ಕರ್ನಾಟಕ : ರಾಜ್ಯದ ಹಲವೆಡೆ ತಾಪಮಾನ ಹೆಚ್ಚಳ ….!

ಬೆಂಗಳೂರು:

   ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನವು ವಾಡಿಕೆಗಿಂತ ಏರಿಕೆಯಗಿದ್ದು, ಬಿಸಿಲ ಬೇಗೆಗೆ ಜನರು ತತ್ತರಿಸಿ ಹೋಗಿದ್ದಾರೆ.ರಾಜ್ಯದಲ್ಲಿ ಮಳೆ ಕೊರತೆಯಿಂದ ಬೇಗೆಯ ವಾತಾವರಣ ಉಂಟಾಗಿದ್ದು, ಗಾಳಿಯಲ್ಲೂ ನೀರಿನ ತೇವಾಂಶವಿಲ್ಲದೆ ಕೆಲವೆಡೆ ಬಿಸಿ ಗಾಳಿ ಬೀಸಲಾರಂಭಿಸಿವೆ.

   ಬೆಂಗಳೂರಿನಲ್ಲಿ ಮಂಗಳವಾರ ಗರಿಷ್ಠ ಉಷ್ಣಾಂಶ 32 ಡಿ.ಸೆ. ದಾಖಲಾಗಿದ್ದು, ಇದು ವಾಡಿಕೆಗಿಂತ 3.2 ಡಿ.ಸೆ. ಹೆಚ್ಚಿನ ತಾಪಮಾನವಾಗಿದೆ.ದಾವಣೆಗೆರೆಯಲ್ಲಿ ಗರಿಷ್ಠ ತಾಪಮಾನ 34.6 ಡಿಗ್ರಿ ಸೆಲ್ಸಿಯಸ್, ಚಾಮರಾಜನಗರದಲ್ಲಿ 34.5 ಡಿಗ್ರಿ ಸೆಲ್ಸಿಯಸ್ ಮತ್ತು ರಾಯಚೂರಿನಲ್ಲಿ 34.4 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಬಾಗಲಕೋಟೆ ಮತ್ತು ರಾಯಚೂರಿನಲ್ಲಿ 34.1 ಡಿಗ್ರಿ ಸೆಲ್ಸಿಯಸ್, ಚಿತ್ರದುರ್ಗದಲ್ಲಿ 33 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಮಳೆ ಕೊರತೆ ಪರಿಣಾಮ ಬೇಸಿಗೆಯ ಆರಂಭದ ಸಮಯದಲ್ಲಿನ ಗರಿಷ್ಠ ತಾಪಮಾನದಂತೆಯೇ ಈಗಲೂ ವಾತಾವರಣ ಇರುತ್ತದೆ ಎಂದು ಹವಾಮಾನ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

   ಇದು ಅಸಾಮಾನ್ಯವಲ್ಲ. ಕಳೆದ ವರ್ಷವೂ ಇದೇ ರೀತಿಯ ವಾತಾವರಣ ಇತ್ತು ಎಂದು ಐಎಂಡಿ ನಿರ್ದೇಶಕ ಹಾಗೂ ಹಿರಿಯ ವಿಜ್ಞಾನಿ ಸಿ.ಎಸ್.ಪಾಟೀಲ್ ಅವರು ಹೇಳಿದ್ದಾರೆ.ಕಳೆದ ವರ್ಷ ರಾಜ್ಯದಲ್ಲಿ ಬರಗಾಲ ಶುರುವಾಗಿ, ತಾಪಮಾನ ಏರಿಕೆಯಾಗಿತ್ತು. ಆದರೆ ಈ ವರ್ಷ ಒಟ್ಟಾರೆ ರಾಜ್ಯದಲ್ಲಿ ಶೇ.11ರಷ್ಟು ಅಧಿಕ ಮಳೆಯಾಗಿದೆ. ಕನಿಷ್ಠ ತಾಪಮಾನದಲ್ಲಿ 1.8 ಡಿಗ್ರಿ ಸೆಲ್ಸಿಯಸ್ ಏರಿಕೆಯಾಗಿದೆ ಮಂಗಳವಾರ ಬೆಂಗಳೂರಿನಲ್ಲಿ ಸಾಮಾನ್ಯ 20.2 ಡಿಗ್ರಿ ಸೆಲ್ಸಿಯಸ್ ಬದಲಿಗೆ 22 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಹಿಂದಿನ ವರ್ಷ ಸೆಪ್ಟೆಂಬರ್ ಮತ್ತು ಅಕ್ಟೋಬರ್‌ನಲ್ಲಿ 30 ಡಿಗ್ರಿ ಸೆಲ್ಸಿಯಸ್‌ಗಿಂತ ಹೆಚ್ಚಿನ ತಾಪಮಾನವಿತ್ತು ಎಂದು ಅಧಿಕಾರಿಗಳು ಹೇಳಿದ್ದಾರೆ.

Recent Articles

spot_img

Related Stories

Share via
Copy link