2 ದಿನಗಳಲ್ಲಿ ಗೊಂದಲ ಬಗೆಹರಿಯಲಿದೆ: ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ
     ಎರಡು ದಿನಗಳಲ್ಲಿ ಭಿನ್ನಮತದ ಸಮಸ್ಯೆ ಬಗೆಹರಿಯಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.ಅವರು ಇಂದು ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

      ಶಾಸಕ ನೆಹರೂ ಓಲೇಕಾರ್ ಮಾಡಿರುವ ಆರೋಪಗಳಿಗೆ ಪ್ರತಿಕ್ರಿಯೆ ನೀಡಿ ಅವರು ಆರೋಪಗಳಿಗೆ ದಾಖಲೆ ಕೊಡಲಿ‌. ನೆಹರೂ ಒಲೆಕಾರ್ ಅವರಿಗೆ ಪ್ರಕರಣವೊಂದರಲ್ಲಿ ಅಪರಾಧ ಸಾಬೀತಾಗಿದೆ ಎಂದರು.

ಬಹುಮತದ ದೊರೆಯುವ ಆತ್ಮವಿಶ್ವಾಸ

    ಇಂದು ಇಡೀ ದಿನ ಕ್ಷೇತ್ರದಲ್ಲಿ ಇರುವುದಾಗಿ ತಿಳಿಸಿದ ಅವರು, ರಾಜ್ಯದಲ್ಲಿ ಚುನಾಚಣೆ ಕಣ ಸಿದ್ದವಾಗಿದೆ. ಸಂಪೂರ್ಣ ಬಹುಮತ ದೊರೆಯಲಿದೆ ಎಂಬ ಆತ್ಮವಿಶ್ವಾಸ ನಮಗಿದೆ ಎಂದರು. ಉಳಿದ ಕ್ಷೇತ್ರಗಳಿಗೆ ಇನ್ನೆರಡು ದಿನಗಳಲ್ಲಿ ಕೇಂದ್ರ ಚುನಾವಣೆ ಸಮಿತಿ ತೀರ್ಮಾನ ಮಾಡಲಿದ್ದು, ಹನ್ನೆರಡು ಕ್ಷೇತ್ರಗಳ ಬಗ್ಗೆ ಚರ್ಚೆಯಾಗಿದೆ ಎಂದರು.

ಜಗದೀಶ್ ಶೆಟ್ಟರ್ ಮನವೊಲಿಕೆ ಪ್ರಯತ್ನ

     ಜಗದೀಶ ಶೆಟ್ಟರ್ ಅವರ ಮನವೊಲಿಕೆಗೆ ಇಂದಿಗೂ ಪ್ರಯತ್ನ ನಡೆಯುತ್ತಿದ್ದು, ನಿನ್ನೆ ಧರ್ಮೇಂದ್ರ ಪ್ರಧಾನ ಅವರ ಬಳಿ ಚರ್ಚೆ ಮಾಡಲಾಗಿದೆ ಎಂದರು.

ಜಗದೀಶ್ ಶೆಟ್ಟರ್ ಅವರನ್ನು ಉಳಿಸಿಕೊಳ್ಳುವ ವಿಶ್ವಾಸ

     ಜಗದೀಶ್ ಶೆಟ್ಟರ್ ಅವರದ್ದು, ಜನಸಂಘ ಕಾಲದ ಮನೆತನ. ಬಿಜೆಪಿಗೆ ಅವರು ಅತ್ಯಂತ ನಿಷ್ಠರು.
ಉತ್ತರ ಕರ್ನಾಟಕ ಭಾಗಕ್ಕೆ ಅತ್ಯಂತ ಅವಶ್ಯಕವಾಗಿದ್ದಾರೆ. ಅತ್ಯಂತ ಅವಶ್ಯ ಇರೋ ನಾಯಕ.ಅವರನ್ನು ಉಳಿಸಿಕೊಳ್ಳಬೇಕೆಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರೊಂದಿಗೆ ಮಾತನಾಡಿದ್ದು, ಅವರನ್ನು ಉಳಿಸಿಕೊಳ್ಳುವ ವಿಶ್ವಾಸ ಇದೆ ಎಂದರು.

ಸುಳ್ಳು ವದಂತಿ

       ಶೆಟ್ಟರ್ ಅವರಿಗೆ ಟಿಕೆಟ್ ತಪ್ಪಲು ಸಿಎಂ ಅವರೇ ಕಾರಣ ಎಂಬ ಆರೋಪದ ಬಗ್ಗೆ ಪ್ರತಿಕ್ರಿಯೆ
ನೀಡಿದ ಮುಖ್ಯಮಂತ್ರಿಗಳು ಇದು ಸುಳ್ಳು ವದಂತಿ. ಯಾರೂ ಅದನ್ನು ಹೇಳಬಾರದು ಅತ್ಯಂತ ಪ್ರಾಮಾಣಿಕವಾಗಿ ಶೆಟ್ಟರ್ ಉಳಿಸಿಕೊಳ್ಳುವ ಪ್ರಯತ್ನ ಮಾಡಿದ್ದೇವೆ. ಹೇಳುವವರು ನೂರಾರು ಹೇಳುತ್ತಾರೆ. ಶೆಟ್ಟರ್ ಮತ್ತು ನಾವು ಆತ್ಮೀಯರು ಎಂದರು.

ಚುನಾವಣೆ ಒಂದು ಸವಾಲು ಕಾಂಗ್ರೆಸ್ ಗೆ ಚುನಾವಣೆ ಗೆಲ್ಲುವ ಶಕ್ತಿ ಇಲ್ಲ. ಚುನಾವಣೆ ಅಂದರೆ ಒಂದು ಸವಾಲು ಎಂದು ತಿಳಿಸಿದರು

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ whatsapp group   ಸೇರಿರಿ

 

Recent Articles

spot_img

Related Stories

Share via
Copy link
Powered by Social Snap