ರೈತರು, ಮಹಿಳೆಯರು, ವಿದ್ಯಾರ್ಥಿಗಳಿಗೆ ಹೊಸ ಆಫರ್‌ಗಳು
ಬೆಂಗಳೂರು
ಮುAಬರುವ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಎಲ್ಲಾ ವರ್ಗದ ಜನರನ್ನು ಓಲೈಸಲು ಮುಂದಾಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬರೋಬ್ಬರಿ 3,09,182 ಕೋಟಿ ರೂ. ಮೊತ್ತದ ಆಯವ್ಯಯವನ್ನು ಶುಕ್ರವಾರ ವಿಧಾನಸಭೆಯಲ್ಲಿ ಮಂಡಿಸಿದರು.
ರೈತರು, ಮಹಿಳೆಯರು, ವಿದ್ಯಾರ್ಥಿಗಳು ಹಾಗೂ ದುಡಿಯುವ ವರ್ಗವನ್ನು ಕೇಂದ್ರವಾಗಿಟ್ಟುಕೊAಡು ಅನೇಕ ಯೋಜನೆಗಳನ್ನು ಘೋಷಿಸಿರುವುದರ ಹಿಂದೆ ಮುಂಬರುವ ಚುನಾವಣೆ ಸ್ಪಷ್ಟವಾಗಿ ಕಾಣುತ್ತಿದ್ದು ಇದು ಸಾಲದ ಬಜೆಟ್ ಎಂದು ವಿಪಕ್ಷಗಳು ಟೀಕಿಸಿದ್ದರೆ, ಸರ್ವಸ್ಪರ್ಶಿ ಆಯವ್ಯಯ ಎಂದು ಆಡಳಿತಾರೂಢ ಬಿಜೆಪಿ ನಾಯಕರು ಸಮರ್ಥಿಸಿಕೊಂಡಿದ್ದಾರೆ.
ರೈತರು, ವಿದ್ಯಾರ್ಥಿಗಳು, ಮಹಿಳೆಯರಿಗೆ ಕೊಡುಗೆ
ಬಜೆಟ್‌ನಲ್ಲಿ ರೈತರಿಗೆ ಬಂಪರ್ ಕೊಡುಗೆ ನೀಡಿರುವ ಹಣಕಾಸು ಸಚಿವರು ಆಗಿರುವ ಮುಖ್ಯಮಂತ್ರಿಗಳು ಅನ್ನದಾತರಿಗೆ ನೆರವಾಗಲು ಶೂನ್ಯ ಬಡ್ಡಿ ಸಾಲವನ್ನು 3 ಲಕ್ಷದಿಂದ 5 ಲಕ್ಷಕ್ಕೆ ಏರಿಕೆ, 10000 ಹೆಚ್ಚುವರಿ ಸಹಾಯಧನ ಒದಗಿಸುವ ಭೂಸಿರಿ ಯೋಜನೆ, ಬೆಂಬಲ ಬೆಲೆಯಲ್ಲಿ ಬೆಳೆಗಳ ಖರೀದಿಗೆ ಆವರ್ತ ನಿಧಿ ಹೆಚ್ಚಳ, ಭೂ ರಹಿತ ಮಹಿಳಾ ಕಾರ್ಮಿಕರಿಗೆ 500 ರೂ. ಗೃಹಿಣಿ ಶಕ್ತಿ ಯೋಜನೆ, ವಿದ್ಯಾರ್ಥಿನಿಯರಿಗೆ ಮತ್ತು ದುಡಿಯುವ ಮಹಿಳೆಯರಿಗೆ ಉಚಿತ ಬಸ್‌ಪಾಸ್ ಯೋಜನೆ, ಅಸಂಘಟಿತ ವಲಯ ಕಾರ್ಮಿಕರಿಗೆ ಮುಖ್ಯಮಂತ್ರಿ ವಿಮಾ ಯೋಜನೆ, ಸರ್ಕಾರಿ ಕಾಲೇಜುಗಳ ಅರ್ಹ ವಿದ್ಯಾರ್ಥಿಗಳಿಗೆ ಶುಲ್ಕವಿನಾಯಿತಿಯ ಮುಖ್ಯಮಂತ್ರಿ ವಿದ್ಯಾಶಕ್ತಿ ಯೋಜನೆ ಸೇರಿದಂತೆ ವಿವಿಧ ವರ್ಗಗಳು, ವಲಯಗಳ ಅಭಿವೃದ್ಧಿಗೆ ಹತ್ತು ಹಲವು ಯೋಜನೆಗಳನ್ನು ಬಜೆಟ್ ನಲ್ಲಿ ಪ್ರಕಟಿಸಿದ್ದಾರೆ.
ಚುನಾವಣೆಯ ಹೊಸ್ತಿಲಲ್ಲಿ ಬಜೆಟ್ ಮಂಡಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಡವರು, ಮಧ್ಯಮವರ್ಗದವರು, ಮಹಿಳೆಯರ ಮತಗಳ ಮೇಲೆ ಕಣ್ಣಿಟ್ಟು, ಈ ವರ್ಗದ ಕಲ್ಯಾಣಕ್ಕಾಗಿ ಹಲವು ಆರ್ಥಿಕ ನೆರವಿನ ಯೋಜನೆಗಳನ್ನು ಬಜೆಟ್‌ನಲ್ಲಿ ಘೋಷಿಸಿದ್ದಾರೆ. ಮಠ-ಮಂದಿರಗಳಿಗೂ ಅನುದಾನ ನೀಡಿರುವ ಮುಖ್ಯಮಂತ್ರಿಗಳು, ಬೆಂಗಳೂರು ಅಭಿವೃದ್ಧಿಗೆ ಹೆಚ್ಚಿನ ಅನುದಾನ ಒದಗಿಸಿ, ಕಿತ್ತೂರು ಕರ್ನಾಟಕ ಭಾಗದ ಅಭಿವೃದ್ಧಿಗೆ ಮಂಡಳಿ ಸ್ಥಾಪನೆ ಮಾಡುವ ಘೋಷಣೆಯನ್ನೂ ಮಾಡಿ, ಆಟೋ, ಟ್ಯಾಕ್ಸಿ ಚಾಲಕರ ವಿಮಾ ಯೋಜನೆ ಸೇರಿದಂತೆ ವಿವಿಧ ದುಡಿಯುವ ವರ್ಗಗಳ ಅಭಿವೃದ್ಧಿಗೂ ಗಮನ ನೀಡಿದ್ದಾರೆ.
ಸರ್ಕಾರಿ ನೌಕರರಿಗಾಗಿ 7ನೇ ವೇತನ ಆಯೋಗವನ್ನು ಸರ್ಕಾರ ರಚಿಸಿದ್ದರೂ, ಸರ್ಕಾರಿ ನೌಕರರಿಗೆ ಮಧ್ಯಂತರ ಪರಿಹಾರ ನೀಡುವ ಬಗ್ಗೆ ಬಜೆಟ್‌ನಲ್ಲಿ ಯಾವುದೇ ಪ್ರಸ್ತಾಪ ಮಾಡಿಲ್ಲ.ರೈತರಿಗೆ ಈ ಬಜೆಟ್‌ನಲ್ಲಿ ಹೆಚ್ಚಿನ ನೆರವು ಒದಗಿಸಲಾಗಿದ್ದು, ಶೂನ್ಯ ಬಡ್ಡಿದರದ ಸಾಲವನ್ನು 3 ಲಕ್ಷದಿಂದ 5 ಲಕ್ಷಕ್ಕೆ ಏರಿಕೆ ಮಾಡಲಾಗಿದ. ಕಾರ್ಮಿಕರ ಕಲ್ಯಾಣಕ್ಕೆ ಆದ್ಯತೆ ನೀಡಿ ಆಟೋ, ಟ್ಯಾಕ್ಸಿ ಚಾಲಕರ ಕಲ್ಯಾಣ ಯೋಜನೆಗಳನ್ನು ಘೋಷಿಸಿದ್ದಾರೆ.
ಬದುಕುವ ದಾರಿ ಯೋಜನೆ:
ಬದುಕುವ ದಾರಿ ಹೊಸ ಯೋಜನೆಯಡಿ ಶಾಲಾ ಶಿಕ್ಷಣದ ನಂತರ ವಿದ್ಯಾಭ್ಯಾಸದ ಮುಂದುವರೆಸಲು ಸಾಧ್ಯವಾಗದ ಯುವ ಜನರಿಗೆ ಐಟಿಐಗಳಲ್ಲಿ 3 ತಿಂಗಳ ವೃತ್ತಿಪರ ಸರ್ಟಿಫಿಕೇಟ್ ಪಡೆಯಲು ಮಾಸಿಕ 1500 ರೂ. ಶಿಷ್ಯ ವೇತನ ಪ್ರಕಟಿಸುವ ಜತೆಗೆ 2023-24ನೇ ಸಾಲಿನಲ್ಲಿ ಪ್ರತಿ ಗ್ರಾಮ ಪಂಚಾಯ್ತಿಗೆ 22 ರಿಂದ 60 ಲಕ್ಷ ರೂ.ಗಳಷ್ಟು ಅನುದಾನ ಲಭ್ಯ ಪಡಿಸಲು 780 ಕೋಟಿ ರೂ.ಗಳ ಒಂದು ಬಾರಿಯ ವಿಶೇಷ ಅನುದಾನ ನೀಡುವುದಾಗಿ ಅವರು ಪ್ರಕಟಿಸಿದರು.
ಶಿಕ್ಷಣ, ಉದ್ಯೋಗ ಮತ್ತು ಸಬಲೀಕರಣದ ಮಂತ್ರದೊAದಿಗೆ ಪರಿಶಿಷ್ಟ ಜಾತಿ, ಪಂಗಡ, ಹಿಂದುಳಿದ ವರ್ಗ ಅಲ್ಪಸಂಖ್ಯಾತರು, ಮಹಿಳೆಯರು, ದುರ್ಬಲ ವರ್ಗದವರ ಸ್ವಾಭಿಮಾನ, ಸ್ವಾವಲಂಬನೆಯ ಬದುಕಿಗೆ ಬೆಂಬಲ ನೀಡಿ ಪರಿಶಿಷ್ಟ ಜಾತಿಯ ಮೀಸಲಾತಿಯನ್ನು ಶೇ. 15 ರಿಂದ 17ಕ್ಕೆ, ಪರಿಶಿಷ್ಟ ಪಂಗಡದ ಮೀಸಲಾತಿಯನ್ನು ಶೇ. 3 ರಿಂದ 7ಕ್ಕೆ ಹೆಚ್ಚಿಸುವ ಮಹತ್ವದ ನಿರ್ಧಾರವನ್ನು ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದರು.
ರಾಜ್ಯದಲ್ಲಿ ಒಟ್ಟಾರೆ 24 ಸಾವಿರ ಪೌರ ಕಾರ್ಮಿಕರ ಸೇವೆಯನ್ನು ಖಾಯಂಗೊಳಿಸುವ ಐತಿಹಾಸಿಕ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅವರು ಪ್ರಕಟಿಸಿದರು.023ನೇ ವರ್ಷವನ್ನು ಸಿರಿಧಾನ್ಯ ವರ್ಷವನ್ನಾಗಿ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ಸಿರಿಧಾನ್ಯ ಬೆಳೆಯುವ ಬೆಳೆಗಾರರಿಗೆ ಪ್ರತಿ ಹೆಕ್ಟೇರ್‌ಗೆ ರೈತ ಸಿರಿ ಯೋಜನೆಯಡಿ 10 ಸಾವಿರ ರೂಪಾಯಿ ಪ್ರೋತ್ಸಾಹ ನೀಡಲು ಉದ್ದೇಶಿಸಲಾಗಿದೆ ಎಂದು ಪ್ರಕಟಿಸಿದ ಅವರು, ಕೊಯ್ಲೋತ್ತರ ತಂತ್ರಜ್ಞಾನಕ್ಕೆ ಒತ್ತು ಕೊಟ್ಟು ತೋಟಗಾರಿಕೆ ಬೆಳೆಗಳ ಮೌಲ್ಯವರ್ಧನೆ ಹೆಚ್ಚಿಸಲು ಕೆಪೆಕ್ ಸಂಸ್ಥೆಯ ಮೂಲಕ 100 ಕೋಟಿ ರೂಪಾಯಿ ನೆರವು ಪ್ರಕಟಿಸಲಾಗಿದೆ ಎಂದು ತಿಳಿಸಿದರು.
ಶಿಕ್ಷಣ-ಆರೋಗ್ಯ ಸೇವೆಗೆ ಒತ್ತು ರಾಜ್ಯದಲ್ಲಿ ಶಿಕ್ಷಣ ಮತ್ತು ಆರೋಗ್ಯ ಸೇವೆಗಳು ಎಲ್ಲಾ ಸಮುದಾಯಗಳಿಗೆ ಮತ್ತು ಎಲ್ಲಾ ಪ್ರದೇಶದ ಜನರಿಗೆ ಸುಲಭವಾಗಿ ಸಿಗಬೇಕು ಎನ್ನುವುದು ನಮ್ಮ ಸರ್ಕಾರದ ಉದ್ದೇಶವಾಗಿದೆ ಎಂದಿರುವ ಮುಖ್ಯಮಂತ್ರಿ ಪರಿಶಿಷ್ಟ ಜಾತಿ, ಪಂಗಡಗಳು, ಹಿಂದುಳಿದ ವರ್ಗಗಳು, ಅಲ್ಪಸಂಖ್ಯಾತ ಸಮುದಾಯದ ಸರ್ವತೋಮುಖ ಅಭಿವೃದ್ಧಿಗೆ ಜಾರಿಯಲ್ಲಿರುವ ಯೋಜನೆಗಳನ್ನು ಸರಳ, ಸುಗಮಗೊಳಿಸುವ ನೂತನ ಕಾರ್ಯಕ್ರಮಗಳನ್ನು ರೂಪಿಸಲಾಗಿದೆ ಎಂದು ಬಜೆಟ್‌ನಲ್ಲಿ ಪ್ರಕಟಿಸಿರುವ ಸಿಎಂ ರಾಜ್ಯದ 45 ತಾಲ್ಲೂಕುಗಳಲ್ಲಿ ಆಸ್ಪತ್ರೆಗಳನ್ನು ಜಯದೇವ ಸಂಸ್ಥೆಯೊAದಿಗೆ ಜೋಡಿಸಿ ಹೃದ್ರೋಗ ಚಿಕಿತ್ಸೆ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಡಿಯಲ್ಲಿ ಖಾಸಗಿ ಆಸ್ಪತ್ರೆಗಳನ್ನು ಹೆಚ್ಚು ಸೇರಿಸಲು ಕ್ರಮ ಕೈಗೊಳ್ಳುವುದರ ಜತೆಗೆ ತಾಯಿ ಮತ್ತು ಶಿಶು ಮರಣ ಪ್ರಮಾಣವನ್ನು ಮತ್ತಷ್ಟು ಇಳಿಕೆಗೆ ಕ್ರಮ ಕೈಗೊಳ್ಳಲಾಗುವುದು ಎಂದರು.
ರಾಜ್ಯದ ಗ್ರಾಮೀಣ ಭಾಗದ ಜನರಿಗೆ 2023-24ನೇ ಸಾಲಿನಲ್ಲಿ ಎರಡು ಬಾರಿ ಹಳ್ಳಿಗಳಲ್ಲಿ ಆರೋಗ್ಯ ಶಿಬಿರಗಳನ್ನು ಹಮ್ಮಿಕೊಳ್ಳಲು ಮನೆ ಮನೆಗೆ ಆರೋಗ್ಯ ಶಿಬಿರ ಹಮ್ಮಿಕೊಳ್ಳಲಾಗುತ್ತಿದೆ. ಇದರಿಂದ ತೀವ್ರವಾದ ಕಾಯಿಲೆಗಳನ್ನು ಆರಂಭದಲ್ಲೇ ಪತ್ತೆಹಚ್ಚಿ ಜನರ ಆರೋಗ್ಯ ಕಾಪಾಡುವ ಗುರಿ ಹೊಂದಲಾಗಿದೆ ಎಂದು ಅವರು ತಿಳಿಸಿದ್ದಾರೆ.
1 ಲಕ್ಷಕ್ಕೆ ಏರಿಕೆ:
ಡಯಾಲಿಸಿಸ್ ರೋಗಿಗಳಿಗೆ ಉಚಿತ ಡಯಾಲಿಸಿಸ್ ಸೇವೆಯನ್ನು 30 ಸಾವಿರ ಡಯಾಲಿಸಿಸ್ ಸೈಕಲ್‌ನಿಂದ 60 ಸಾವಿರ ಸೈಕಲ್‌ಗೆ ಹೆಚ್ಚಿಸಲಾಗಿತ್ತು. ಈ ಪ್ರಸಕ್ತ ಸಾಲಿನಲ್ಲಿ 1 ಲಕ್ಷ ಡಯಾಲಿಸಿಸ್ ಸೈಕಲ್‌ಗೆ ಏರಿಕೆ ಮಾಡಲಾಗುವುದು ಎಂದು ಅವರು ಪ್ರಕಟಿಸಿದ್ದಾರೆ.
ಗೌರವಧನ ಹೆಚ್ಚಳ:
ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು, ಆಶಾ ಕಾರ್ಯಕರ್ತೆಯರು, ಬಿಸಿಯೂಟ ತಯಾರಕರು, ಸಹಾಯಕರು, ಗ್ರಂಥಪಾಲಕರ ಸೇವೆಯನ್ನು ಗುರುತಿಸಿ ಮಾಸಿಕ ಗೌರವ ಧನವನ್ನು 1 ಸಾವಿರದಂತೆ ಹೆಚ್ಚಿಸಲು ನಿರ್ಧಾರ ಕೈಗೊಂಡಿರುವುದಾಗಿ ಅವರು ತಿಳಿಸಿದರು.
ರೈತನಿಧಿ ವಿಸ್ತರಣೆ
ರೈತ ವಿದ್ಯಾನಿಧಿ ಯೋಜನೆಯಡಿ ರಾಜ್ಯದ 10.32 ಲಕ್ಷ ರೈತ ಮಕ್ಕಳಿಗೆ ನೆರವು ನೀಡುವ ಜತೆಗೆ ಭೂ ರಹಿತ ಕೃಷಿ, ಕೂಲಿ ಕಾರ್ಮಿಕರು, ಮೀನುಗಾರರು, ಹಳದಿ ಬೋರ್ಡ್ ಟ್ಯಾಕ್ಸಿ ಚಾಲಕರು, ಆಟೋ ರಿಕ್ಷಾ ಚಾಲಕರ ಮಕ್ಕಳಿಗೆ ರೈತ ನಿಧಿ ಯೋಜನೆಯನ್ನು ವಿಸ್ತರಿಸುವುದಾಗಿ ಪ್ರಕಟಿಸಿದ್ದಾರೆ. ಹೆಚ್ಚುವರಿಯಾಗಿ 3 ಲಕ್ಷ ವಿದ್ಯಾರ್ಥಿಗಳಿಗೆ 141 ಕೋಟಿ ರೂ. ಮೊತ್ತವನ್ನು ಮೀಸಲಿಡಲಾಗಿದೆ. ಪ್ರಸಕ್ತ ಸಾಲಿನಲ್ಲಿ ಈ ಯೋಜನೆಯನ್ನು ಸಿಂಪಿಗರ ಮಕ್ಕಳಿಗೂ ವಿಸ್ತರಿಸಲಾಗುವುದು ಎಂದು ಅವರು ಹೇಳಿದರು.
ಕನ್ನಡ ಭಾಷೆಯಲ್ಲಿ ಪರೀಕ್ಷೆ
ಉನ್ನತ ಶಿಕ್ಷಣ ಪಡೆಯಲು ಇರುವ ಭಾಷೆ ತೊಡಕು ನಿವಾರಿಸಲು ರಾಜ್ಯದ ಎಲ್ಲ ವಿಶ್ವವಿದ್ಯಾನಿಲಯಗಳಲ್ಲಿ ಹಾಗೂ ವೃತ್ತಿಪರ ಕೋರ್ಸ್ಗಳಲ್ಲಿ ಕನ್ನಡದಲ್ಲೂ ಪರೀಕ್ಷೆ ಬರೆಯಲು ಅನುವಾಗುವಂತೆ ಅಗತ್ಯ ಕ್ರಮವಹಿಸಲಾಗಿದೆ. ವ್ಯಾಪಕ ಬಳಕೆಯಲ್ಲಿರುವ ರೆಫರೆನ್ಸ್ ಪುಸ್ತಕಗಳು ಹಾಗೂ ಪಠ್ಯ ವಿಷಯಗಳನ್ನು ಮುಂದಿನ ಒಂದು ವರ್ಷದಲ್ಲಿ ಭಾಷಾಂತರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯಲ್ಲಿ ಹೊಸ ಪಾಲಿಟೆಕ್ನಿಕ್ ಕಾಲೇಜು ಆರಂಭಿಸಲು ಕ್ರಮ ಕೈಗೊಳ್ಳಲಾಗುವುದು.
ಸ್ತ್ರೀ ಸಾಮರ್ಥ್ಯ ಯೋಜನೆ ಜಾರಿ
ಮಹಿಳೆಯರು ಹೆಚ್ಚಿನ ಆರ್ಥಿಕ ಸಂಖ್ಯೆಯಲ್ಲಿ ಆರ್ಥಿಕ ಚಟುವಟಿಕೆಗಳಲ್ಲಿ ತೊಡಗಿಕೊಳ್ಳು ವುದನ್ನು ಪ್ರೋತ್ಸಾಹಿಸಲು ಸ್ತಿçà ಸಾಮರ್ಥ್ಯ ಯೋಜನೆಯನ್ನು ಜಾರಿಗೊಳಿಸಲಾಗಿದ್ದು, ಇದರಡಿ ಗೃಹಶಕ್ತಿ ಯೋಜನೆಯನ್ನು ಪ್ರಸಕ್ತ ವರ್ಷದಿಂದ ಜಾರಿ ಮಾಡಲು ಉದ್ದೇಶಿಸಲಾಗಿದೆ ಎಂದು ಹೇಳಿದರು.
ಸ್ವಸಹಾಯ ಗುಂಪುಗಳಿಗೆ ಬಂಡವಾಳ ನಿಧಿ ನೀಡಲು ಹಾಗೂ ಸಹಕಾರ ವಲಯದಲ್ಲಿ ಶೂನ್ಯ ಬಡ್ಡಿ ದರದಲ್ಲಿ ಸಾಲ ಒದಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.ದುಡಿಯುವ ಮಹಿಳೆಯರಿಗಾಗಿ ನಗರ ಪ್ರದೇಶಗಳಲ್ಲಿ 4 ಸಾವಿರ ಶಿಶುಪಾಲನಾ ಕೇಂದ್ರ ಮತ್ತು ಗ್ರಾಮೀಣ ಭಾಗದಲ್ಲಿ 500 ಶಿಶುವಿಹಾರ ಪ್ರಾರಂಭಿಸುವ ಘೋಷಣೆಯನ್ನು ಬಜೆಟ್‌ನಲ್ಲಿ ಮಾಡಿದ್ದಾರೆ.
ಶಾಲಾ-ಕಾಲೇಜುಗಳ ವಿದ್ಯಾರ್ಥಿನಿಯರಿಗೆ ವಿದ್ಯಾವಾಹಿನಿ ಯೋಜನೆಯಡಿ ಉಚಿತ ಬಸ್‌ಪಾಸ್ ನೀಡುವ ಘೋಷಣೆಯನ್ನೂ ಮಾಡಿದ್ದಾರೆ. ಸರ್ವರಿಗೂ ಸೂರು ಒದಗಿಸುವ ವಸತಿ ಯೋಜನೆಗಳಿಗೂ ವಿಶೇಷ ಅನುದಾನಗಳನ್ನು ಬಜೆಟ್‌ನಲ್ಲಿ ನೀಡಲಾಗುವುದು, ರಸ್ತೆ, ರೈಲುಜಾಲ ಅಭಿವೃದ್ಧಿಗೂ ಒತ್ತು ನೀಡಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ