ಬೆಂಗಳೂರು:
ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 57,982 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿವೆ.
ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಕುರಿತು ಮಾಹಿತಿ ನೀಡಿದ್ದು, ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ ಕೋವಿಡ್-19 ದೃಢಪಟ್ಟ 57,982 ಹೊಸ ಪ್ರಕರಣಗಳು ದಾಖಲಾಗಿವೆ ಹಾಗೂ ಇದೇ ಅವಧಿಯಲ್ಲಿ 941 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ.
Spike of 57,982 cases and 941 deaths reported in India, in the last 24 hours.
The #COVID19 tally in the country rises to 26,47,664 including 6,76,900 active cases, 19,19,843 discharged/migrated & 50,921 deaths: Ministry of Health and Family Welfare pic.twitter.com/Ihs6ueNBST
— ANI (@ANI) August 17, 2020
ಒಟ್ಟಾರೆ ಕೊರೊನಾ ಪ್ರಕರಣಗಳ ಸಂಖ್ಯೆ 26,47,664ಕ್ಕೆ ಏರಿಕೆಯಾಗಿದೆ. ಇದರಲ್ಲಿ ಸದ್ಯ 6,76,900 ಜನರು ಚಿಕಿತ್ಸೆ ಪಡೆಯುತ್ತಿದ್ದು, ಒಟ್ಟಾರೆ 19,19,843 ಜನರು ಸೋಂಕಿನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ