ತತ್ಕಾಲ್​ ರೈಲ್ವೆ ಟಿಕೆಟ್​ ಬುಕಿಂಗ್​ಗೆ ಹೊಸ ರೂಲ್ಸ್….!

ನವದೆಹಲಿ

     ಭಾರತೀಯ ರೈಲ್ವೆ ಸಚಿವಾಲಯವು  ತತ್ಕಾಲ್​ ಟಿಕೆಟ್​ ಬುಕಿಂಗ್ ನಿಯಮಯದಲ್ಲಿ  ಹೊಸ ಬದಲಾವಣೆ ಮಾಡಿದೆ. ತತ್ಕಾಲ್​ ಟಿಕೆಟ್​ ಬುಕಿಂಗ್​ ಮಾಡಬೇಕೆಂದರೆ IRCTC ಅಧಿಕೃತ ವೆಬ್​ಸೈಟ್​ ಅಥವಾ ಆ್ಯಪ್​​ ಗೆ ಆಧಾರ್​ ಲಿಂಕ್​ ಆಗಿರುವುದನ್ನು ಕಡ್ಡಾಯಗೊಳಿಸಲಾಗಿದೆ. ಹೀಗಾಗಿ ಇನ್ಮುಂದೆ ಆಧಾರ್ ಲಿಂಕ್​ ಹೊಂದಿರುವ ಬಳಕೆದಾರರು ಮಾತ್ರ ತತ್ಕಲ್ ಟಿಕೆಟ್‌ಗಳನ್ನು ಬುಕ್ ಮಾಡಲು ಸಾಧ್ಯವಾಗುತ್ತದೆ. ಜೊತೆಗೆ ಏಜೆಂಟ್​ ಗಳ ಮೇಲೆ ಸಮಯದ ನಿರ್ಬಂಧ ಹೇರಿದೆ. ಈ ಬಗ್ಗೆ ರೈಲ್ವೆ ಸಚಿವಾಲಯ ಆದೇಶ ಹೊರಡಿಸಿದ್ದು, ಈ ಹೊಸ ನಿಯಮ ಜುಲೈ 1ರಿಂದ ಈ​ ಜಾರಿಗೆ ಬರಲಿದೆ ಎಂದು ರೈಲ್ವೆ ಸಚಿವಾಲ ತಿಳಿಸಿದೆ.

    01-07-2025 ರಿಂದ ಜಾರಿಗೆ ಬರುವಂತೆ ತತ್ಕಾಲ್ ಟಿಕೆಟ್‌ಗಳನ್ನು ಆಧಾರ್ ಲಿಂಕ್​ ಹೊಂದಿರುವ ಬಳಕೆದಾರರು ಮಾತ್ರ ಐಆರ್​ ಟಿಸಿ ವೆಬ್‌ಸೈಟ್ ಅಥವಾ ಅದರ ಆ್ಯಪ್​ ಮೂಲಕ ಬುಕ್ ಮಾಡಬಹುದು. ಜುಲೈ 15 ರಿಂದ ತತ್ಕಾಲ್ ಬುಕಿಂಗ್‌ಗಳಿಗೆ ಆಧಾರ್ ಆಧಾರಿತ OTP ದೃಢೀಕರಣ ಕಡ್ಡಾಯಗೊಳಿಸಲಾಗುತ್ತದೆ ಎಂದು ತಿಳಿಸಿದೆ.

    ಕಂಪ್ಯೂಟರ್​ ಆಧಾರಿತ OTP ಯ ದೃಢೀಕರಣದ ನಂತರವೇ ಭಾರತೀಯ ರೈಲ್ವೆ ಅಥವಾ ಅಧಿಕೃತ ಏಜೆಂಟ್‌ಗಳ ಮೂಲಕ ಬುಕಿಂಗ್ ಮಾಡಲು ತತ್ಕಾಲ್ ಟಿಕೆಟ್‌ಗಳು ಲಭ್ಯವಿರುತ್ತವೆ. ಇದನ್ನು ಬಳಕೆದಾರರು ಬುಕಿಂಗ್ ಸಮಯದಲ್ಲಿ ಒದಗಿಸಿದ ಮೊಬೈಲ್ ಸಂಖ್ಯೆಗೆ ಕಳುಹಿಸಲಾಗುತ್ತದೆ ಎಂದು ಸುತ್ತೋಲೆಯಲ್ಲಿ ಉಲ್ಲೇಖಿಸಲಾಗಿದೆ.

ಏಜೆಂಟ್​​ಗಳಿಗೆ ತತ್ಕಾಲ್​ ಬುಕಿಂಗ್​ ನಿರ್ಬಂಧ

     dಇನ್ನು ತತ್ಕಾಲ್​ ಟಿಕೆಟ್​ ಸಾಮಾನ್ಯ ಜನರಿಗೆ ಸಿಗಲಿ ಎನ್ನುವ ಉದ್ದೇಶದಿಂದ ರೈಲ್ವೆ ಸಚಿವಾಲಯವು ಮಹತ್ತರ ಬದಲಾವಣೆಯೊಂದನ್ನು ತಂದಿದೆ. ಅದೇನೆಂದರೆ, ಭಾರತೀಯ ರೈಲ್ವೆಯ ಅಧಿಕೃತ ಏಜೆಂಟ್​ಗಳಿಗೆ ತತ್ಕಾಲ್ ಟಿಕೆಟ್​ ಆರಂಭವಾಗುವ ಮೊದಲ 30 ನಿಮಿಷದಲ್ಲಿ ಬುಕಿಂಗ್​ ಮಾಡುವ ಅವಕಾಶವನ್ನು ನಿರ್ಬಂಧಿಸಿದೆ. ಅಂದರೆ ಬೆಳಗ್ಗೆ 10 ರಿಂದ 10.30 ರವರೆಗೆ ಎಸಿ, ಬೆಳಗ್ಗೆ 11 ರಿಂದ 11.30 ರವರೆಗೆ ಆರಂಭವಾಗುವ ನಾನ್ ಎಸಿ ಟಿಕೆಟ್​ ಗಳನ್ನು ಬುಕ್​ ಮಾಡುವುದಕ್ಕೆ ಏಜೆಂಟ್​​ಗಳಿಗೆ ಅವಕಾಶ ನೀಡಿಲ್ಲ. ಈ ಅವಧಿಯಲ್ಲಿ ಆಧಾರ್ ದೃಢೀಕರಿಸಿದವರಿಗೆ ಆದ್ಯತೆ ನೀಡಲಾಗಿದೆ. ಅದೇ ರೀತಿ ಜುಲೈ 15ರಿಂದ ತತ್ಕಾಲ್​​ ನಲ್ಲಿ ಟಿಕೆಟ್​ ಬುಕ್ ಮಾಡಲು ಆಧಾರ್ ಕಾರ್ಡ್ ಒಟಿಪಿ ದೃಢೀಕರಣವನ್ನು ಕಡ್ಡಾಯಗೊಳಿಸಲಾಗಿದೆ. ಒಟಿಪಿ ದೃಢೀಕರಣದ ನಂತರವೇ ಪಿಆರ್ ಎಸ್ ಕೌಂಟರ್​​ ಗಳ ಮೂಲಕ ಬುಕ್ಕಿಂಗ್​ ಮಾಡಲು ತತ್ಕಾಲ್ ಟಿಕೆಟ್ ಲಭ್ಯವಿರುತ್ತವೆ ಎಂದು ರೈಲ್ವೆ ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ.

    ಈ ತತ್ಕಾಲ್​ ಯೋಜನೆಯ ಪ್ರಯೋಜನೆಗಳನ್ನು ಸಾಮಾನ್ಯ ಬಳಕೆದಾರರೂ ಪಡೆಯಲು ಈ ಕ್ರಮ ಜರುಗಿಸಲಾಗಿದೆ. ಜುಲೈ 1ರಿಂದ  ಭಾರತೀಯ ರೈಲ್ವೆಯ ಅಧಿಕೃತ ವೆಬ್ ಸೈಟ್​​ ನಲ್ಲಿ ಟಿಕೆಟ್​ ಬುಕ್ಕಿಂಗ್ ಮಾಡುವವರು ಆಧಾರ್ ದೃಢೀಕರಣ ಮಾಡಿಕೊಳ್ಳಬೇಕು ಎಂದು ಸಚಿವಾಲು ಹೇಳಿದೆ.

   ವ್ಯವಸ್ಥೆಯಲ್ಲಿ ಆದ ಮಾರ್ಪಾಡು ಮತ್ತು ಬದಲಾವಣೆಗಳನ್ನು ಎಲ್ಲಾ ವಲಯ ರೈಲ್ವೆಗಳಿಗೆ ತಿಳಿಸಲು ಸಚಿವಾಲಯವು ರೈಲ್ವೆ ಮಾಹಿತಿ ವ್ಯವಸ್ಥೆಗಳ ಕೇಂದ್ರ (CRIS) ಮತ್ತು IRCTC ಗೆ ನಿರ್ದೇಶಿಸಿದೆ. ಜೊತೆಗೆ, ಸಾರ್ವಜನಿಕರಲ್ಲಿ ಈ ಬಗ್ಗೆ ಅರಿವು ಮೂಡಿಸಲು ವ್ಯಾಪಕ ಪ್ರಚಾರ ಮಾಡಲಾಗುವುದು ಎಂದು ತಿಳಿಸಿದೆ. ಇನ್ನು ತತ್ಕಾಲ್ ಯೋಜನೆಯ ಪ್ರಯೋಜನಗಳನ್ನು ಸಾಮಾನ್ಯ ಬಳಕೆದಾರರು ಪಡೆಯುವುದನ್ನು ಖಚಿತಪಡಿಸಿಕೊಳ್ಳಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಸಚಿವಾಲಯವು ರೈಲ್ವೆಯ ಎಲ್ಲ ವಲಯಗಳಿಗೆ ಮಾಹಿತಿ ನೀಡಿದೆ.

Recent Articles

spot_img

Related Stories

Share via
Copy link