ಗ್ಯಾಂಗ್ಟಕ್:
ಸಿಕ್ಕಿಂ ಕ್ರಾಂತಿಕಾರಿ ಮೋರ್ಚಾ ಮುಖ್ಯಸ್ಥ ಪ್ರೇಮ್ ಸಿಂಗ್ ತಮಾಂಗ್ ಅವರು ಜೂನ್ 9 ರಂದು ಎರಡನೇ ಅವಧಿಗೆ ಸಿಕ್ಕಿಂ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವುದಾಗಿ ಬುಧವಾರ ಹೇಳಿದ್ದಾರೆ.
ತಮಾಂಗ್ ಮತ್ತು ಅವರ ಸಂಪುಟದ ಪ್ರಮಾಣ ವಚನ ಸಮಾರಂಭವು ರಾಜ್ಯ ರಾಜಧಾನಿ ಗ್ಯಾಂಗ್ಟಾಕ್‌ನ ಪಾಲ್ಜೋರ್ ಕ್ರೀಡಾಂಗಣದಲ್ಲಿ ನಡೆಯಲಿದೆ.
ಐದು ವರ್ಷಗಳ ಹಿಂದೆ ನಡೆದಂತೆ ಜೂನ್ 9 ರಂದು ಪಾಲ್ಜೋರ್ ಸ್ಟೇಡಿಯಂನಲ್ಲಿ ನೂತನ ಸಚಿವ ಸಂಪುಟದ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ ಎಂದು ತಮಾಂಗ್ ಅವರು ಮಾಧ್ಯಮವೊಂದಕ್ಕೆ ತಿಳಿಸಿದ್ದಾರೆ. ಸಿಕ್ಕಿಂನ ವಿವಿಧ ಭಾಗಗಳಿಂದ ಜನರು ಮತ್ತು ಎಸ್‌ಕೆಎಂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮಕ್ಕೆ ಆಗಮಿಸುವ ನಿರೀಕ್ಷೆಯಿದೆ ಎಂದು ಅವರು ಹೇಳಿದ್ದಾರೆ
ವಿಧಾನಸಭೆ ಚುನಾವಣೆಯಲ್ಲಿ ಮತ್ತು ಸಿಕ್ಕಿಂನ ಏಕೈಕ ಲೋಕಸಭಾ ಕ್ಷೇತ್ರದಲ್ಲಿ ಆಡಳಿತಾರೂಢ ಎಸ್‌ಕೆಎಂ ಗೆಲ್ಲಿಸಿದ್ದಕ್ಕಾಗಿ ಮತ್ತು ಪಕ್ಷದ ಮೇಲೆ ಮತ್ತೊಮ್ಮೆ ನಂಬಿಕೆ ಇಟ್ಟಿದ್ದಕ್ಕಾಗಿ ತಮಾಂಗ್ ಅವರು ಜನರಿಗೆ ಧನ್ಯವಾದ ಅರ್ಪಿಸಿದರು.
ಲೋಕಸಭೆ ಚುನಾವಣೆಯೊಂದಿಗೆ ನಡೆದ ಸಿಕ್ಕಿಂ ವಿಧಾನಸಭೆ ಚುನಾವಣೆಯಲ್ಲಿ 32 ಸ್ಥಾನಗಳ ಪೈಕಿ 31 ಸ್ಥಾನಗಳನ್ನು ಎಸ್‌ಕೆಎಂ ಗೆದ್ದುಕೊಂಡಿದೆ.
