ಪೋಷಕ ನಟ ಟಪೋರಿ ಸತ್ಯ ಇನ್ನಿಲ್ಲ…!

ಬೆಂಗಳೂರು:
        ಸುಮಾರು 30ಕ್ಕೂ ಹೆಚ್ಚು ಕನ್ನಡ ಸಿನಿಮಾಗಳಲ್ಲಿ ಪೋಷಕ ಪಾತ್ರಗಳಿಗೆ  ನಟಿಸಿದ್ದ ಟಪೋರಿ ಸತ್ಯ  ಖ್ಯಾತಿಯ ಸತ್ಯ ಅವರು ಅನಾರೋಗ್ಯದಿಂದ ನಿಧನ ಹೊಂದಿದ್ದಾರೆ. ಕಳೆದ ಕೆಲ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ  ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು.ಆದರೆ ನಿನ್ನೆ ರಾತ್ರಿ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ.
     ಟಪೋರಿ ಸತ್ಯ ಅವರಿಗೆ 46 ವರ್ಷ ವಯಸ್ಸಾಗಿತ್ತು. ಶ್ವಾಸಕೊಶದ ಸಮಸ್ಯೆಯಿಂದ ಬಳಲುತ್ತಿದ್ದ ಸತ್ಯ ಅವರನ್ನು ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ನಿನ್ನೆ ರಾತ್ರಿ ನಿಧನ ಹೊಂದಿದ್ದಾರೆ. ನಂದ ಲವ್ಸ್ ನಂದಿತ ಸೇರಿದಂತೆ 30ಕ್ಕೂ ಹೆಚ್ಚು ಕನ್ನಡ ಸಿನಿಮಾಗಳಲ್ಲಿ ಪೋಷಕ ಪಾತ್ರಗಳಲ್ಲಿ ನಟಿಸಿದ್ದರು.

      ನಟನೆ ಜೊತೆ ನಿರ್ದೇಶನದಲ್ಲಿ ಆಸಕ್ತಿ ಬೆಳೆಸಿಕೊಂಡಿದ್ದ ಅವರಿಗೆ, ಲೂಸ್ ಮಾದ ಮೊದಲ ಬಾರಿಗೆ ಯೋಗಿ ನಾಯಕನಾಗಿ ನಟಿಸಿದ್ದ ‘ನಂದ ಲವ್ಸ್ ನಂದಿತಾ’ ಇವರಿಗೆ ಜನಪ್ರಿಯತೆ ತಂದುಕೊಟ್ಟಿತ್ತು. ಈ ಸಿನಿಮಾದಲ್ಲಿ ಟಪೋರಿ ಸತ್ಯ ಕ್ವಾಟ್ರು ಅನ್ನೋ ಪಾತ್ರದಲ್ಲಿ ನಟಿಸಿದ್ದರು. ಈ ಪಾತ್ರ ಮೂಲಕ ಚಿತ್ರರಂಗದಲ್ಲಿ ಮತ್ತಷ್ಟು ಜನಪ್ರಿಯರಾಗಿದ್ದರು.

     ಟಪೋರಿ ಸತ್ಯ ಎಂದೇ ಹೆಸರಾಗಿದ್ದ ಇವರು ಮೇಳ ಹೆಸರಿನ ಸಿನಿಮಾವನ್ನು ನಿರ್ದೇಶನ ಸಹ ಮಾಡಿದ್ದರು. ಇತ್ತೀಚೆಗೆ ಮತ್ತೊಂದು ಹೊಸ ಸಿನಿಮಾ ನಿರ್ದೇಶನ ಮಾಡುವ ಹುಮ್ಮಸ್ಸಿನಲ್ಲಿದ್ದ ಸತ್ಯ ಸಿನಿಮಾಕ್ಕಾಗಿ ಆಡಿಷನ್ ಸಹ ಮಾಡುತ್ತಿದ್ದರು. ಆದರೆ ಹಠಾತ್ತನೆ ನಿಧನ ಹೊಂದಿದ್ದಾರೆ. ಸತ್ಯ ಅವರ ಪಾರ್ಥೀವ ಶರೀರವನ್ನು ಬನಶಂಕರಿ ಬಳಿಯ ನಿವಾಸಕ್ಕೆ ಕೊಂಡೊಯ್ಯಲಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ