`AIADMK’ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಪಳನಿಸ್ವಾಮಿ ಆಯ್ಕೆ!!

ಚೆನ್ನೈ : 

     ಮುಂದಿನ ವರ್ಷ ರಾಜ್ಯದಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಯ ಮುಖ್ಯಮಂತ್ರಿ ಅಭ್ಯರ್ಥಿ ಎಡಿಎಂಕೆಯ ಮುಖ್ಯಮಂತ್ರಿ ಎಡಪ್ಪಾಡಿ ಪಳನಿಸ್ವಾಮಿ ಎಂದು ಒ. ಪನ್ನೀರ್ ಸೆಲ್ವಂ ಘೋಷಿಸಿದ್ದಾರೆ.

     ತಮಿಳುನಾಡಿನಲ್ಲಿ ಮುಂಬರುವ ವಿಧಾನಸಭೆ ಚುನಾವಣೆಗೆ ಅಖಿಲ ಭಾರತ ಅಣ್ಣಾ ದ್ರಾವಿಡ ಮುನ್ನೇತ್ರ ಕಳಗಂ (ಎಐಎಡಿಎಂಕೆ) ತನ್ನ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸಲು ಸಜ್ಜಾಗಿದೆ.

     ಕಳೆದ ಕೆಲ ದಿನಗಳಿಂದೀಚೆಗೆ ಮುಖ್ಯಮಂತ್ರಿ ಇ ಪಳನಿಸ್ವಾಮಿ ಮತ್ತು ಉಪ ಮುಖ್ಯಮಂತ್ರಿ ಒ ಪನ್ನೀರ್ ಸೆಲ್ವಂ ಮಧ್ಯೆ ಭಿನ್ನಾಭಿಪ್ರಾಯ ಉಂಟಾಗಿ ಸುದ್ದಿಯಾಗಿತ್ತು.

    ಪಳನಿಸ್ವಾಮಿ ಮತ್ತು ಪನ್ನೀರ್ ಸೆಲ್ವಂ ನೇತೃತ್ವದ ಎಐಎಡಿಎಂಕೆ ಬಣಗಳ ನಡುವೆ ಬಣ ಸಮರ ನಡೆಯುತ್ತಿರುವ ನಡುವೆಯೇ ಈ ಮಹತ್ವದ ಘೋಷಣೆ ಹೊರಬಿದ್ದಿದ್ದು, ಮುಖ್ಯಮಂತ್ರಿ ಎ.ಕೆ.ಪಳನಿಸ್ವಾಮಿ, ಉಪ ಮುಖ್ಯಮಂತ್ರಿ ಓ ಪನ್ನೀರ್ ಸೆಲ್ವಂ ಹಾಗೂ ಇತರ ಎಐಎಡಿಎಂಕೆ ನಾಯಕರು ಬುಧವಾರ ಚೆನ್ನೈನಲ್ಲಿರುವ ಪಕ್ಷದ ಕಚೇರಿಗೆ ಆಗಮಿಸಿ, ರಾಜ್ಯದಲ್ಲಿ 2021ರ ವಿಧಾನಸಭೆ ಚುನಾವಣೆ ಕುರಿತು ಸಭೆ ನಡೆಸಿದರು. ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ ಎನ್ನಲಾಗಿದೆ.

    ಪಕ್ಷದ 11 ಸದಸ್ಯರ ಸಂಚಾಲಕ ಸಮಿತಿ ಸಾಮೂಹಿಕ ನಾಯಕತ್ವದಲ್ಲಿ ನಂಬಿಕೆಯಿಟ್ಟಿದ್ದಾರೆ ಎಂದು ಪನ್ನೀರ್ ಸೆಲ್ವಂ ದಿವಂಗತ ಮಾಜಿ ಮುಖ್ಯಮಂತ್ರಿ ಜೆ ಜಯಲಲಿತಾ ಅವರನ್ನು ನೆನಪು ಮಾಡಿಕೊಂಡರು.

 

 

Recent Articles

spot_img

Related Stories

Share via
Copy link