ನನಗೆ ಶಿಕ್ಷಕರು ಹೊಡೆಯುತ್ತಾರೆ ಅವರನ್ನು ಅರೆಸ್ಟ್ ಮಾಡಿ; ಶಿಕ್ಷಕನ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲೇರಿದ 2ನೇ ಕ್ಲಾಸ್ ಬಾಲಕ

ಹೈದರಾಬಾದ್:

 ಶಾಲೆಯಲ್ಲಿ ಶಿಕ್ಷಕರು ಹೊಡೆಯುತ್ತಾರೆ ಎಂದು ಎರಡನೇ ಕ್ಲಾಸ್ ಬಾಲಕನೊಬ್ಬ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ ಘಟನೆ ತೆಲಂಗಾಣದಲ್ಲಿ ಬೆಳಕಿಗೆ ಬಂದಿದೆ.

2ನೇ ತರಗತಿ ವಿದ್ಯಾರ್ಥಿ ಅನಿಲ್ ನಾಯ್ಕ್, ಮೆಹಬೂಬ್ ನಗರದ ಖಾಸಗಿ ಶಾಲಾ ಶಿಕ್ಷಕನ ವಿರುದ್ಧ ದೂರು ನೀಡಿದ್ದು, ಈ ವೇಳೆ ಮಹಿಳಾ ಇನ್ಸ್ ಪೆಕ್ಟರ್ ರಮಾದೇವಿ ವಿದ್ಯಾರ್ಥಿಯನ್ನು ವಿಚಾರಿಸಿದ್ದಾರೆ.

ಈ ವೇಳೆ ವಿದ್ಯಾರ್ಥಿ ನನಗೆ ಶಿಕ್ಷಕರು ಶಾಲೆಯಲ್ಲಿ ಹೊಡೆಯುತ್ತಿದ್ದಾರೆ. ಅವರನ್ನು ಬಂಧಿಸುವಂತೆ ಹೇಳಿದ್ದಾನೆ.

ಬಳಿಕ ಇನ್ಸ್ ಪೆಕ್ಟರ್ ರಮಾದೇವಿ, ವಿದ್ಯಾರ್ಥಿಯ ಜತೆ ಶಾಲೆಗೆ ತೆರಳಿ ಶಿಕ್ಷಕರನ್ನು ವಿಚಾರಿಸಿದ್ದಾರೆ. ಶಿಕ್ಷಕ ಹಾಗೂ ವಿದ್ಯಾರ್ಥಿ ಇಬ್ಬರಿಗೂ ಕೌನ್ಸೆಲಿಂಗ್ ಮಾಡಿ ಮನವೊಲಿಸಲಾಗಿದೆ.

    ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap