ಶಿಕ್ಷಕಿಯರು ತರಗತಿಯಲ್ಲಿ ಹಿಜಾಬ್ ಧರಿಸಲು ನಿಷೇಧ : ಸಚಿವ ಬಿ.ಸಿ.ನಾಗೇಶ್

ಬೆಂಗಳೂರು :

ಶಿಕ್ಷಕಿಯರು ತರಗತಿಯಲ್ಲಿ ಹಿಜಾಬ್ ಧರಿಸಲು ನಿಷೇಧಿಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.ರಾಜ್ಯದಲ್ಲಿ ಸರ್ಕಾರಿ ನೌಕರರಿಗೆ ಸಮವಸ್ತ್ರ ಸಂಹಿತೆ ಅನ್ವಯವಾಗುವುದಿಲ್ಲ.

ಹೀಗಾಗಿ ಶಿಕ್ಷಕರು ಅಥವಾ ಪರೀಕ್ಷಾ ಮೇಲ್ವಿಚಾರಕರಿಗೂ ಸಮವಸ್ತ್ರ ನಿಯಮ ಅನ್ವಯವಾಗುವುದಿಲ್ಲ. ಆದರೂ ನೈತಿಕತೆ ಆಧಾರದ ಮೇಲೆ ವಿದ್ಯಾರ್ಥಿನಿಯರಿಗೆ ಹಿಜಾಬ್ ಗೆ ಅವಕಾಶ ಇಲ್ಲದ ಹಿನ್ನೆಲೆಯಲ್ಲಿ ಶಿಕ್ಷಕಿಯರೂ ತರಗತಿಯಲ್ಲಿ ಹಿಜಾಬ್ ಧರಿಸುವಂತಿಲ್ಲ ಎಂದು ತಿಳಿಸಿದ್ದಾರೆ.

ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರ ಮಾಧ್ಯಮ ಪ್ರತಿಕ್ರಿಯೆ

ಇನ್ನು ಪರೀಕ್ಷೆ ವೇಳೆ ಕೊಠಡಿಯಲ್ಲಿ ವಿದ್ಯಾರ್ಥಿ ಹಾಗೂ ಮಕ್ಕಳನ್ನು ಹೊರತುಪಡಿಸಿ ಯಾರೂ ಇರುವುದಿಲ್ಲ. ಮಕ್ಕಳ ಮುಮದೆ ಹಿಜಾಬ್ ಧರಿಸುವ ಅವಶ್ಯಕತೆ ಇರುವುದಿಲ್ಲ. ಹಿಜಾಬ್ ಇಲ್ಲದೆ ಬಂದರೆ ಏನೂ ಆಗುವುದಿಲ್ಲ. ಈ ಬಗ್ಗೆ ಆಯಾ ಶಾಲೆಯ ಆಡಳಿತ ಮಂಡಳಿಗಳು ಮನವೊಲಿಸಿ ಸಮಸ್ಯೆ ಇದ್ದರೆ ಪರಿಹರಿಸಿಕೊಳ್ಳಬೇಕು ಎಂದು ಹೇಳಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಮಾಧ್ಯಮ ಪ್ರತಿಕ್ರಿಯೆ

     ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link