ಜಾರ್ಖಂಡ್: ಪ್ರಧಾನಿ ಮೋದಿ ವಿಮಾನದಲ್ಲಿ ತಾಂತ್ರಿಕ ದೋಷ

ದಿಯೋಘರ್: 

   ಜಾರ್ಖಂಡ್ ವಿಧಾನಸಭೆ ಚುನಾವಣೆಯ ಪ್ರಚಾರದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರ ವಿಮಾನದಲ್ಲಿ ತಾಂತ್ರಿಕ ದೋಷ ಕಂಡುಬಂದಿದ್ದು, ಅವರು ದೆಹಲಿಗೆ ವಾಪಸ್ಸಾಗುವುದು ವಿಳಂಬವಾಗಲಿದೆ ಎಂದು ಮೂಲಗಳು ತಿಳಿಸಿವೆ.ಜಾರ್ಖಂಡ್‌ನಲ್ಲಿ ತಾಂತ್ರಿಕ ದೋಷದಿಂದ ಪ್ರಧಾನಿ ಮೋದಿಯವರ ವಿಮಾನ ಟೇಕಾಫ್ ಆಗಲು ಸಾಧ್ಯವಾಗಲಿಲ್ಲ. ವಿಮಾನವು ದಿಯೋಘರ್ ವಿಮಾನನಿಲ್ದಾಣದಲ್ಲಿ ನಿಂತಿದ್ದು, ದೆಹಲಿಗೆ ಹಿಂದಿರುಗಲು ಸ್ವಲ್ಪ ವಿಳಂಬವಾಗಲಿದೆ ಎಂದು ಅವರು ಹೇಳಿದ್ದಾರೆ.ಇನ್ನು ಪ್ರಧಾನಿ ಮೋದಿ ಅವರ ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದರ ಹಿಂದಿನ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ.