ಡಿಕೆಶಿ ಅಕ್ರಮ ಆಸ್ತಿ ಕೇಸ್‌ : ವಿಚಾರಣೆ ಜು21ಕ್ಕೆ ಮುಂದೂಡಿಕೆ

ಬೆಂಗಳೂರು: 

     ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ತಮ್ಮ ವಿರುದ್ಧ ಸಿಬಿಐ ದಾಖಲಿಸಿರುವ ಎಫ್‌ಐಆರ್  ರಾಜ್ಯ ಕಾಂಗ್ರೆಸ್ ಅಧ್ಯಕ್ಷರು ಪ್ರಶ್ನಿಸಿದ್ದಾರೆ.  ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಗುರುವಾರ ಜುಲೈ 21 ಕ್ಕೆ ಮುಂದೂಡಿದೆ. 

    ಮುಚ್ಚಿದ ಲಕೋಟೆಯ ವಿಷಯಗಳನ್ನು ಬಹಿರಂಗಪಡಿಸದಂತೆ ನ್ಯಾಯಾಲಯ ಇಂದು ಸಿಬಿಐಗೆ ತಡೆ ನೀಡಿತು. ಸಿಬಿಐ ವಕೀಲ ಪಿ ಪ್ರಸನ್ನ ಕುಮಾರ್ ಅವರು ಆಪಾದಿತನ ಅಕ್ರಮ ಆಸ್ತಿಯ ಅಂದಾಜು ಮೊತ್ತವನ್ನು ನ್ಯಾಯಾಲಯಕ್ಕೆ ಸಲ್ಲಿಸಲು ಬಯಸಿದ್ದರು. ಆದಾಗ್ಯೂ, ಕೇಂದ್ರೀಯ ತನಿಖಾ ಸಂಸ್ಥೆ ಈಗಾಗಲೇ ಮುಚ್ಚಿದ ಲಕೋಟೆಯಲ್ಲಿ ಈ  ವಿವರಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಿದೆ ಎಂದು ನ್ಯಾಯಮೂರ್ತಿ ಕೆ ನಟರಾಜನ್ ಹೇಳಿದರು. 

  ಶಿವಕುಮಾರ್  2013ರಿಂದ 2018ರ ನಡುವೆ ಅಕ್ರಮ ಆಸ್ತಿ ಹೊಂದಿದ್ದಾರೆ ಎಂದು ಸಿಬಿಐ ಆರೋಪಿಸಿದೆ. ಈ ಸಂಬಂಧ ಸೆಪ್ಟೆಂಬರ್ 3 ರಂದು ಸಿಬಿಐ ಎಫ್ ಐಆರ್ ದಾಖಲಿಸಿತ್ತು. ಇದನ್ನು ಶಿವಕುಮಾರ್ 2021ರಲ್ಲಿ  ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು. ನಮೂನೆ 126 ಮಾದರಿಯಲ್ಲಿ ಸಂಗ್ರಹಿಸಲಾದ 11 ಸಂಪುಟ, 2,412 ಪುಟಗಳ ವಿವರಗಳನ್ನು ಹೊರತುಪಡಿಸಿ 596 ಹೆಚ್ಚುವರಿ ದಾಖಲೆಗಳನ್ನು ಸಂಗ್ರಹಿಸಿರುವುದಾಗಿ ಸಿಬಿಐ ನ್ಯಾಯಾಲಯಕ್ಕೆ ಸಲ್ಲಿಸಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap