ವಿವಿಧ ಏಜೆನ್ಸಿಗಳಲ್ಲಿನ ಹಗರಣಗಳ ತನಿಖೆಗೆ ಕಾರ್ಯಪಡೆ ರಚನೆ :ಡಿಕೆಶಿ

ಬೆಂಗಳೂರು:

    ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ), ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮತ್ತು ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ) ನಂತಹ ವಿವಿಧ ಏಜೆನ್ಸಿಗಳಲ್ಲಿನ ಹಗರಣಗಳ ತನಿಖೆಗೆ ಕಾರ್ಯಪಡೆ ರಚಿಸುವುದನ್ನು ಪರಿಗಣಿಸುವುದಾಗಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಗುರುವಾರ ವಿಧಾನ ಪರಿಷತ್ತಿಗೆ ತಿಳಿಸಿದರು.

    ಇಲಾಖೆಗಳಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಗಳ ತನಿಖೆಗೆ ನಾಲ್ಕೈದು ಹಿರಿಯ ಅಧಿಕಾರಿಗಳನ್ನೊಳಗೊಂಡ ಕಾರ್ಯಪಡೆ ರಚಿಸಬೇಕು ಎಂಬ ಜೆಡಿಎಸ್ ಸದಸ್ಯ ಮರಿತಿಬ್ಬೇಗೌಡ ಅವರ ಸಲಹೆಗೆ ಅವರು ಪ್ರತಿಕ್ರಿಯಿಸಿದರು.

    ಇದೇ ರೀತಿಯ ಸಲಹೆಯನ್ನು ನಗರದ ಶಾಸಕರು ನೀಡಿದ್ದು, ಶೀಘ್ರದಲ್ಲೇ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.

     ಮಾರ್ಗಸೂಚಿಗಳನ್ನು ಅನುಸರಿಸಿ ಬಿಡಿಎ 1,096 ಪರ್ಯಾಯ ನಿವೇಶನಗಳನ್ನು ಮಂಜೂರು ಮಾಡಿದೆ. ದೂರುಗಳಿದ್ದಲ್ಲಿ ಎಸ್ಪಿ  ಬಿಡಿಎ ಅವರಿಂದ ವರದಿ ಪಡೆದು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap