ಈ ಕುರಿತು ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಟ್ವೀಟರ್ ಮೂಲಕ ಬಿಜೆಪಿ ಸರ್ಕಾರದ ವಿರುದ್ದ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಕಳೆದ 141 ದಿನಗಳಿಂದ ಫ್ರೀಡಂ ಪಾರ್ಕ್ ನಲ್ಲಿ ಮುಷ್ಕರ ನಿರತರಾಗಿರುವ ಅನುದಾನಿತ ಶಾಲಾ ಶಿಕ್ಷಕರ ಗೋಳು ಕೇಳುವವರಿಲ್ಲ. ಶಿಕ್ಷಕರು ಕೇಳುತ್ತಿರುವುದು ತಮ್ಮ ಹಕ್ಕಿನ ಪಿಂಚಣಿಯನ್ನು ಎಂಬ ಕನಿಷ್ಠ ಜ್ಞಾನವಾದರೂ ಬಿಜೆಪಿ ಸರ್ಕಾರಕ್ಕೆ ಬೇಡವೇ? ಎಂದು ಸಿದ್ದರಾಮಯ್ಯ ಅವರು ಪ್ರಶ್ನಿಸಿದ್ದಾರೆ.ಪಿಂಚಣಿಗಾಗಿ ಮುಷ್ಕರದಲ್ಲಿ ತೊಡಗಿದ್ದ ಬಾಗಲಕೋಟೆ ಮೂಲದ ಶಿಕ್ಷಕ ಸಿದ್ದಯ್ಯ ಹಿರೇಮಠ ಮತ್ತು ರಾಯಚೂರು ಜಿಲ್ಲೆ ಸಿಂಧನೂರು ಮೂಲಕ ಶಂಕರಪ್ಪ ಬೋರಡ್ಡಿ ಅವರು ಸರ್ಕಾರ ತಮ್ಮ ಹೋರಾಟಕ್ಕೆ ಸ್ಪಂದಿಸದ ಹಿನ್ನೆಲೆಯಲ್ಲಿ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಇದನ್ನು ಸರ್ಕಾರಿ ಕೊಲೆಗಳು ಅನ್ನದೆ ಬೇರೇನು ಹೇಳಬೇಕು ಬಸವರಾಜ ಬೊಮ್ಮಾಯಿ ಅವರೇ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.