ಡೆಹ್ರಾಡೂನ್:
ಕಟ್ಟಡ ಕುಸಿತ ಹಿನ್ನೆಲೆಯಲ್ಲಿ ಅವಶೇಷಗಳ ಅಡಿಯಲ್ಲಿ ಹಲವರು ಸಿಲುಕಿದ್ದು, ಈವರೆಗೂ ಮೂವರನ್ನು ರಕ್ಷಣೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಇನ್ನೂ ಕೆಲವರು ಸಿಲುಕಿರುವ ಸಾಧ್ಯತೆಯಿದ್ದು, ಪರಿಹಾರ ಮತ್ತು ರಕ್ಷಣಾ ಕಾರ್ಯವನ್ನು ತ್ವರಿತ ಗತಿಯಲ್ಲಿ ನಡೆಸಲಾಗುತ್ತಿದೆ.
ಅಲಕನಂದಾ ನದಿ ದಡದಲ್ಲಿರುವ ಕ್ರಷರ್ ಘಟಕದ ಬಳಿ ಎರಡು ಅಂತಸ್ತಿನ ಮನೆ ನಿರ್ಮಿಸಲಾಗಿದ್ದು, ಕಳೆದ ಹಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು, ಕಟ್ಟಡ ಶಿಥಿಲಾವಸ್ಥೆ ತಲುಪಿದೆ. ಕ್ರಷರ್ ಘಟಕದಲ್ಲಿ ಕೆಲಸ ಮಾಡುವವರು ಈ ಮನೆಯಲ್ಲಿ ವಾಸಿಸುತ್ತಿದ್ದರು. ಈ ಅವಘಡ ಸಂಭವಿಸಿದಾಗ ಕಟ್ಟಡದಲ್ಲಿ ಸಾಕಷ್ಟು ಮಂದಿ ಇದ್ದರು ಎಂದು ಹೇಳಲಾಗುತ್ತಿದೆ. ಗಾಯಗೊಂಡವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಟ್ಟಡದ ಅವಶೇಷಗಳ ಅಡಿಯಲ್ಲಿ ನಾಲ್ವರು ಸಿಲುಕಿರುವ ಶಂಕೆ ಇದೆ ಎಂದು ಹೇಳಲಾಗುತ್ತಿದೆ. ಆದರೆ ಅಧಿಕಾರಿಗಳು ಇದನ್ನು ಇನ್ನೂ ಖಚಿತಪಡಿಸಿಲ್ಲ.
ಈ ವರ್ಷದ ಆರಂಭದಲ್ಲಿ ಜೋಶಿಮಠದಲ್ಲಿ ಭೂಕುಸಿತದಿಂದ ಹಲವಾರು ಮನೆಗಳು ಹಾನಿಗೊಳಗಾಗಿದ್ದವು ಮತ್ತು ಮಳೆಗಾಲದ ಆರಂಭದಲ್ಲಿ ಮನೆಗಳಲ್ಲಿ ಮತ್ತೆ ಬಿರುಕು ಕಾಣಿಸಿಕೊಳ್ಳುತ್ತಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ