ಪಕ್ಷದಲ್ಲಿನ ಗೊಂದಲಗಳಿಗೆ ಶೀಘ್ರದಲ್ಲಿಯೇ ಉತ್ತರ : ವಿಜಯೇಂದ್ರ

ಶಿವಮೊಗ್ಗ:

   ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಯಾರು ಎಂಬುದಕ್ಕೆ ಇನ್ನೊಂದು ವಾರದಲ್ಲಿಯೇ ಉತ್ತರ ಸಿಗಲಿದೆ. ತದನಂತರ ಪಕ್ಷದಲ್ಲಿ ಉಂಟಾಗಿರುವ ಎಲ್ಲ ಗೊಂದಲಗಳಿಗೂ ಉತ್ತರ ಸಿಗಲಿದೆ ಎಂದು ವಿಜಯೇಂದ್ರ ಹೇಳಿದ್ದಾರೆ.

   ಬಿಜೆಪಿಯಲ್ಲಿ ದಿನೇ ದಿನೇ ಹೆಚ್ಚುತ್ತಿರುವ ಆಂತರಿಕ ಗೊಂದಲಗಳ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಆಂತರಿಕ ಗೊಂದಲಗಳು, ಬಹಿರಂಗ ಹೇಳಿಕೆಗಳಿಂದ ಪಕ್ಷಕ್ಕೆ ಎಷ್ಟು ಹಾನಿಯಾಗಬೇಕೋ ಅಷ್ಟು ಆಗಿದೆ. ಪಕ್ಷದ ರಾಜ್ಯ ಘಟಕದ ಅಧ್ಯಕ್ಷನಾಗಿ ಜವಾಬ್ದಾರಿಯ ಅರಿವು ನನಗಿರುವುದರಿಂದ ಕಳೆದೊಂದು ವರ್ಷದಿಂದ ಪಕ್ಷದ ಮುಖಂಡರು ಹಾಗೂ ಪಕ್ಷದ ವಿರುದ್ಧ ಯಾವುದೇ ಬಹಿರಂಗ ಹೇಳಿಕೆ ನೀಡಿಲ್ಲ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡೇ ಈ ಭ್ರಷ್ಟ-ದುಷ್ಟ ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟ ಮಾಡುತ್ತಾ ಬಂದಿದ್ದೇನೆ ಎಂದರು.

   ಬಿಜೆಪಿಯಲ್ಲಿ ಆಂತರಿಕ ಪ್ರಜಾಪ್ರಭುತ್ವ ಇದೆ. ಮಂಡಲ, ಜಿಲ್ಲಾ ಘಟಕದ ಅಧ್ಯಕ್ಷರ ಆಯ್ಕೆಗೆ ಇಷ್ಟೊಂದು ವ್ಯವಸ್ಥಿತವಾಗಿ ಸಂಘಟಿತವಾಗಿ ನಡೆದಿರುವ ಚುನಾವಣೆ ಬೇರೆ ಎಲ್ಲೂ ನಡೆಯಲು ಸಾಧ್ಯವಿಲ್ಲ. ಪಕ್ಷದ ವರಿಷ್ಠರ ನಿರ್ಧಾರದಂತೆ ಎಲ್ಲವೂ ನಡೆದಿದೆ ಎಂದು ಹೇಳಿದರು .ರಾಜ್ಯದ ಜನರಿಗೆ, ಪಕ್ಷದ ಕಾರ್ಯಕರ್ತರು, ಶಾಸಕರಿಗೆ ಪಕ್ಷದ ಸಂಘಟನೆಯಲ್ಲಿ ವಿಜಯೇಂದ್ರ ಮಾಡಿರುವ ಕೆಲಸ ಗೊತ್ತಿದೆ. ನನಗೆ ವಿಶ್ವಾಸವಿದೆ. ಎಲ್ಲರ ಸಹಕಾರದಿಂದ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷನಾಗಿ ಮುಂದುವರೆಯುವೆ. ಪಕ್ಷವನ್ನು ಮತ್ತೆ ಬಲಪಡಿಸುವೆ ಎಂದರು.  

   ಬಿಜೆಪಿಯಲ್ಲಿ ಆಂತರಿಕ ಪ್ರಜಾಪ್ರಭುತ್ವದ ವ್ಯವಸ್ಥೆ ಇದೆ. ಒಂದು ವಾರದ ಬಳಿಕ ಎಲ್ಲವೂ ಸರಿಯಾಗಲಿದೆ. ವ್ಯವಸ್ಥಿತವಾಗಿ ಸಂಘಟನೆ, ಚುನಾವಣೆ ನಡೆಯುವುದು ಬಿಜೆಪಿಯಲ್ಲಿ ಮಾತ್ರ. ಮಂಡಲ ಮಟ್ಟದಿಂದ ರಾಜ್ಯಮಟ್ಟದವರೆಗೂ ಚುನಾವಣೆ ನಡೆಯುತ್ತದೆ. ರಾಜ್ಯ, ರಾಷ್ಟ್ರೀಯ ಅಧ್ಯಕ್ಷರ ಚುನಾವಣೆ ವ್ಯವಸ್ಥಿತವಾಗಿ ನಡೆಯುತ್ತಿದೆ. ಪಕ್ಷದ ಕಾರ್ಯಕರ್ತರು ಹೋರಾಟ ಮಾಡಿಕೊಂಡು ಬಂದಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಭ್ರಷ್ಟ​ ಸರ್ಕಾರದ ವಿರುದ್ಧ ನಿರಂತರ ಹೋರಾಟ ಮಾಡುತ್ತಿದ್ದೇವೆ. ನಾನು ಅಧ್ಯಕ್ಷನಾಗಿ ಕೆಲಸ ಮಾಡಿದ ರೀತಿ ಕಾರ್ಯಕರ್ತರಿಗೆ ಗೊತ್ತಿದೆ. ನಾನು ಮತ್ತೆ ಬಿಜೆಪಿ ರಾಜ್ಯಾಧ್ಯಕ್ಷನಾಗುತ್ತೇನೆಂಬ ಪೂರ್ಣ ವಿಶ್ವಾಸವಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಶಯ ವ್ಯಕ್ತಪಡಿಸಿದರು.

   ಕಳೆದ ವರ್ಷದಿಂದ ನಾನು ಯಾರು ಏನೇ ಹೇಳಿದರೂ ಯಾರ ವಿರುದ್ಧವೂ ಬಹಿರಂಗ ಹೇಳಿಕೆ ಕೊಟ್ಟಿಲ್ಲ. ಪಕ್ಷದ ವಿರುದ್ಧವೂ ಹೇಳಿಕೆ ಕೊಟ್ಟಿಲ್ಲ. ರಾಜ್ಯದ ಅಧ್ಯಕ್ಷನಾಗಿ ಕರ್ತವ್ಯದ ಅರಿವು ನನಗಿದೆ. ಬಹಳ ದೊಡ್ಡ ಜವಾಬ್ದಾರಿಯನ್ನು ಕಳೆದೊಂದು ವರ್ಷದಿಂದ ಯಶಸ್ವಿಯಾಗಿ ನಡೆಸಿಕೊಂಡು ಬಂದಿದ್ದೆನೆ. 8-10 ದಿನಗಳಲ್ಲಿ ರಾಜ್ಯದ ಅಧ್ಯಕ್ಷ ಯಾರೆಂಬುದಕ್ಕೆ ಉತ್ತರ ಸಿಗಲಿದೆ. ಬಳಿಕ ಎಲ್ಲ ಸಮಸ್ಯೆಗಳು ಬಗೆ ಹರಿಯಲಿವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

 

Recent Articles

spot_img

Related Stories

Share via
Copy link