ಸ್ವಾತಂತ್ರ್ಯಕ್ಕಾಗಿ ಬಲಿದಾನ ಮಾಡಿದ ವೀರರನ್ನು ಸ್ಮರಿಸೋಣ: ತಹಶೀಲ್ದಾರ ಬೊಮ್ಮಣ್ಣವರ

ಗುಳೇದಗುಡ್ಡ:

    ದೇಶದ ಸ್ವಾತಂತ್ರ್ಯಕ್ಕಾಗಿ ಅನೇಕ ಮಹನೀಯರು ತ್ಯಾಗ ಬಲಿದಾನ ಮಾಡಿದರು. ಅವರ ತ್ಯಾಗ ಬಲಿದಾನದಿಂದ ನಾವು ಇಂದು ಸ್ವಾತಂತ್ರ್ಯವನ್ನು ಅನುಭವಿಸುತ್ತಿದ್ದೇವೆ. ಸ್ವಾತಂತ್ರ್ಯ ದಿನ ಈ ಸಂದರ್ಭದಲ್ಲಿ ಸ್ವಾತಂತ್ರ್ಯ ಹೋರಾಟಗಾರರನ್ನು ನೆನಪಿಸಿಕೊಳ್ಳವುದು ನಮ್ಮ ಕರ್ತವ್ಯವಾಗಿದೆ ಎಂದು ತಹಶೀಲ್ದಾರ ಎಸ್.ಎಫ್ ಬೊಮ್ಮಣ್ಣವರ ಹೇಳಿದರು.

    ಅವರು ಗುಳೇದಗುಡ್ಡ ತಾಲೂಕು ಆಡಳಿತದ ವತಿಯಿಂದ ಶುಕ್ರವಾರ ಇಲ್ಲಿನ ಬಾಲಕರ ಸರಕಾರಿ ಪಪೂ ಕಾಲೇಜಿನ ಮೈದಾನದಲ್ಲಿ ಹಮ್ಮಿಕೊಂಡಿದ್ದ 79ನೇ ಸ್ವಾತಂತ್ರ್ಯೋತ್ಸವದ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಬ್ರಿಟೀಷರ ದಬ್ಬಾಳಿಕೆಯಿಂದ ಬೇಸತ್ತು ಪ್ರಥಮ ಸ್ವಾತಂತ್ರ್ಯ ಸಂಗ್ರಾಮ ಜನರಲ್ಲಿ ಸ್ವಾತಂತ್ರ್ಯದ ಕಿಚ್ಚು ಹಚ್ಚಿತು. ಮಹಾತ್ಮಾಗಾಂಧೀಜಿ, ಸುಭಾಷಚಂದ್ರ ಭೋಸ್, ಜವಹರಲಾಲ್ ನೆಹರೂ, ಬಾಲಗಂಗಾಧರ ತಿಲಕ್, ಭಗತ್ ಸಿಂಗ್, ಚಂದರಶೇಖರ ಆಜಾದ ಅವರಂತಹ ಲಕ್ಷಾಂತರ ಜನರ ಹೋರಾಟದ ಫಲವಾಗಿ ಬ್ರಿಟೀಷರು ದೇಶ ಬಿಟ್ಟು ಹೋದರು.

   ಇಂತಹ ಸ್ವಾತಂತ್ರ್ಯ ಹೋರಾಟದ ಘಳಿಗೆಗಳನ್ನು ನಾವು ಸದಾ ಸ್ಮರಿಸಬೇಕು ಎಂದರು.79ನೇ ಸ್ವಾತಂತ್ರ್ಯೋತ್ಸವದ ಅಮೃತಮಹೋತ್ಸವದ ನೆನಪಿಗಾಗಿ ಹಿರಿಯ ರಂಗಕಲಾವಿದರು, ಸಂಗೀತ ಕಲಾವಿದರು, ಪರ್ತಕರ್ತರು, ಪ್ರಕಗತಿಪರ ನೇಕಾರರು, ರೈತರು, ಎಸ್‍ಎಸ್‍ಎಲ್‍ಸಿ, ಪಿಯುಸಿಯಲ್ಲಿ ಅಧಿಕ ಅಂಕಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು ಆರಕ್ಷಕ ದಳದವರಿಂದ, ಗೃಹರಕ್ಷಕದಳ, ಎನ್‍ಸಿಸಿ ವಿದ್ಯಾರ್ಥಿಗಳಿಂದ ಧ್ವಜವಂದನಾ ಕಾರ್ಯಕ್ರಮ ನಡೆಯಿತು. ವಿವಿಧ ನಾಯಕರ ವೇಷಧರಿಸಿದ ವಿದ್ಯಾರ್ಥಿಗಳು ಗಮನಸೆಳೆದರು. ಬಳಿಕ ವಿದ್ಯಾರ್ಥಿಗಳಿಂದ ಸಾಂಸ್ಕøತಿಕ ಕಾರ್ಯಕ್ರಮ ನಡೆಯಿತು.

   ಕಾರ್ಯಕ್ರಮದಲ್ಲಿ ಪುರಸಭೆ ಅಧ್ಯಕ್ಷೆ ಜ್ಯೋತಿ ಗೋವಿನಕೊಪ್ಪ, ಉಪಾಧ್ಯಕ್ಷ ರಾಜಶೇಖರ ಹಬ್ಬಳ್ಳಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಂಜಯ ಬರಗುಂಡಿ, ಪುರಸಭೆ ಸದಸ್ಯರಾದ ಉಮೇಶ ಹುನಗುಂದ, ಯಲ್ಲಪ್ಪ ಮನ್ನಿಕಟ್ಟಿ, ಅಮರೇಶ ಕವಡಿಮಟ್ಟಿ, ಜ್ಯೋತಿ ಆಲೂರ, ಶಿಲ್ಪಾ ಹಳ್ಳಿ,ಉಪತಹಶೀಲ್ದಾರ ಜಿ.ವಿ. ರಜಪೂತ, ತಾಪಂ ಇಓ ಮಲ್ಲಿಕಾರ್ಜುನ ಬಡಿಗೇರ, ಪಿಎಸ್‍ಐ ಸಿದ್ದಪ್ಪ ಯಡಹಳ್ಳಿ, ಪುರಸಭೆ ಮುಖ್ಯಾಧಿಕಾರಿ ಅಸ್ಲಂ ಮುಜಾವರ, ವೈ,.ಆರ್. ಹೆಬ್ಬಳ್ಳಿ, ಮುಬಾರಕ ಮಂಗಳೂರು, ಎನ್.ಸಿ. ಮುದಕವಿ, ಶಿವನಯ್ಯ ಮಳ್ಳಿಮಠ, ಆನಂದ ಗೌಡರ, ಚಿದಾನಂದಸಾ ಕಾಟವಾ, ಎಂ.ಎಂ. ತುಪ್ಪದ. ಮತ್ತಿತರರು ಇದ್ದರು.

Recent Articles

spot_img

Related Stories

Share via
Copy link