ಬೆಂಗಳೂರು:
ಕರಾವಳಿಯಲ್ಲಿ ಟೆಂಪಲ್ ಟೂರಿಸಂ ಅಭಿವೃದ್ಧಿಪಡಿಸಿ, ಅದಕ್ಕೆ ಬೇಕಾದ ಮೂಲಭೂತ ಸೌಕರ್ಯಗಳನ್ನು ನೀಡಬೇಕು ಎಂದು ಕಾರ್ಕಳ ಶಾಸಕ, ಮಾಜಿ ಸಚಿವ ವಿ. ಸುನೀಲ್ ಕುಮಾರ್ ಮನವಿ ಮಾಡಿಕೊಂಡಿದ್ದಾರೆ.
ವಿಧಾನಸಭೆಯ ಸದನದಲ್ಲಿ ಮಾತನಾಡಿ, ಕರಾವಳಿಯಲ್ಲಿ ಟೆಂಪಲ್ ಟೂರಿಸಂ ಅಭಿವೃದ್ಧಿಪಡಿಸಿ, ಅದಕ್ಕೆ ಬೇಕಾದ ಮೂಲಭೂತ ಸೌಕರ್ಯಗಳನ್ನು ನೀಡಬೇಕು. ಇಕೋ ಟೂರಿಸಂಗೆ ಬೇಕಾದ ಒಳ್ಳೆಯ ಅವಕಾಶ, ಪರಿಸರ ಕರಾವಳಿ ಭಾಗದಲ್ಲಿದೆ. ಹಾಗೇ, ಬೀಚ್ ಟೂರಿಸಂ ಮೂಲಕ ಕರಾವಳಿ ಭಾಗದ ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸಬೇಕು.
ಕರಾವಳಿ ಭಾಗದ ಬಂದರುಗಳನ್ನು ಅಭಿವೃದ್ಧಿಪಡಿಸಿದರೆ ನೂರಾರು ಕೋಟಿಯ ಹೂಡಿಕೆ, ಉದ್ಯೋಗಗಳು ಇಲ್ಲಿ ಸೃಷ್ಟಿಯಾಗುತ್ತದೆ. ಎತ್ತಿನಹೊಳೆ ಯೋಜನೆಗೆ ಪರಿಹಾರವಾಗಿ ಕರಾವಳಿ ಭಾಗಕ್ಕೆ ಪಶ್ಚಿಮವಾಹಿನಿ ಯೋಜನೆ ಜಾರಿಗೆ ತರಲಾಗಿತ್ತು. ಆದರೆ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಪಶ್ಚಿಮವಾಹಿನಿ ಯೋಜನೆಯಡಿಯಲ್ಲಿ ಕರಾವಳಿ ಭಾಗಕ್ಕೆ ರಾಜ್ಯ ಸರ್ಕಾರ ಅನುದಾನ ನೀಡಿಲ್ಲ ಎಂದರು
