‘ಮಸೀದಿಗಳಲ್ಲಿ ಧ್ವನಿವರ್ಧಕಗಳನ್ನು ಅಳವಡಿಸುವುದು ಮೂಲಭೂತ ಹಕ್ಕಲ್ಲ’ ಎಂದು ಅಲಹಾಬಾದ್ ಉಚ್ಚ ನ್ಯಾಯಾಲಯ ಹೇಳಿದೆ. ಮಸೀದಿಗಳಲ್ಲಿ ಧ್ವನಿವರ್ಧಕಗಳನ್ನು ಅಳವಡಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ವಜಾಗೊಳಿಸಿದೆ.
ರಾಜ್ಯಕ್ಕೆ ಮತ್ತೊಂದು ಬಿಗ್ ಶಾಕ್ : ಒಮಿಕ್ರಾನ್ನ BA.4, BA.5 ಉಪತಳಿ ಪತ್ತೆ
ಧ್ವನಿವರ್ಧಕಗನ್ನು ತೆರವು ಗೊಳಿಸುವಂತೆ ಬದೌನ್ ಜಿಲ್ಲೆಯ ಬಿಸೌಲಿ ಉಪವಿಭಾಗೀಯ ಮ್ಯಾಜಿಸ್ಟ್ರೇಟ್ (ಎಸ್ಡಿಎಂ) ಹೊರಡಿಸಿದ ಆದೇಶವನ್ನು ಪ್ರಶ್ನಿಸಿ ಇರ್ಫಾನ್ ಎಂಬ ವ್ಯಕ್ತಿಯು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿ ಎಸ್ಡಿಎಂ ಆದೇಶವು “ಕಾನೂನುಬಾಹಿರ” ಮತ್ತು ಇದು “ಮೂಲಭೂತ ಹಕ್ಕುಗಳು ಮತ್ತು ಕಾನೂನು ಹಕ್ಕುಗಳನ್ನು ಉಲ್ಲಂಘಿಸುತ್ತದೆ” ಎಂದು ಆರೋಪಿಸಿದ್ದರು.
ಅರ್ಜಿಯನ್ನು ವಿಚಾರಣೆ ಮಾಡಿದ ನ್ಯಾಯಮೂರ್ತಿ ವಿವೇಕ್ ಕುಮಾರ್ ಬಿರ್ಲಾ ಮತ್ತು ನ್ಯಾಯಮೂರ್ತಿ ವಿಕಾಸ್ ಅವರಿದ್ದ ವಿಭಾಗೀಯ ಪೀಠವು ಬುಧವಾರ ಈ ಆದೇಶ ನೀಡಿದ್ದು, ”ಮಸೀದಿಗಳಲ್ಲಿ ಧ್ವನಿವರ್ಧಕಗಳನ್ನು ಬಳಸುವುದು ಸಾಂವಿಧಾನಿಕ ಹಕ್ಕು ಅಲ್ಲ ಎಂದು ಕಾನೂನು ಹೇಳುತ್ತದೆ” ಎನ್ನುವ ಮೂಲಕ ಅರ್ಜಿಯನ್ನು ತಳ್ಳಿಹಾಕಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ