ರಾಜಸ್ಥಾನ ವಿಧಾನ ಸಭೆ ಚುನಾವಣೆ : ಕರಣ್‌ ಪುರ್‌ ಕಾಂಗ್ರೆಸ್‌ ಅಭ್ಯರ್ಥಿ ನಿಧನ….!

ಜೈಪುರ:

      ರಾಜಸ್ಥಾನದ ಕರಣ್‌ಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಗುರ್‌ಮೀತ್‌ ಸಿಂಗ್‌ ಕೂನರ್‌ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು.ಮೂತ್ರಪಿಂಡ ಸಮಸ್ಯೆ ಹಾಗೂ ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದ ಅವರು ಏಮ್ಸ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆಗೆ ಸ್ಪಂದಿಸದೇ ಗುರ್‌ಮೀತ್‌ ಸಿಂಗ್‌ ಮೃತಪಟ್ಟರು ಎಂದು ವೈದ್ಯರು ಹೇಳಿದ್ದಾರೆ.

    ಗುರ್‌ಮೀತ್‌ ಸಿಂಗ್‌ ಕೂನರ್‌ ನಿಧನವನ್ನು ಕಾಂಗ್ರೆಸ್‌ ಪಕ್ಷದ ಮೂಲಗಳು ಖಚಿತಪಡಿಸಿದ್ದು ಯಾವುದೇ ಹೇಳಿಕೆ ನೀಡಿಲ್ಲ.  200 ಕ್ಷೇತ್ರಗಳಿರುವ ರಾಜಸ್ಥಾನ ವಿಧಾನಸಭೆಗೆ ನವೆಂಬರ್ 25 ರಂದು ಚುನಾವಣೆ ನಡೆಯಲಿದೆ.

   ಕರಣ್‌ಪುರದ ಹಾಲಿ ಶಾಸಕರಾಗಿದ್ದ ಕೂನರ್ ಅವರನ್ನು ನವೆಂಬರ್ 12 ರಂದು ದೆಹಲಿಯ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (ಎಐಐಎಂಎಸ್) ನ ಜೆರಿಯಾಟ್ರಿಕ್ ಮೆಡಿಸಿನ್ ವಾರ್ಡ್‌ಗೆ ದಾಖಲಿಸಲಾಗಿತ್ತು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap