ಜನರ ಸಲಹೆ ಪಡೆದು ಬಜೆಟ್ ಮಂಡನೆ

ಗುಬ್ಬಿ

    ಸಾರ್ವಜನಿಕರಿಂದ ಸಲಹೆಗಳನ್ನು ಪಡೆದುಕೊಂಡು ಪಟ್ಟಣದ ಅಭಿವೃದ್ಧಿಗೆ ಪೂರಕವಾಗಿರುವ ಬಜೆಟ್ ಮಂಡಿಸಲಾಗುವುದು ಎಂದು ಪಪಂ ಅಧ್ಯಕ್ಷ ಜಿ.ಎನ್.ಅಣ್ಣಪ್ಪಸ್ವಾಮಿ ತಿಳಿಸಿದರು. ಪಪಂಯಲ್ಲಿ ಬುಧವಾರ ಏರ್ಪಡಿಸಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಪಟ್ಟಣದಲ್ಲಿ ಮೂಲಭೂತ ಸೌಕರ್ಯ ಒದಗಿಸಲು ಹೆಚ್ಚಿನ ಆದ್ಯತೆ ನೀಡಲಾಗುವುದು. ಜೊತೆಗೆ ವ್ಯವಸ್ಥಿತವಾಗಿ ತೆರಿಗೆ ವಸೂಲಿ ಮಾಡುವ ಮೂಲಕ ಆದಾಯದ ಮೂಲಕ್ಕೆ ಹೆಚ್ಚಿನ ಒತ್ತು ನೀಡಲಾಗುವುದು ಎಂದು ತಿಳಿಸಿದರು.

    ಪಪಂ ಸದಸ್ಯ ಶಿವಕುಮಾರ್ ಮಾತನಾಡಿ, ಪಟ್ಟಣದ ಎಂಜಿ ರಸ್ತೆಯಲ್ಲಿ ನಡೆಯುತ್ತಿರುವ ರಸ್ತೆ ಕಾಮಗಾರಿಯ ವೀಕ್ಷಣೆಯನ್ನು ಸಂಬAಧಪಟ್ಟ ಇಂಜಿನಿಯರ್ ಹಾಗೂ ಮುಖ್ಯಾಧಿಕಾರಿಗಳು ವ್ಯವಸ್ಥಿತವಾಗಿ ನಿರ್ವಹಿಸುತ್ತಿಲ್ಲ ಆಕ್ರೋಶ ವ್ಯಕ್ತಪಡಿಸಿದರು.

   ಸಾರ್ವಜನಿಕರು ಮಾತನಾಡಿ, ಪಪಂಯು ವ್ಯವಸ್ಥಿತ ಯೋಜನೆ ರೂಪಿಸಿಕೊಂಡು ಕಂದಾಯ ವಸೂಲಿ ಮಾಡಿದಲ್ಲಿ ಮಾತ್ರ ಆದಾಯವನ್ನು ಹೆಚ್ಚಿಸಿಕೊಂಡು ಅಭಿವೃದ್ಧಿ ಕಾರ್ಯಗಳನ್ನು ಮಾಡಲು ಸಾಧ್ಯವಾಗುತ್ತದೆ. ಪಪಂ ಈ ಬಗ್ಗೆ ಗಮನಹರಿಸುವ ಅಗತ್ಯವಿದೆ ಎಂದು ಆಗ್ರಹಿಸಿದರು. ಚರ್ಚಿತ ವಿಷಯಗಳು ಜಾರಿಗೆ ಬಂದಲ್ಲಿ ಮಾತ್ರ ಸಭೆಗಳು ಯಶಸ್ವಿಯಾಗುತ್ತವೆ. ಇಲ್ಲವಾದಲ್ಲಿ ಕಡತದಲ್ಲೆ ಉಳಿದು ಪ್ರಯೋಜನಕ್ಕೆ ಬರುವುದಿಲ್ಲ ಎಂದು ನಾಗರಿಕರು ಅಭಿಪ್ರಾಯಪಟ್ಟರು.

    ಪಟ್ಟಣದ ಅನೇಕ ಸಮುದಾಯದವರಿಗೆ ಅಗತ್ಯವಿರುವ ಸ್ಮಶಾನ, ಆಟೋ ಚಾಲಕರಿಗೆ ಜಾಗ ಒದಗಿಸಿ ಕೊಡುವ ಬಗ್ಗೆ ಅರ್ಜಿ ಸಲ್ಲಿಕೆಯಾಗಿದ್ದು, ಸಭೆಯಲ್ಲಿ ಚರ್ಚಿಸಿ ಸೂಕ್ತ ನಿರ್ಧಾರ ತೆಗೆದುಕೊಳ್ಳುವುದಾಗಿ ಅಧ್ಯಕ್ಷ ಅಣ್ಣಪ್ಪಸ್ವಾಮಿ ತಿಳಿಸಿದರು.ನಾಮಿನಿ ಸದಸ್ಯ ಜಿ.ಆರ್.ಪ್ರಕಾಶ್, ಮುಖ್ಯಾಧಿಕಾರಿ ಮಂಜುಳಾದೇವಿ, ಮುಖಂಡರಾದ ಶಂಕರ್ ಕುಮಾರ್, ಮಂಜುನಾಥ್, ಪಪಂ ಸಿಬ್ಬಂದಿ, ಅಧಿಕಾರಿಗಳು ಹಾಗೂ ನಾಗರಿಕರು ಹಾಜರಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap