ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಸಿದ್ದರಾಮಯ್ಯ ಪ್ರಚಾರ

ಬೆಂಗಳೂರು :

      ಮಾಜಿ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ತಮಿಳುನಾಡು ವಿಧಾನಸಭೆಯಲ್ಲಿ ಪ್ರಚಾರ ಕಾರ್ಯದಲ್ಲಿ ಭಾಗವಹಿಸಲಿದ್ದಾರೆ.

      ಸಿದ್ದರಾಮಯ್ಯ ಅವರು ಆಂಧ್ರ ಮತ್ತು ತಮಿಳುನಾಡು ಜಿಲ್ಲೆಗಳ ಗಡಿ ಭಾಗಗಳಲ್ಲಿ ಹೆಚ್ಚು ಜನಪ್ರಿಯರಾಗಿದ್ದಾರೆ. ಹೀಗಾಗಿ ಈ ಮೊದಲು ನಡೆದ ವಿಧಾನಸಭೆ, ಲೋಕಸಭೆ ಚುನಾವಣೆ ಸಂದರ್ಭದಲ್ಲಿಯೂ ಸಿದ್ದರಾಮಯ್ಯ ಅವರು ಗಡಿ ಜಿಲ್ಲೆಗಳಲ್ಲಿ ಪ್ರವಾಸ ಮಾಡಿ ಪ್ರಚಾರ ಮಾಡಿದ್ದರು.

       ಅದೇ ರೀತಿ ಈ ಚುನಾವಣೆಯಲ್ಲಿಯೂ ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ವಿವಿಧ ವಿಧಾನಸಭೆ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಅವರು ಮಂಗಳವಾರ(ಏ.2) ಕಾಂಗ್ರೆಸ್ ಅಭ್ಯರ್ಥಿಗಳ ಪರವಾಗಿ ಚುನಾವಣಾ ಪ್ರಚಾರ ಕೈಗೊಳ್ಳುತ್ತಿದ್ದು, ತಳಿ, ಡೆಂಕಣಿಕೋಟ, ಹೊಸೂರು, ಬಾಗಲೂರು, ಬೇರಿಗೆ, ಸೂಲಗಿರಿ ಹಾಗೂ ವೇಪನಪಲ್ಲಿ  ಕ್ಷೇತ್ರಗಳಲ್ಲಿ ಚುನಾವಣಾ ಪ್ರಚಾರ ಸಭೆಗಳನ್ನು ಉದ್ದೇಶಿಸಿ ಸಿದ್ದರಾಮಯ್ಯ ಮಾತನಾಡಲಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

 

Recent Articles

spot_img

Related Stories

Share via
Copy link
Powered by Social Snap