ಬೆಂಗಳೂರು:
ದೇಶದ ಜನತೆ ಕಾಂಗ್ರೆಸ್ ಪಕ್ಷವನ್ನು ನಿರ್ಲಕ್ಷಿಸಿದ್ದಾರೆ ಎಂಬ ಕಾರಣಕ್ಕಾಗಿ ರಾಹುಲ್ ಗಾಂಧಿ ವಿದೇಶದ ನೆಲದಲ್ಲಿ ದೇಶದ ಕುರಿತು ಪ್ರಶ್ನೆಗಳನ್ನು ಎತ್ತಿದ್ದಾರೆ. ವಿದೇಶದಲ್ಲಿ ಭಾರತದ ವಿರುದ್ಧ ಮಾತನಾಡುತ್ತಿ ರುವ ರಾಹುಲ್ ಗಾಂಧಿಯವರು, ತಮ್ಮ ಅಜ್ಜಿ ಇಂದಿರಾಗಾಂಧಿ ತುರ್ತು ಪರಿಸ್ಥಿತಿಯನ್ನು ಜಾರಿಗೆ ತಂದಿದ್ದನ್ನು ಸ್ಮರಿಸಿಕೊಳ್ಳಬೇಕು ಎಂದು ತಿರುಗೇಟು ನೀಡಿದರು.
ಲಂಡನ್ ನಲ್ಲಿ ಭಾರತೀಯ ಪ್ರಜಾಪ್ರಭುತ್ವದ ಬಗ್ಗೆ ಹೇಳಿಕೆ ನೀಡಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಅವರು ವಾಗ್ದಾಳಿ ನಡೆಸಿದ್ದಾರೆ.
ಚಿತ್ರದುರ್ಗ ಜಿಲ್ಲೆಯಲ್ಲಿ ಸಾರ್ವಜನಿಕ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, “ಕಾಂಗ್ರೆಸ್ ಮತ್ತು ರಾಹುಲ್ ಗಾಂಧಿಯವರ ಕ್ರಮಗಳು ಅತ್ಯಂತ ಖಂಡನೀಯ. ಜನರನ್ನು ವಿಭಜಿಸುವುದಷ್ಟೇ ಕಾಂಗ್ರೆಸ್’ಗೆ ಗೊತ್ತು. ಪ್ರಸ್ತುತ ದೇಶದಲ್ಲಿ ಅಪಾಯದಲ್ಲಿರುವುದು ಕಾಂಗ್ರೆಸ್ ಪಕ್ಷವೇ ಹೊರತು ಪ್ರಜಾಪ್ರಭುತ್ವವಲ್ಲ ಎಂದು ಹೇಳಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ