾಕದೆ, ನಮ್ಮ ಮೇಲೆ ಮಾತ್ರ ದಾಖಲಿಸುತ್ತಿದ್ದಾರೆ.

ಕಳೆದ ಒಂದು ವರ್ಷದಲ್ಲಿ ನೈತಿಕ ಪೊಲೀಸ್ ಗಿರಿ ಹೆಸರಲ್ಲಿ ಭಜರಂಗದಳ ಹಾಗೂ ಬಿಜೆಪಿ ಕಾರ್ಯಕರ್ತರು ಅನೇಕ ಬಾರಿ ಕಾನೂನು ಕೈಗೆತ್ತಿಕೊಂಡಿದ್ದಾರೆ. ನೈತಿಕ ಪೊಲೀಸ್ ಗಿರಿ ಮಾಡಿದರೆ ತಪ್ಪೇನು ಎಂದು ಮುಖ್ಯಮಂತ್ರಿಗಳೇ ಪ್ರೋತ್ಸಾಹ ನೀಡುತ್ತಿದ್ದಾರೆ.

ಪೊಲೀಸ್ ಠಾಣೆಯಲ್ಲಿ ಅಧಿಕಾರಿಗಳು ಸಮವಸ್ತ್ರ ತ್ಯಜಿಸಿ ಕೇಸರಿ ವಸ್ತ್ರ ಧರಿಸಿದರೂ ಸಿಎಂ, ಗ್ರಹಮಂತ್ರಿ ಸುಮ್ಮನಿದ್ದರು.ಹುಬ್ಬಳ್ಳಿ ಚರ್ಚ್ ಗೆ ನುಗ್ಗಿ ಬಲವಂತವಾಗಿ ಭಜನೆ ಮಾಡಿದರು. ಅನ್ಯಧರ್ಮಿಯರು ಜಾತ್ರೆಗಳಲ್ಲಿ ವ್ಯಾಪಾರ ಮಾಡಬಾರದು ಎಂದು ನಿರ್ಬಂಧ ಹೇರಿದರು.

 ಪಾಯಿಂಟ್ ಟೇಬಲ್ ಅನ್ನೇ ತಲೆಕೆಳಗಾಗಿಸಿದ ಆರ್​ಸಿಬಿ ಗೆಲುವು: ಇಲ್ಲಿದೆ ನೂತನ ಅಂಕಪಟ್ಟಿ

ನಿನ್ನೆ ಹುಬ್ಬಳ್ಳಿಯಲ್ಲಿ ನಡೆದಿರುವ ಘಟನೆಯನ್ನು ಕಾಂಗ್ರೆಸ್ ಪಕ್ಷ ಉಗ್ರವಾಗಿ ಖಂಡಿಸುತ್ತದೆ. ಯಾರೂ ಕಾನೂನು ಕೈಗೆ ತೆಗೆದುಕೊಳ್ಳಬಾರದು. ಪೊಲೀಸ್ ಅಧಿಕಾರಿಗಳು ನಿಷ್ಪಕ್ಷಪಾತವಾಗಿ ಕೆಲಸ ಮಾಡಿ ಪರಿಸ್ಥಿತಿ ನಿಭಾಯಿಸಿದ್ದಾರೆ. ನಾವು ಅವರನ್ನು ಗೌರವಿಸುತ್ತೇವೆ, ಅಭಿನಂದಿಸುತ್ತೇವೆ.

ಸಾರ್ವಜನಿಕ ಆಸ್ತಿಗಳ ಮೇಲೆ ಕಲ್ಲು ಎಸೆದು ಹಾನಿ ಮಾಡಲು ಇವರು ಯಾರು? ನಾನು ಹುಬ್ಬಳ್ಳಿಗೆ ಹೋಗುತ್ತೇನೆ. ರಾಜ್ಯದಲ್ಲಿ ಶಾಂತಿ ಕಾಪಾಡುವುದು ಅವಶ್ಯಕ. ರಾಜ್ಯದಲ್ಲಿ ಬಂಡವಾಳ ಹೂಡಿಕೆ ಆಗಬೇಕಾದರೆ ಇಂತಹ ಘಟನೆ ನಡೆಯಬಾರದು.

ಅಣ್ವಸ್ತ್ರ ದಾಳಿ ಭೀತಿಯಲ್ಲಿ ಜಗತ್ತು, ಉಕ್ರೇನ್​ ಬೆಂಬಲಕ್ಕೆ ಸಬ್​ಮರೀನ್ ಕಳುಹಿಸಿದ ಬ್ರಿಟನ್, ಕೆರಳಿದ ರಷ್ಯಾ

ಮಾಧ್ಯಮಗಳ ವರದಿ ಪ್ರಕಾರ ಮಠಗಳಿಗೆ ನೀಡುವ ಅನುದಾನದಲ್ಲೂ ಶೇ.30 ರಷ್ಟು ಕಮಿಷನ್ ಪಡೆಯಲಾಗುತ್ತಿದೆ. ಇದಕ್ಕೆಲ್ಲ ಯಾರು ಹೊಣೆ? ದಿನ ನಿತ್ಯ ಇಂತಹ ಪ್ರಕರಣಗಳು ಹೊರಬರುತ್ತಿವೆ. ಮಾಹಿತಿ ತಂತ್ರಜ್ಞಾನ, ನವೋದ್ಯಮ ರಾಜಧಾನಿಯಾಗಿದ್ದ ಕರ್ನಾಟಕವನ್ನು ಭ್ರಷ್ಟಾಚಾರ ರಾಜಧಾನಿಯನ್ನಾಗಿ ಮಾಡಿದ್ದಾರೆ. ಮೋದಿ ಅವರು ದೇಶದ ವ್ಯವಸ್ಥೆ ಸರಿಪಡಿಸುವುದಾಗಿ ಹೇಳಿದ್ದರು. ಆದರೆ ಈಗ ಏನಾಗಿದೆ? ಇದು ಕೇವಲ ರಾಜ್ಯದ್ದು ಮಾತ್ರವಲ್ಲ, ದೇಶದ ಘನತೆ ಪ್ರಶ್ನೆ. ಕೋಮು ಗಲಭೆ, ನಿರುದ್ಯೋಗ ಸಮಸ್ಯೆ ಹೆಚ್ಚಾಗಿದೆ. ಈ ಮಧ್ಯೆ ಧಾರ್ಮಿಕ ದ್ವೇಷ ಹಬ್ಬಿಸುತ್ತಿದ್ದಾರೆ.

ಈ ಎಲ್ಲ ಪರಿಸ್ಥಿತಿಗೆ ಬಿಜೆಪಿ ಸರ್ಕಾರದ ದೌರ್ಬಲ್ಯವೇ ಕಾರಣ. ಸರ್ಕಾರ ಅವರ ಪಕ್ಷದವರ ಮೇಲೆ ಸರಿಯಾಗಿ ಕ್ರಮ ಜರುಗಿಸಿ, ಅವರನ್ನು ನಿಯಂತ್ರಣದಲ್ಲಿ ಇಟ್ಟಿದ್ದರೆ ಇಂತಹ ಅನಾಹುತ ಆಗುತ್ತಿರಲಿಲ್ಲ.

 ಚೀನಾದ ಶಾಂಘೈನಲ್ಲಿ ಕೊರೊನಾಗೆ ಮೂವರು ಬಲಿ, ಲಾಕ್‌ಡೌನ್‌ ಬಳಿಕ ಮೊದಲ ಸಾವಿನ ವರದಿ

ಹುಬ್ಬಳ್ಳಿ ಘಟನೆಯಲ್ಲಿ ಪ್ರಭಾವಿ ವ್ಯಕ್ತಿಗಳ ಕೈವಾಡದ ಬಗ್ಗೆ ಸರ್ಕಾರ ಶಂಕೆ ವ್ಯಕ್ತಪಡಿಸಿರುವ ಬಗ್ಗೆ ಕೇಳಿದ ಪ್ರಶ್ನೆಗೆ, ‘ಯಾವುದೇ ಪ್ರಭಾವಿ ವ್ಯಕ್ತಿಯ ಕೈವಾಡ ಇದ್ದರೂ ಅವರನ್ನು ಒದ್ದು ಒಳಗೆ ಹಾಕಲಿ, ನನ್ನ ಕೈವಾಡ ಇದ್ದರೂ ನನ್ನನ್ನು ಒಳಗೆ ಹಾಕಲಿ. ಇನ್ನು ಮಾಂಸ ಖರೀದಿ ಮಾಡಬೇಡಿ, ವ್ಯಾಪಾರ ಮಾಡಬೇಡಿ ಎಂದೆಲ್ಲ ಹೇಳಿದರು. ಪರಿಣಾಮ ರೈತರಿಂದ ಕುರಿ ಖರೀದಿ ಪ್ರಮಾಣ, ಬೆಲೆ ಕುಸಿದಿದೆ. ಈ ರೀತಿ ಜನರ ಹೊಟ್ಟೆ ಮೇಲೆ ಒಡೆದರೆ ಆಕ್ರೋಶ ಭುಗಿಲೇಳುತ್ತದೆ. ಎಲ್ಲ ಧರ್ಮದವರು ಅವರವರ ವೃತ್ತಿ ಮಾಡುತ್ತಾ ಸಾವಿರಾರು ವರ್ಷಗಳಿಂದ ಬದುಕುತ್ತಿದ್ದೇವೆ’ ಎಂದು ಉತ್ತರಿಸಿದರು.

ಸಂಪುಟ ವಿಸ್ತರಣೆ ಕುರಿತು ದೆಹಲಿಯಲ್ಲಿ ವಿಶೇಷ ಸಭೆ: ಸಭೆ ನಂತರ ದೆಹಲಿಗೆ ಬರುವಂತೆ ಸೂಚನೆ:ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ

ಪೊಲೀಸ್ ನೇಮಕಾತಿಯಲ್ಲಿ ಅಕ್ರಮ ಹಾಗೂ ಸಿಐಡಿ ತನಿಖೆ ವಿಚಾರವಾಗಿ ಕೇಳಿದ ಪ್ರಶ್ನೆಗೆ, ‘ನಾನು, ಪ್ರಿಯಾಂಕ್ ಖರ್ಗೆ ಅಭ್ಯರ್ಥಿಗಳ ಜತೆ ಮಾತನಾಡಿದ್ದೇವೆ. ಯಾವ ಕಾಲದಲ್ಲೂ ಇಂತಹ ಅಕ್ರಮ ನಡೆದಿರಲಿಲ್ಲ. ಈ ಹಿಂದೆ ಕೆಲವು ಅಕ್ರಮ ನೋಡಿದ್ದೇವೆ. ನಾನು ಕೂಡ ಇಂಧನ ಸಚಿವ ಆಗಿದ್ದಾಗ 30-40 ಸಾವಿರ ಹುದ್ದೆಗಳ ಭರ್ತಿ ಮಾಡಿದ್ದು, ದೈಹಿಕ ಪರೀಕ್ಷೆಯನ್ನು ವಿಡಿಯೋ ಮಾಡಿಸಿದ್ದೆ. ಒಬ್ಬರೂ ನಮ್ಮ ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪ ಮಾಡಿಲ್ಲ.

ನನ್ನ ಕ್ಷೇತ್ರದವರಿಗೆ ಲೈನ್ ಮ್ಯಾನ್ ಕೆಲಸ ಕೊಡಿಸಲು ಆಗಲಿಲ್ಲ, ಅಷ್ಟು ಪಾರದರ್ಶಕವಾಗಿ ನೇಮಕಾತಿ ಮಾಡಲಾಗಿತ್ತು. ಈ ನೇಮಕಾತಿ ಪರೀಕ್ಷೆಯಲ್ಲಿ 21 ಪ್ರಶ್ನೆಗೆ ಉತ್ತರ ಬರೆದ ಅಭ್ಯರ್ಥಿಗೆ 7ನೇ ರಾಂಕ್ ನೀಡಲಾಗಿದೆ. ಅದರ ದಾಖಲೆಗಳು ನನ್ನ ಬಳಿ ಇವೆ. 52 ಸಾವಿರ ಯುವಕರು ಪರೀಕ್ಷೆ ಬರೆದಿದ್ದಾರೆ. ಇಲ್ಲಿ ಪ್ರಾಮಾಣಿಕವಾಗಿ ಪರೀಕ್ಷೆ ಬರೆದವರಿಗೆ ಅನ್ಯಾಯವಾಗಿದೆ.

ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಎಷ್ಟಿದೆ ಗೊತ್ತಾ?

ಮುಖ್ಯಮಂತ್ರಿಗಳು ಈ ಬಗ್ಗೆ ಗಮನ ಹರಿಸಿದ್ದಾರೋ ಇಲ್ಲವೋ, ಆದರೆ ಗೃಹಮಂತ್ರಿಗಳು ಅಕ್ರಮ ನಡೆದಿಲ್ಲ ಎಂದು ಹೇಳಿ ಸಿಐಡಿ ತನಿಖೆ ಮಾಡಿಸುತ್ತಿದ್ದಾರೆ. ಈ ವಿಚಾರವಾಗಿ ಯುವಕರು ದೊಡ್ಡ ಆಂದೋಲನ ರೀತಿಯಲ್ಲಿ ಹೋರಾಟ ಮಾಡಬೇಕಿದೆ. ಕಾಮಗಾರಿಗಳಲ್ಲಿ 40 % ಕಮಿಷನ್ ಭ್ರಷ್ಟಾಚಾರ ಆದರೆ, ನೇಮಕಾತಿಯಲ್ಲಿ ಈ ರೀತಿ ಭ್ರಷ್ಟಾಚಾರ ಮಾಡುತ್ತಿದ್ದಾರೆ. ಇದರಲ್ಲಿ ಬಿಜೆಪಿ ನಾಯಕರೇ ಶಾಮೀಲಾಗಿದ್ದು, ಈ ಭ್ರಷ್ಟ ಸರ್ಕಾರ ರಾಜ್ಯವನ್ನು ಭ್ರಷ್ಟಾಚಾರದ ರಾಜಧಾನಿ ಮಾಡುತ್ತಿದೆ. ಇಡೀ ಸರ್ಕಾರವೇ ಇದರಲ್ಲಿ ಭಾಗಿಯಾಗಿದೆ. ಮೋದಿ ಅವರು ವರ್ಷಕ್ಕೆ 2 ಕೋಟಿ ಉದ್ಯೋಗ ನೀಡುತ್ತೇವೆ ಎಂದರು. ಅವರು ಕೊಡುತ್ತಿರುವ ರೀತಿ ಇದೇನಾ?’ ಎಂದರು.

ಸಿಎಂ ಆಗಿದ್ದಾಗ ಸಿದ್ದರಾಮಯ್ಯ ಕಟ್ಟಿದ್ದ ಹ್ಯೂಬ್ಲೆಟ್ ವಾಚ್ ಕೊಟ್ಟಿದ್ದವರು ಯಾರು?

       ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link