ತಹಶೀಲ್ದಾರ್ ಕಚೇರಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ

ಬೆಳಗಾವಿ:

   ಹಿರಿಯ ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಸಿಬ್ಬಂದಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಆತ್ಮಹತ್ಯೆ ಸೋಮವಾರ ರಾತ್ರಿ ಆಗಿರಬಹುದು. ಮಂಗಳವಾರ ಬೆಳಿಗ್ಗೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಕಚೇರಿಗೆ ಬಂದ ಮೇಲೆಯೇ ವಿಷಯ ಗೊತ್ತಾಗಿದೆ.

   ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿಯನ್ನು ಎಸ್‌ಡಿಸಿ ರುದ್ರೇಶ ಯಾದವಣ್ಣವರ (35) ಎಂದು ಗುರುತಿಸಲಾಗಿದೆ. ಬೆಳಗಾವಿ ರಿಸಾಲ್ದಾರಗಲ್ಲಿರುವ ಮಹಾನಗರ ಪಾಲಿಕೆಯ ಹಳೆ ಕಟ್ಟಡದಲ್ಲಿ ಕಾರ್ಯ ನಿರ್ವಹಿಸುತ್ತಿರುವ ತಹಸೀಲ್ದಾರ್ ಕಚೇರಿಯಲ್ಲಿ ರುದ್ದಣ್ಣಾ ಅವರು ತಮ್ಮ ಹಿರಿಯ ಅಧಿಕಾರಿಗಳಿಂದ ಕಿರುಕುಳ ತಡೆಯಲಾರದೆ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಆರೋಪಿಸಿ ವಿಡಿಯೋ ರೆಕಾರ್ಡಿಂಗ್ ಮಾಡಿಕೊಂಡು ನೇಣು ಬಿಗಿದು ಸಾವಿಗೆ ಶರಣಾಗಿದ್ದಾರೆ. ಖಡೇ ಬಜಾರ್ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

Recent Articles

spot_img

Related Stories

Share via
Copy link
Powered by Social Snap