ಕೊವಿಡ್‌-19 : ದೇಶದಲ್ಲಿ 4091ಕ್ಕೆ ಏರಿಕೆಯಾಯ್ತು ಕೊವಿಡ್‌ ಪ್ರಕರಣಗಳ ಸಂಖ್ಯೆ…!

ನವದೆಹಲಿ: 

    ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 797 ಹೊಸ ಕೋವಿಡ್-19 ಪ್ರಕರಣಗಳು ದಾಖಲಾಗಿವೆ. ಈ ಮೂಲಕ ಸಕ್ರಿಯ ಪ್ರಕರಣಗಳ ಸಂಖ್ಯೆ 4,091ಕ್ಕೆ ಏರಿಕೆಯಾಗಿದೆ ಎಂದು  ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ ಮಾಹಿತಿ ನೀಡಿದೆ. 

    ಮುಂಜಾನೆ 8 ಗಂಟೆಗೆ ಲಭ್ಯವಾದ ಅಧಿಕೃತ ಮಾಹಿತಿ ಪ್ರಕಾರ, ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ ಐದು ಮಂದಿ ಕೊರೊನಾವೈರಸ್ ಸೋಂಕಿನಿಂದ ಮೃತಪಟ್ಟಿದ್ದಾರೆ. ಈ ಪೈಕಿ ಕೇರಳದಲ್ಲಿ ಇಬ್ಬರು, ಮಹಾರಾಷ್ಟ್ರ, ಪುದುಚೇರಿ ಮತ್ತು ತಮಿಳುನಾಡು ತಲಾ ಒಬ್ಬರು ಸಾವಿಗೀಡಾಗಿದ್ದಾರೆ.

    2020ರ ಆರಂಭದಲ್ಲಿ ಸಾಂಕ್ರಾಮಿಕ ರೋಗ ಕಾಣಿಸಿಕೊಂಡಿತು. ಕಳೆದ ನಾಲ್ಕು ವರ್ಷಗಳಲ್ಲಿ ದೇಶದಾದ್ಯಂತ ಒಟ್ಟು ಸೋಂಕು ಪ್ರಕರಣಗಳ ಸಂಖ್ಯೆ 4,50,10,944ಕ್ಕೆ ಏರಿಕೆಯಾಗಿದ್ದು, ಈವರೆಗೆ ಮೃತಪಟ್ಟವರ ಸಂಖ್ಯೆ 5,33,351ಕ್ಕೆ ಏರಿದೆ. 

    ಸಚಿವಾಲಯದ ವೆಬ್‌ಸೈಟ್ ಪ್ರಕಾರ, ಸೋಂಕಿನಿಂದ ಚೇತರಿಸಿಕೊಂಡ ಜನರ ಸಂಖ್ಯೆ 4.4 ಕೋಟಿಗೂ ಹೆಚ್ಚಿದ್ದು, ರಾಷ್ಟ್ರೀಯ ಕೋವಿಡ್ ಚೇತರಿಕೆ ದರ ಶೇ 98.81 ರಷ್ಟಿದೆ. ದೇಶದಲ್ಲಿ ಇದುವರೆಗೆ 220.67 ಕೋಟಿ ಮಂದಿಗೆ ಕೋವಿಡ್ ಲಸಿಕೆ ನೀಡಲಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link
Powered by Social Snap